ಮುಂಗಾರು ಪೂರ್ವದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆ ಸಾಧ್ಯತೆ; ಫೆಬ್ರವರಿಯಲ್ಲಿ ಹೆಚ್ಚು ತಾಪಮಾನ!

ಈ ಫೆಬ್ರವರಿಯಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 2.5 ಡಿಗ್ರಿ ಸೆಲ್ಸಿಯಸ್ ಹೆಚ್ಚಿದೆ. ಆದರೆ ಮುಂಗಾರು ಪೂರ್ವದಲ್ಲಿ ಸರಾಸರಿಗಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.
ಸಂಪುಟ ಉಪಸಮಿತಿ ಸಭೆ
ಸಂಪುಟ ಉಪಸಮಿತಿ ಸಭೆ
Updated on

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಈ ಫೆಬ್ರವರಿಯಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 2.5 ಡಿಗ್ರಿ ಸೆಲ್ಸಿಯಸ್ ಹೆಚ್ಚಿದೆ. ಆದರೆ ಮುಂಗಾರು ಪೂರ್ವದಲ್ಲಿ ಸರಾಸರಿಗಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.

ಇಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ 2025ನೇ ಸಾಲಿನ ಹಿಂಗಾರು -ಮುಂಗಾರು ಮಳೆ ಸ್ಥಿತಿ, ಕೃಷಿ, ಕುಡಿಯುವ ನೀರು, ಹವಾಮಾನ ಹಾಗೂ ಅಣೆಕಟ್ಟೆಗಳಲ್ಲಿನ ನೀರಿನ ಮಟ್ಟದ ಕುರಿತು ಚರ್ಚಿಸಲಾಯಿತು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಈ ಸಭೆಯಲ್ಲಿ ಭಾಗವಹಿಸಿದ್ದರು.

"ಪೂರ್ವ ಮಾನ್ಸೂನ್ ಋತುವಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಉತ್ತಮ ಮಳೆಯಾಗುತ್ತದೆ. ಫೆಬ್ರವರಿ ಮತ್ತು ಮಾರ್ಚ್ ಕೊನೆಯ ವಾರದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯೂ ಇದೆ. ಆದಾಗ್ಯೂ, ಹಿಂಗಾರಿನಲ್ಲಿ ಮಳೆ ಸರಾಸರಿಗಿಂತ ಕಡಿಮೆಯಾಗಿದೆ ಮತ್ತು ಅಕ್ಟೋಬರ್ ನಿಂದ ಡಿಸೆಂಬರ್ ವರೆಗೆ ಮಳೆ ಕಡಿಮೆಯಾಗುವ ನಿರೀಕ್ಷೆಯಿದೆ" ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ಸಂಪುಟ ಉಪಸಮಿತಿ ಸಭೆ
ಚಳಿಗಾಲ ಮುಗಿಯುವ ಮುನ್ನವೇ ತಾಪಮಾನ ಏರಿಕೆ, ಸುಡುಬಿಸಿಲಿನ ಅನುಭವ: ಈ ಬಾರಿ ಹೇಗಿರುತ್ತೆ ಬೇಸಿಗೆ? IMD ತಜ್ಞರು ಹೇಳೋದೇನು?

ಫೆಬ್ರವರಿಯಲ್ಲಿ ಈಗಾಗಲೇ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗಿದ್ದು, ಸರಾಸರಿಗಿಂತ 2.5 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಿದೆ. ಆದಾಗ್ಯೂ, ತಿಂಗಳ ಕೊನೆಯ ವಾರದಲ್ಲಿ ತಾಪಮಾನ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ವರದಿ ನೀಡಿದರು.

ನಂತರ, ರಾಜ್ಯಾದ್ಯಂತ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ನೋಡಿಕೊಳ್ಳುವಂತೆ ಮತ್ತು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಕಂದಾಯ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ವೇಳೆ ಪ್ರಮುಖ ಜಲಾಶಯಗಳಲ್ಲಿ ಪ್ರಸ್ತುತ ನೀರಿನ ಸಂಗ್ರಹವನ್ನು ಸಂಪುಟ ಉಪಸಮಿತಿ ಪರಿಶೀಲಿಸಿತು.

"ಕರ್ನಾಟಕದ 14 ಪ್ರಮುಖ ಜಲಾಶಯಗಳು ಪ್ರಸ್ತುತ 535.21 ಟಿಎಂಸಿ ನೀರನ್ನು ಹೊಂದಿದ್ದು, ಇದು ಸರಾಸರಿ ಸಂಗ್ರಹದ ಶೇಕಡಾ 60 ರಷ್ಟಿದೆ.

ಕಳೆದ ವರ್ಷ, ಇದೇ ಸಮಯದಲ್ಲಿ, ನೀರಿನ ಸಂಗ್ರಹವು 332.52 ಟಿಎಂಸಿ ಇತ್ತು" ಎಂದು ಕಂದಾಯ ಸಚಿವರ ಕಚೇರಿಯ ಪ್ರಕಟಣೆ ತಿಳಿಸಿದೆ.

ಕೆಲವು ಜಲಾಶಯಗಳಲ್ಲಿನ ನೀರಿನ ಮಟ್ಟ ಕಡಿಮೆಯಾಗಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಚಿವರು, ನೀರಾವರಿ ಅಗತ್ಯತೆಗಳು ಮತ್ತು ಭವಿಷ್ಯದ ಕುಡಿಯುವ ನೀರಿನ ಅಗತ್ಯಗಳನ್ನು ಪರಿಗಣಿಸಿ ಲಭ್ಯವಿರುವ ನೀರನ್ನು ಎಚ್ಚರಿಕೆಯಿಂದ ನಿರ್ವಹಿಸುವ ಅಗತ್ಯವನ್ನು ಒತ್ತಿ ಹೇಳಿದರು.

ಸಂಪುಟ ಉಪಸಮಿತಿ ಸಭೆ
ಬೇಸಿಗೆ ಆರಂಭಕ್ಕೂ ಮುನ್ನವೇ ಬೆಂಗಳೂರಿನಲ್ಲಿ ರಣ ಬಿಸಿಲು: ನೀರಿನ ಬವಣೆ ಎದುರಿಸಲು BWSSB ಸಜ್ಜು

ಕೆಲವೊಂದು ಜಲಾಶಯಗಳಲ್ಲಿ ನೀರಿನ ಮಟ್ಟ ತೃಪ್ತಿಕರವಾಗಿ ಇಲ್ಲದೆ ಇರುವ ಬಗ್ಗೆ ಅತಂಕ ವ್ಯಕ್ತಪಡಿಸಿದ ಸಚಿವರು, ಜಲಾನಯನ ಪ್ರದೇಶಗಳಲ್ಲಿನ ಬೆಳಗಳಿಗೆ ಅವಶ್ಯವಿರುವ ನೀರಿನ ಪ್ರಮಾಣ ಇತ್ಯಾದಿ ವಿಷಯಗಳನ್ನು ಗಮನದಲ್ಲಿರಿಸಿಕೊಂಡು ಮುಂಬರುವ ದಿನಗಳಲ್ಲಿ ಜಲಾಶಯಗಳ ನೀರಿನ ಮಟ್ಟ ಯಾವ ಮಟ್ಟ ತಲುಪಲಿದೆ, ಅದರಿಂದಾಗಿ ಕುಡಿಯುವ ನೀರಿಗಾಗಿ ಲಭ್ಯವಾಗಲಿರುವ ನೀರಿನ ಪ್ರಮಾಣವೆಷ್ಟು? ಈ ಕುರಿತು ಮುಂದಿನ ಸಭೆಗಳಲ್ಲಿ ಸ್ಪಷ್ಟ ಮಾಹಿತಿ ನೀಡುವಂತೆ ಜಲಸಂಪ್ಮೂಲ ಇಲಾಖೆಗೆ ಸೂಚಿಸಿದರು. ಕುಡಿಯುವ ನೀರಿಗೆ ಅವಶ್ಯವಿರುವ ನೀರನ್ನು ಕಾಯ್ದಿರಿಸಿದ ನಂತರವೇ ನೀರಾವರಿಗಾಗಿ ನೀರನ್ನು ಬಿಡುಗಡೆಗೊಳಿಸುವ ಕುರಿತು ಸಂಬಂಧಿತ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಪ್ರಸ್ತುತ ರಾಜ್ಯದ 5 ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು, ಬೆಂಗಳೂರು ನಗರ ಮತ್ತು ರಾಮನಗರ ಜಿಲ್ಲೆಗಳ 13 ತಾಲ್ಲೂಕುಗಳ ವ್ಯಾಪ್ತಿಯ 66 ಗ್ರಾಮಗಳಿಗೆ ದೀರ್ಘಕಾಲೀನ ಸಮಸ್ಯೆ ಹಾಗೂ ನೀರಿನ ಗುಣಮಟ್ಟದ ಸಮಸ್ಯೆಯಿಂದಾಗಿ ಬಾಡಿಗೆ ಟ್ಯಾಂಕರ್ ಮತ್ತು ಬೋರ್ವೆಲ್ಗಳ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಅದೇ ರೀತಿ ನಗರ ವ್ಯಾಪ್ತಿಗೆ ಸಂಬಂಧಿಸಿದಂತೆ 2 ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳ 5 ನಗರ ಸ್ಥಳೀಯ ಸಂಸ್ಥೆಗಳ 56 ವಾರ್ಡ್ಗಳಿಗೆ ಟ್ಯಾಂಕರ್ ಮತ್ತು ಬೋರ್ವೆಲ್ಗಳ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳ ಪಟ್ಟಿಯನ್ನು ಗುರಿತಿಸಲು ಸಭೆಯಲ್ಲಿ ಸೂಚನೆ ನೀಡಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com