
ಶಿವಮೊಗ್ಗ: ತುಂಗಾ ನದಿ ಹಿನ್ನೀರಿನಲ್ಲಿ ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ ಆಗಿದ್ದು, ಘಟನೆಯಿಂದ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.
ಶಿವಮೊಗ್ಗದ ಸಕ್ರೆಬೈಲ್ ಆನೆ ಬಿಡಾರದ 10ನೇ ಮೈಲಿಕಲ್ಲಿನ ಬಳಿ ಮೂವರ ಶವ ಪತ್ತೆಯಾಗಿದ್ದು, ಅವರ ಗುರುತು ಇನ್ನೂ ಪತ್ತೆಯಾಗಿಲ್ಲ. ಆದರೆ ಆತ್ಮಹತ್ಯೆ ಮಾಡಿಕೊಂಡಿರು ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.
Advertisement