ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಮತ್ತೆ ಏರುಪೇರು: ಚೆನ್ನೈ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಹೆಚ್ಚಿನ ತಪಾಸಣೆಗಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ಕುಮಾರಸ್ವಾಮಿಯವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಆಸ್ಪತ್ರೆಯಲ್ಲಿ ಇಂದು ವೈದ್ಯರು ತಪಾಸಣೆ ನಡೆಸಿದ ನಂತರ ಅಗತ್ಯಬಿದ್ದರೆ ದಾಖಲಾಗಬಹುದು ಎಂದು ಮೂಲಗಳಿಂದ ತಿಳಿದುಬಂದಿದೆ.
ಕೆಲಸದ ಒತ್ತಡ, ನಿರಂತರ ಪ್ರವಾಸಗಳಿಂದಾಗಿ ಅನಾರೋಗ್ಯಕ್ಕೆ ತುತ್ತಾಗಿರಬಹುದು ಎಂದು ಹೇಳಲಾಗುತ್ತಿದೆ. ಕಳೆದ ವರ್ಷ ಲೋಕಸಭೆ ಚುನಾವಣೆಗೆ ಮುನ್ನ ಕುಮಾರಸ್ವಾಮಿಯವರು ಚೆನ್ನೈ ಅಪೊಲೋ ಆಸ್ಪತ್ರೆಯಲ್ಲಿ ಹೃದಯಕ್ಕೆ ಸಂಬಂಧಿಸಿ ಚಿಕಿತ್ಸೆ ಪಡೆದುಕೊಂಡು ಸ್ವಲ್ಪ ದಿನ ವಿಶ್ರಾಂತಿ ಪಡೆದು ನಂತರ ರಾಜಕೀಯ ಚಟುವಟಿಕೆಗಳಿಗೆ ಮರಳಿದ್ದರು.
ಕಳೆದ ನಾಲ್ಕು ದಿನಗಳಿಂದ ಕುಮಾರಸ್ವಾಮಿ ಆರೋಗ್ಯದಲ್ಲಿ ಕೊಂಚ ಏರುಪೇರು ಉಂಟಾಗಿತ್ತು. ಹೀಗಾಗಿ ಚೆನ್ನೈಗೆ ತೆರಳಿ ಸೂಕ್ತ ಚಿಕಿತ್ಸೆ ಪಡೆದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ