
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿಶ್ವ ಗಾಣಿಗ ಟ್ರಸ್ಟ್‌ಗೆ ಅನುದಾನ ಬಿಡುಗಡೆ ಮಾಡದಿರುವ ಬಗ್ಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ವಿರುದ್ಧ ವಿಶ್ವ ಗಾಣಿಗ ಸಮುದಾಯದ ಪೂರ್ಣಾನಂದಪುರಿ ಸ್ವಾಮಿಗಳು ಆರೋಪ ಮಾಡಿದ ನಂತರ, ವಿರೋಧ ಪಕ್ಷ ಬಿಜೆಪಿ ಮಂಗಳವಾರ ವಿರೋಧ ಪಕ್ಷ ಬಿಜೆಪಿ ಈ ಆರೋಪ ಮಾಡಿದೆ.
ಥೈಲೇಶ್ವರ ಗಾಣಿಗ ಮಹಾಸಂಸ್ಥಾನ ಮಠ ಟ್ರಸ್ಟ್ ನ್ನು ನಡೆಸುತ್ತಿದ್ದು ಶ್ರೀಗಳು ಅದರ ಮುಖ್ಯಸ್ಥರಾಗಿದ್ದಾರೆ. ಕಳೆದ ವರ್ಷ ಬಜೆಟ್‌ನಲ್ಲಿ ಘೋಷಿಸಲಾದ ಅನುದಾನಗಳನ್ನು ಸಚಿವರು ಬಿಡುಗಡೆ ಮಾಡುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. ಒಂದೆಡೆ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಉನ್ನತಿಯ ಬಗ್ಗೆ ಮಾತನಾಡುತ್ತಿದ್ದರೆ, ಮತ್ತೊಂದೆಡೆ ತಾರತಮ್ಯ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಮತ ಮತ್ತು ಅಧಿಕಾರದ ವಿಷಯದಲ್ಲಿ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಹೆಸರನ್ನು ತೆಗೆದುಕೊಳ್ಳುತ್ತಾರೆ. ಆದರೆ ವಾಸ್ತವದಲ್ಲಿ ಅವರು ಹಿಂದುಳಿದ ಸಮುದಾಯಗಳನ್ನು ನಿರ್ಲಕ್ಷಿಸುತ್ತಿದ್ದಾರೆ. ಗಾಣಿಗ ಸಮುದಾಯವು ಅತ್ಯಂತ ಹಿಂದುಳಿದ ವರ್ಗಗಳ ಸಮುದಾಯದ ಅಡಿಯಲ್ಲಿ ಬರುತ್ತದೆ.
ವಿಶ್ವ ಗಾಣಿಗ ಸಮುದಾಯ ಟ್ರಸ್ಟ್‌ಗೆ ಹಂಚಿಕೆಯಾಗಬೇಕಾದ ಅನುದಾನವನ್ನು ತಡೆಹಿಡಿಯಲಾಗಿದೆ, ಇದು ದುರದೃಷ್ಟಕರ ಸಂಗತಿ ಎಂದು ಹೇಳಿದ್ದಾರೆ. ಸಚಿವ ತಂಗಡಗಿ ಈ ಟ್ರಸ್ಟ್‌ಗೆ ಅನುದಾನ ಸಿಗದಂತೆ ಅಡ್ಡಿಪಡಿಸುತ್ತಿದ್ದಾರೆ. ಇದು ಕಾಂಗ್ರೆಸ್ ಸರ್ಕಾರದ ನಿಜವಾದ ಮುಖವನ್ನು ತೋರಿಸುತ್ತದೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.
ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದಾಗ, ಸನ್ಯಾಸತ್ವ ಸ್ವೀಕರಿಸುವ ಮೊದಲು ಪೂರ್ಣಾನಂದಪುರಿ ಸ್ವಾಮೀಜಿಯವರು ಸಹಕಾರ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಅವರ ಪೂರ್ವನಾಮ ಬಿಜೆ ಪುಟ್ಟಸ್ವಾಮಿ ಎಂದಾಗಿತ್ತು. ಗಾಣಿಗ ಸಮುದಾಯದ ಉನ್ನತಿಗಾಗಿ ಕೆಲಸ ಮಾಡಿದ್ದರು. ಆದರೆ ಇಂದಿನ ಕಾಂಗ್ರೆಸ್ ಸರ್ಕಾರ ಆ ಸಮುದಾಯದ ಉದ್ದಾರಕ್ಕೆ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ದೂರಿದರು.
Advertisement