ಮಾ.3 ರಿಂದ ಬಜೆಟ್ ಅಧಿವೇಶನ: ಸರ್ಕಾರದ ವಿರುದ್ಧ ಮುಗಿಬೀಳಲು BJP ಸಜ್ಜು

ಅಧಿವೇಶನ ವೇಳೆ ಸರ್ಕಾರದ ವಿರುದ್ಧ ಹಲವು ಅಸ್ತ್ರಗಳ ಪ್ರಯೋಗಿಸಲು ಬಿಜೆಪಿ ಸಜ್ಜಾಗಿದ್ದು, ಈ ಸಂಬಂಧ ಶುಕ್ರವಾರ ಪೂರ್ವಭಾವಿ ಸಭೆ ನಡೆಸಿದರು.
ಬಿಜೆಪಿ ಸಭೆ
ಬಿಜೆಪಿ ಸಭೆ
Updated on

ಬೆಂಗಳೂರು: ಮಾರ್ಚ್ 3 ರಿಂದ ರಾಜ್ಯ ಬಜೆಟ್ ಅಧಿವೇಶನದ ಆರಂಭವಾಗುತ್ತಿದ್ದು, ಈ ವೇಳೆ ಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ ಸಜ್ಜಾಗಿದೆ.

ಅಧಿವೇಶನ ವೇಳೆ ಸರ್ಕಾರದ ವಿರುದ್ಧ ಹಲವು ಅಸ್ತ್ರಗಳ ಪ್ರಯೋಗಿಸಲು ಬಿಜೆಪಿ ಸಜ್ಜಾಗಿದ್ದು, ಈ ಸಂಬಂಧ ಶುಕ್ರವಾರ ಪೂರ್ವಭಾವಿ ಸಭೆ ನಡೆಸಿದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ಮುಂಬರುವ ಬಜೆಟ್ ಅಧಿವೇಶನ ಕುರಿತು ಮಹತ್ವದ ಚರ್ಚೆ ನಡೆಸಲಾಗಿದ್ದು. ಸದನದಲ್ಲಿ ಪ್ರಶ್ನೆಗಳನ್ನು ಕೇಳುವುದು, ಚರ್ಚೆಗೆ ಒಳಪಡಿಸುವ ವಿಷಯಗಳು ಹಾಗೂ ನಿಲುವಳಿ ಸೂಚನೆಯ ಮಂಡನೆಗೆ ಸಂಬಂಧಿಸಿದಂತೆ ಮಾತುಕತೆ ನಡೆಸಲಾಗಿದೆ ಎಂದು ಹೇಳಿದರು.

ರಾಜ್ಯ ಸರ್ಕಾರದ ಭ್ರಷ್ಟಾಚಾರ, ವೈಫಲ್ಯ, ಜನವಿರೋಧಿ ನೀತಿಗಳನ್ನು ಬಹಿರಂಗಪಡಿಸಲು ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಲು ಸದನದಲ್ಲಿ ಬಲವಾದ ಪ್ರತಿಪಕ್ಷದ ಹೋರಾಟ ನಡೆಸಲಾಗುವುದು. ಈ ಕುರಿತು ಸರ್ವ ಸದಸ್ಯರು ತೀವ್ರ ಚರ್ಚೆ ನಡೆಸಿ, ಸರ್ಕಾರದ ಅಸಮರ್ಥತೆ ವಿರುದ್ಧ ರಾಜ್ಯದ ಜನತೆಗಾಗಿ ಪ್ರಭಾವೀ ನಿಲುವು ಕೈಗೊಳ್ಳಲು ನಿರ್ಧರಿಸಲಾಗಿದೆ. ಜೆಡಿಎಸ್ ಸದಸ್ಯರೊಂದಿಗೆ ಸಮನ್ವಯ ಸಾಧಿಸಲಾಗುವುದು ಎಂದು ತಿಳಿಸಿದರು

ಬಿಜೆಪಿ ಸಭೆ
ರಾಜ್ಯ ಬಜೆಟ್ 2025: ರೈತ ಮುಖಂಡರ ಜೊತೆ ಸಿದ್ದರಾಮಯ್ಯ ಸಭೆ; ಅನ್ನದಾತರ ಬೇಡಿಕೆಗಳಿಗೆ ಮೊದಲ ಆದ್ಯತೆ ಎಂದ ಸಿಎಂ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com