BMRCL
ನಮ್ಮ ಮೆಟ್ರೋ

WPL 2025: ಬೆಂಗಳೂರು ಪಂದ್ಯಗಳ ವೇಳೆ Namma Metro ರೈಲು ಸೇವೆ ಅವಧಿ ವಿಸ್ತರಣೆ

ಹಾಲಿ ಮಹಿಳಾ ಪ್ರೀಮಿಯರ್ ಲೀಗ್ T-20 ಕ್ರಿಕೆಟ್ ನ ಪಂದ್ಯಗಳ ದಿನದಂದು ನಮ್ಮ ಮೆಟ್ರೋ ರೈಲು ಸೇವೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಬಿಎಂಆರ್ ಸಿಎಲ್ ಮಾಹಿತಿ ನೀಡಿದೆ.
Published on

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)ರೈಲು ಸೇವೆ ಅವಧಿ ವಿಸ್ತರಣೆ ಕುರಿತು ಮಹತ್ವದ ಮಾಹಿತಿ ನೀಡಿದೆ.

ಹೌದು.. ಹಾಲಿ ಮಹಿಳಾ ಪ್ರೀಮಿಯರ್ ಲೀಗ್ T-20 ಕ್ರಿಕೆಟ್ ನ ಪಂದ್ಯಗಳ ದಿನದಂದು ನಮ್ಮ ಮೆಟ್ರೋ ರೈಲು ಸೇವೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಬಿಎಂಆರ್ ಸಿಎಲ್ ಮಾಹಿತಿ ನೀಡಿದೆ.

'ಟಾಟಾ ಮಹಿಳಾ ಪ್ರೀಮಿಯರ್‌ ಲೀಗ್‌ 2025 ಟಿ-20 ಕ್ರಿಕೆಟ್‌ ಪ೦ದ್ಯಗಳು ಬೆ೦ಗಳೂರಿನಲ್ಲಿ ಫೆಬ್ರವರಿ 21, 22, 24, 25, 26, 27, 28 ಮತ್ತು ಮಾರ್ಚ್‌ 01, 2025 ರಂದು ನಡೆಯಲಿವೆ. ಹೀಗಾಗಿ ಕ್ರಿಕೆಟ್‌ ಪಂದ್ಯಗಳಿಗೆ ಪ್ರಯಾಣಿಸಲು ಮತ್ತು ಹಿಂತಿರುಗಲು ಅನುಕೂಲವಾಗುವಂತೆ ಬಿಎಂಆರ್ಸಿಎಲ್‌ ಈ ಮೇಲೆ ತಿಳಿಸಿದ ದಿನಗಳಲ್ಲಿ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸಿದೆ ಎಂದು ಹೇಳಿದೆ.

BMRCL
WPL 2025: ಡೆಲ್ಲಿ ತಂಡದ ವಿರುದ್ಧ RCB ಗೆ 8 ವಿಕೆಟ್ ಗೆಲುವು

ಅಂತೆಯೇ ನೇರಳೆ ಮತ್ತು ಹಸಿರು ಮಾರ್ಗಗಲ್ಲಿನ ನಾಲ್ಕು ಟರ್ಮಿನಲ್‌ ಮೆಟ್ರೋ ನಿಲ್ದಾಣಗಳಾದ ಚಲ್ಲಫಟ್ಟ, ವೈಟ್‌ಫೀಲ್ಡ್‌, ಮಾದಾವರ ಮತ್ತು ರೇಷ್ಮೆ ಸ೦ಸ್ಥೆಯಿ೦ದ ಕೊನೆಯ ರೈಲು ಸೇವೆ ರಾತ್ರಿ 11.20 ರವರೆಗೆ ಮತ್ತು ಮೆಜಿಸ್ಟಿಕ್‌ನ ನಾಡಪ್ರಭು ಕೆ೦ಪೇಗೌಡ ನವಿಲ್ದಾಣದಿ೦ದ ಎಲ್ಲಾ ನಾಲ್ಕು ದಿಕ್ಕುಗಳಿಗೆ ಕೊನೆಯ ರೈಲು ರಾತ್ರಿ 11:55 ಕ್ಕೆ ಹೊರಡುತ್ತವೆ.

ಪ್ರಯಾಣಿಕರು ಮೆಟ್ರೋ ಪ್ರಯಾಣಕ್ಕಾಗಿ ಕ್ಯೂಆರ್‌ ಟಿಕೆಟ್‌ಗಳು, ಸ್ಮಾರ್ಟ್‌ ಕಾರ್ಡ್‌ಗಳು, ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್‌ಗಳು (ಎನ್‌ಸಿಎಂ೦ಸಿ) ಮತ್ತು ಟೋಕನ್‌ಗಳನ್ನು ಬಳಸಿ ಪ್ರಯಾಣಿಸಬಹುದು ಎಂದು ಬಿಎಂಆರ್ ಸಿಎಲ್ ಮಾಹಿತಿ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com