Shivasri And tejaswi surya
ಶಿವಶ್ರೀ ಮತ್ತು ತೇಜಸ್ವಿ ಸೂರ್ಯ

ಮಾರ್ಚ್ 6ರಂದು ಶಿವಶ್ರೀ ಜೊತೆ ಸಂಸದ ತೇಜಸ್ವಿ ಸೂರ್ಯ ವಿವಾಹ

ಮಾರ್ಚ್‌ 5 ಮತ್ತು 6ರಂದು ಬೆಂಗಳೂರಿನಲ್ಲಿ ಇವರ ವಿವಾಹ ಸಮಾರಂಭ ನೆರವೇರಲಿದೆ. ಕನಕಪುರ ರಸ್ತೆಯಲ್ಲಿರುವ ಖಾಸಗಿ ರೆಸಾರ್ಟ್‍ವೊಂದರಲ್ಲಿ ಇವರ ಮದುವೆ ನಡೆಯಲಿದೆ ಎಂದು ತಿಳಿದುಬಂದಿದೆ.
Published on

ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರ ಜೊತೆ ಹಸೆಮಣೆ ಏರಲಿದ್ದಾರೆ. ಮಾರ್ಚ್ 9ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ತಮಿಳುನಾಡು ಮೂಲದ ಶಿವಶ್ರೀ ಅವರು ಈಗಾಗಲೇ ಗಾಯನದಿಂದ ಖ್ಯಾತರಾಗಿದ್ದಾರೆ.

ಮಾರ್ಚ್‌ 5 ಮತ್ತು 6ರಂದು ಬೆಂಗಳೂರಿನಲ್ಲಿ ಇವರ ವಿವಾಹ ಸಮಾರಂಭ ನೆರವೇರಲಿದೆ. ಕನಕಪುರ ರಸ್ತೆಯಲ್ಲಿರುವ ಖಾಸಗಿ ರೆಸಾರ್ಟ್‍ವೊಂದರಲ್ಲಿ ಇವರ ಮದುವೆ ನಡೆಯಲಿದೆ ಎಂದು ತಿಳಿದುಬಂದಿದೆ.

ಮದುವೆ ಸಮಾರಂಭ ಮುಗಿದ ಬಳಿಕ ಮಾರ್ಚ್‌ 9ರಂದು (ಭಾನುವಾರ) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಅದ್ಧೂರಿ ಆರತಕ್ಷತೆ ಸಮಾರಂಭ ಕೂಡ ನಡೆಯಲಿದೆ. ಅಂದು ಬೆಳಿಗ್ಗೆ 10.30ರಿಂದ ಆರತಕ್ಷತೆ ಕಾರ್ಯಕ್ರಮ ನಡೆಯಲಿದ್ದು, ರಾಜಕೀಯ ಗಣ್ಯರು ಆಗಮಿಸಲಿದ್ದಾರೆ.

ಕಳೆದ ಹಲವು ದಿನಗಳಿಂದ ಎರಡೂ ಕುಟುಂಬಗಳ ನಡುವೆ ಮಾತುಕತೆ ನಡೆದು ವಿವಾಹ ತೀರ್ಮಾನಿಸಲಾಗಿತ್ತು. ಇತ್ತೀಚೆಗೆ ಆರ್ಟ್ ಆಫ್ ಲಿವಿಂಗ್‌ನಲ್ಲಿ ನಡೆದ ಕಾರ್ಯಕ್ರಮದ ವೇಳೆ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದರು. ಶಿವಶ್ರೀ ಅವರು ಗಾಯನವಲ್ಲದೆ ಭರತನಾಟ್ಯ ಕಲಾವಿದೆಯಾಗಿದ್ದಾರೆ. ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಪದವಿಯನ್ನೂ ಗಳಿಸಿದ್ದಾರೆ.

Shivasri And tejaswi surya
HAL ನಿರ್ಮಿತ ಸ್ವದೇಶಿ ತರಬೇತಿ ವಿಮಾನದಲ್ಲಿ ತೇಜಸ್ವಿ ಸೂರ್ಯ ಹಾರಾಟ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com