ರಾಜ್ಯ

ಕರ್ನಾಟಕ ಅರಣ್ಯ ಪಡೆಗಳ ಮೊದಲ ಮಹಿಳಾ ಮುಖ್ಯಸ್ಥೆಯಾಗಿ ಮೀನಾಕ್ಷಿ ನೇಗಿ ನೇಮಕ

ಕರ್ನಾಟಕ ಅರಣ್ಯ ಪಡೆಗಳ ಮೊದಲ ಮಹಿಳಾ ಮುಖ್ಯಸ್ಥೆಯಾಗಿ ಮೀನಾಕ್ಷಿ ನೇಗಿ ನೇಮಕ
ಮೀನಾಕ್ಷಿ ನೇಗಿ
Published On :

ಬೆಂಗಳೂರು: ಕರ್ನಾಟಕ ಅರಣ್ಯ ಪಡೆಗಳ ಮೊದಲ ಮಹಿಳಾ ಮುಖ್ಯಸ್ಥೆಯಾಗಿ ಹಿರಿಯ ಐಎಫ್​ಎಸ್​ ಅಧಿಕಾರಿ ಮೀನಾಕ್ಷಿ ನೇಗಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

1989ರ ಬ್ಯಾಚ್​ನ ಕರ್ನಾಟಕ ಕೇಡರ್ ನ ಐಎಫ್​ಎಸ್​ ಅಧಿಕಾರಿಯಾಗಿರುವ ಮೀನಾಕ್ಷಿ ನೇಗಿ ಅವರನ್ನು ಅರಣ್ಯ ಪಡೆಗಳ ಮುಖ್ಯಸ್ಥರಾಗಿ ನೇಮಕ ಮಾಡಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇಂದು ಆದೇಶ ಹೊರಡಿಸಿದೆ.

ಮೀನಾಕ್ಷಿ ನೇಗಿ ಅವರು ಮೂಲತಃ ಉತ್ತರಾಖಂಡದವರಾಗಿದ್ದು, ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈಗ ಆ ಸೇವೆಯಿಂದ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಇದೀಗ ಕರ್ನಾಟಕದ ಅರಣ್ಯ ಪಡೆಗಳ ಮುಖ್ಯಸ್ಥರಾಗಿ ನೇಮಕ ಮಾಡಲಾಗಿದೆ.

ಕರ್ನಾಟಕ ಕೇಡರ್​ನ ಅಧಿಕಾರಿಯಾಗಿ 35 ವರ್ಷಗಳಿಂದ ಅವರು ಸೇವೆ ಸಲ್ಲಿಸುತ್ತಿದ್ದಾರೆ. ದಕ್ಷ ಅಧಿಕಾರಿಯೆಂದು ಹೆಸರು ಮಾಡಿರುವ ಮೀನಾಕ್ಷಿ ನೇಗಿ ಬಳ್ಳಾರಿ, ಚಿಕ್ಕಮಗಳೂರು, ಮಂಡ್ಯದಲ್ಲಿ ಡಿಸಿಎಫ್ ಆಗಿ ಕೆಲಸ ಮಾಡಿದ್ದಾರೆ. ಬಳಿಕ ಕೇಂದ್ರ ಸರ್ಕಾರದ ಸೇವೆಗೆ ನಿಯೋಜನೆಗೊಂಡ ಅವರು ಆಯುಷ್ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿದ್ದರು.

ಕಳೆದ 2 ವರ್ಷಗಳಿಂದ ಅವರು ಕೇಂದ್ರ ಮಹಿಳಾ ಆಯೋಗದ ಸದಸ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಮೀನಾಕ್ಷಿ ನೇಗಿ ಅವರ ಪತಿ ವಿಜಯ ಶರ್ಮಾ ಕೂಡ ಕರ್ನಾಟಕ ಕೇಡರ್​ನ ಐಎಫ್​ಎಸ್​ ಅಧಿಕಾರಿಯಾಗಿದ್ದರು ಮತ್ತು ಕಳೆದ ಜನವರಿಯಲ್ಲಿ ಸೇವೆಯಿಂದ ನಿವೃತ್ತರಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.