ಸರ್ಕಾರದ ಜೊತೆ ನಾಗರೀಕರು ಕೈಜೋಡಿಸಿದರೆ ರಸ್ತೆಗಳ ಸುಸ್ಥಿತಿಯಲ್ಲಿಡಲು ಸಾಧ್ಯ: ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್

ಜನರು ಬೆಂಗಳೂರಿನ ಹವಾಮಾನವನ್ನು ಬಗ್ಗೆ ಎಷ್ಟು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ, ಅಷ್ಟೇ ನಗರದ ರಸ್ತೆಗಳ ಬಗ್ಗೆ ಬೇಸರ ವ್ಯಕ್ತಪಡಿಸುತ್ತಾರೆ. ನಗರದ ರಸ್ತೆಗಳ ಕುರಿತು ಸವಿವರವಾದ ಚಿತ್ರವನ್ನು ಇಲ್ಲಿ ಪ್ರಸ್ತಾಪಿಸಿದ್ದು, ಅದರಿಂದ ಸಮಸ್ಯೆಯ ಗಾತ್ರ ಮತ್ತು ಅದಕ್ಕೆ ಪರಿಹಾರಗಳೇನು ಎಂಬುದನ್ನು ನಿಖರವಾಗಿ ನೋಡಲು ಸಾಧ್ಯವಾಗುತ್ತಿದೆ.
ಶಾಲಿನಿ ರಜನೀಶ್
ಶಾಲಿನಿ ರಜನೀಶ್
Updated on

ಬೆಂಗಳೂರು: ಬೆಂಗಳೂರಿನ ರಸ್ತೆಗಳ ಅಭಿವೃದ್ಧಿ ಮತ್ತು ನಿರ್ವಹಣೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಮುಖ್ಯವಾಗಿ ನಗರದ ನಾಗರಿಕರಿಂದ ಸಾಮೂಹಿಕ ಪ್ರಯತ್ನಗಳು ಅಗತ್ಯವಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಶುಕ್ರವಾರ ಅಭಿಪ್ರಾಯಪಟ್ಟರು.

‘ನಮ್ಮ ರಸ್ತೆ–2025’ಯಲ್ಲಿ ‘ಪಾಲಿಕೆಯ ಎಂಜಿನಿಯರ್‌ಗಳ ಸಾಮರ್ಥ್ಯ ವೃದ್ಧಿ’ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಈ ವೇಳೆ ಸರ್ಕಾರದ ಉಪಕ್ರಮವನ್ನು ಶ್ಲಾಘಿಸಿದ ಅವರು, ನಾಗರಿಕರು ಸರ್ಕಾರದೊಂದಿಗೆ ಕೈಜೋಡಿಸಿದರೆ, ನಗರದ ರಸ್ತೆಗಳನ್ನು ಸುಸ್ಥಿತಿಯಲ್ಲಿಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಜನರು ಬೆಂಗಳೂರಿನ ಹವಾಮಾನವನ್ನು ಬಗ್ಗೆ ಎಷ್ಟು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ, ಅಷ್ಟೇ ನಗರದ ರಸ್ತೆಗಳ ಬಗ್ಗೆ ಬೇಸರ ವ್ಯಕ್ತಪಡಿಸುತ್ತಾರೆ. ನಗರದ ರಸ್ತೆಗಳ ಕುರಿತು ಸವಿವರವಾದ ಚಿತ್ರವನ್ನು ಇಲ್ಲಿ ಪ್ರಸ್ತಾಪಿಸಿದ್ದು, ಅದರಿಂದ ಸಮಸ್ಯೆಯ ಗಾತ್ರ ಮತ್ತು ಅದಕ್ಕೆ ಪರಿಹಾರಗಳೇನು ಎಂಬುದನ್ನು ನಿಖರವಾಗಿ ನೋಡಲು ಸಾಧ್ಯವಾಗುತ್ತಿದೆ ಎಂದು ತಿಳಿಸಿದರು.

ಶಾಲಿನಿ ರಜನೀಶ್
ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ‌ರಜನೀಶ್ ನೇಮಕ

ಬೆಂಗಳೂರು ದಿನೇ ದಿನೇ ಬೆಳೆಯುತ್ತಿದ್ದು, ನಗರಕ್ಕೆ ಬಂದು ವಾಸಿಸುವುದಕ್ಕೆ ಜನರು ಇಷ್ಟ ಪಡುತ್ತಾರೆ. ಜನಸಂಖ್ಯೆಗೆ ಅನುಗುಣವಾಗಿ ಯೋಜನೆ ರೂಪಿಸಿದರೆ ಅದಕ್ಕಿಂತ ಹೆಚ್ಚಾಗಿ ಸಂಚಾರ ದಟ್ಟಣೆ ನಿಯಂತ್ರಮ ಮೀರಿ ಹೆಚ್ಚುತ್ತಲೇ ಇದೆ. ಅದನ್ನು ಹೇಗೆ ನಿಯಂತ್ರಣ ಮಾಡಬೇಕೆಂಬುದರ ಬಗ್ಗೆ ಕೂಲಂಕಷವಾಗಿ ಅಧ್ಯಯನ ನಡೆಸಬೇಕಿದೆ. ಸಂಚಾರ ದಟ್ಟಣೆ ನಿಯಂತ್ರಿಸಲು ನಾಗರೀಕರು ಏನು ಮಾಡಬಹುದು. ನಮ್ಮ ಬೆಂಗಳೂರು-ನಮ್ಮ ರಸ್ತೆ, ನಮ್ಮದೇ ಸಮಸ್ಯೆ-ನಮ್ಮದೇ ಪರಿಹಾರ ಆ ನಿಟ್ಟಿನಲ್ಲಿ ಯೋಜಿಸಿ ಎಲ್ಲರೂ ಒಟ್ಟಾಗಿ ಶ್ರಮಿಸಿದರೆ ಮಾತ್ರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕ ಸಾರಿಗೆ ಸಂಪರ್ಕ ಕಲ್ಪಿಸುವ ಸಲುವಾಗಿ ಖಾಸಗಿ ಸಂಸ್ಥೆಗಳ ಸಹಯೋಗದಲ್ಲಿ ವ್ಯವಸ್ಥೆ ಮಾಡಬೇಕಿದೆ ಎಂದರು.

ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾತನಾಡಿ, ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಕಾಮಗಾರಿ ನಡೆಸಿದರೂ ಒಂದೇ ಮಾದರಿಯ ವಿನ್ಯಾಸವಿರುವಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಬಿಡುಗಡೆಗೊಳಿಸಿರುವ ನಮ್ಮ ರಸ್ತೆ ಕೈಪಿಡಿಯಲ್ಲಿರುವ ಪ್ರಮಾಣಿತ ಕಾರ್ಯವಿಧಾನವನ್ನು ಸರಿಯಾಗಿ ಅನುಸರಿಸಬೇಕೆಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com