ಬಸವರಾಜ ಬೊಮ್ಮಾಯಿಯಿಂದ ಜನರ ಬಾಯಿಗೆ ಮಣ್ಣು ಹಾಕುವ ಕೆಲಸ: ದಿನೇಶ್ ಗುಂಡೂರಾವ್ ಕಿಡಿ

2023ರಲ್ಲಿ ಮರಳಿ ಅಧಿಕಾರಕ್ಕೆ ಬರುವುದಿಲ್ಲ ಎಂಬ ಸತ್ಯ ಬೊಮ್ಮಾಯಿ ಅವರಿಗೆ ಗೊತ್ತಿತ್ತು. ಹಾಗಾಗಿ ಅಧಿಕಾರ ಬಿಡುವ ಮುನ್ನ ಬಜೆಟ್ ವೆಚ್ಚಕ್ಕಿಂತ 7 ಪಟ್ಟು ವೆಚ್ಚದ ಕಾಮಗಾರಿಗಳಿಗೆ ಅನುಮೋದನೆ ನೀಡಿದ್ದಾರೆ
Dinesh Gundu Rao
ದಿನೇಶ್ ಗುಂಡೂರಾವ್
Updated on

ಬೆಂಗಳೂರು: ಬಿಜೆಪಿ ಮತ್ತೆ ಅಧಿಕಾರಕ್ಕೆ ಮರಳುವುದಿಲ್ಲ ಎನ್ನುವ ಖಾತ್ರಿಯಿಂದ ಬಜೆಟ್ ಗಾತ್ರಕ್ಕಿಂತ ಏಳು ಪಟ್ಟು ಅಧಿಕ ಮೊತ್ತದ ಕಾಮಗಾರಿಗಳಿಗೆ ಮಂಜೂರಾತಿ ನೀಡುವ ಮೂಲಕ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಾಜ್ಯದ ಜನರ ಬಾಯಿಗೆ ಮಣ್ಣು ಹಾಕಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.

ಸರ್ಕಾರದಿಂದ ಮಹಿಳೆಯರು, ಜನರ ಬಾಯಿಗೆ ಮಣ್ಣು ಹಾಕುವ ಕೆಲಸ ಮಾಡಲಾಗುತ್ತಿದೆ ಎಂಬ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ದಿನೇಶ್ ಗುಂಡೂರಾವ್, 2023ರಲ್ಲಿ ಮರಳಿ ಅಧಿಕಾರಕ್ಕೆ ಬರುವುದಿಲ್ಲ ಎಂಬ ಸತ್ಯ ಬೊಮ್ಮಾಯಿ ಅವರಿಗೆ ಗೊತ್ತಿತ್ತು. ಹಾಗಾಗಿ ಅಧಿಕಾರ ಬಿಡುವ ಮುನ್ನ ಬಜೆಟ್ ವೆಚ್ಚಕ್ಕಿಂತ 7 ಪಟ್ಟು ವೆಚ್ಚದ ಕಾಮಗಾರಿಗಳಿಗೆ ಅನುಮೋದನೆ ನೀಡಿದ್ದಾರೆ. ಆ ಕಾಮಗಾರಿ ಕೈಗೊಂಡ ಗುತ್ತಿಗೆದಾರರಿಗೆ ಹಣ ಪಾವತಿ ಯಾರು ಮಾಡಬೇಕು? ಸ್ವಂತ ಖಜಾನೆಯಿಂದ ಕೊಡುವಂತೆ ಅಪ್ರಸ್ತುತ ಕಾಮಗಾರಿಗಳಿಗೆ ಅನುಮೋದನೆ ಕೊಟ್ಟಾಗ ಪ್ರಜ್ಞೆ ಇರಲಿಲ್ಲವೆ? ಇದು ಜನರ ಬಾಯಿಗೆ ಮಣ್ಣು ಹಾಕುವ ಕೆಲಸವಲ್ಲವೇ? ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

ನೀವು ಮುಖ್ಯಮಂತ್ರಿಯಾಗಿ ಏನು ಕಡಿದು ಕಟ್ಟೆ ಹಾಕಿದ್ದೀರಿ? ಎಂದು ಕೇಳಿದರೆ ನೀವು ಉತ್ತರ ಕೊಡಲು ತಡಕಾಡುವಿರಿ‌. ಮುಖ್ಯಮಂತ್ರಿಯಾಗಿದ್ದಾಗ ನೀವು ಈ ರಾಜ್ಯಕ್ಕೆ ಕೊಟ್ಟ ಕೊಡುಗೆಯೇನು.? ಉತ್ತರಿಸುವಿರಾ.? ಎಂದು ಕೇಳಿದ್ದಾರೆ.

Dinesh Gundu Rao
ರಾಜ್ಯದ ಹಣಕಾಸು ಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಿ: ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಒತ್ತಾಯ

ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಎಂದಾದರೂ ಕೇಂದ್ರ ಸರ್ಕಾರದ ತೆರಿಗೆ ಅನ್ಯಾಯದ ಬಗ್ಗೆ ಎದೆಯೆತ್ತಿ ಮಾತಾಡಿದ್ದೀರಾ? ಹೋಗಲಿ ಮೋದಿ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಒಮ್ಮೆಯಾದರೂ ಬಾಯಿ ಬಿಟ್ಟಿದ್ದೀರಾ? ಮೋದಿಯವರ ಮುಂದೆ ನಡು ಬಗ್ಗಿಸಿ ನಿಂತಿದ್ದೇ ನಿಮ್ಮ ಸಾಧನೆಯಲ್ಲವೆ? ಇದು ಜನರ ಬಾಯಿಗೆ ಮಣ್ಣು ಹಾಕುವ ಕೆಲಸವಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಗ್ಯಾರಂಟಿ ಯೋಜನೆಗಳಿಗೆ ನಮ್ಮ ಸರ್ಕಾರ 58 ಸಾವಿರ ಕೋಟಿ ರೂ. ಮೀಸಲಿರಿಸಿದೆ. ಈ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಎಷ್ಟೋ ಮನೆಗಳ ದೀಪ ಉರಿಯುತ್ತಿದೆ ಎಂಬ ಅರಿವು ನಿಮಗಿರಲಿ. ನಿಮ್ಮ ನೇತೃತ್ವದ ಸರ್ಕಾರವಿದ್ದಾಗ ಯಾವುದಾದರೂ ಒಂದೇ ಒಂದು ಜನಪರ ಕಾರ್ಯಕ್ರಮ ಮಾಡಿದ ಉದಾಹರಣೆ ಇದೆಯೆ? ರಾಜ್ಯದ ಖಜಾನೆ ಲೂಟಿ ಹೊಡೆದಿದ್ದೇ ನಿಮ್ಮ ಸರ್ಕಾರದ ಹೆಗ್ಗಳಿಕೆಯಲ್ಲವೇ ಎಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com