ಕಿಡಿಗೇಡಿಗಳಿಂದ ಚಾಮುಂಡಿ ಬೆಟ್ಟದಲ್ಲಿ ಬೆಂಕಿ: ಕಾಡ್ಗಿಚ್ಚಿಗೆ 35 ಎಕರೆ ಅರಣ್ಯ ನಾಶ
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಶುಕ್ರವಾರ ಕಾಣಿಸಿಕೊಂಡ ಬೆಂಕಿಯಿಂದ 35 ಎಕರೆ ಕಾಡು ಸಂಪೂರ್ಣ ಸುಟ್ಟು ಹೋಗಿದೆ. ಮಾನವ ನಿರ್ಮಿತ ಬೆಂಕಿಯು ಚಾಮುಂಡಿ ಬೆಟ್ಟವನ್ನು ಆವರಿಸಿದ್ದು, ದೇವಿಕೆರೆ, ಗೊಲ್ಲಹಳ್ಳಿ ಭಾಗದಲ್ಲಿ 35 ಎಕರೆ ಕಾಡು ಸಂಪೂರ್ಣ ಸುಟ್ಟು ಹೋಗಿದೆ.
ಉದ್ದೇಶ ಪೂರ್ವಕವಾಗಿ ಬೆಂಕಿ ಹಾಕಿದ್ದಾರೆ. ಆ ಬಗ್ಗೆ ತನಿಖೆ ನಡೆಯುತ್ತಿದೆ ಗಾಳಿ ವೇಗ ಹಾಗೂ ಬಿಸಿಲಿನ ವಾತಾವರಣ ಇದ್ದುದರಿಂದ ಬೆಂಕಿ ಹೆಚ್ಚಿತ್ತು ನಾವು ಎಷ್ಟೇ ಪ್ರಯತ್ನ ಪಟ್ಟರೂ ಆ ಜಾಗಕ್ಕೆ ಹೋಗಲು ಸಾಧ್ಯವಾಗಲಿಲ್ಲ. ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಬೆಂಕಿ ನಂದಿಸಲು ಶ್ರಮ ಹಾಕಿದ್ದಾರೆ. ಸದ್ಯ ಬೆಂಕಿ ನಿಯಂತ್ರಣಕ್ಕೆ ಬಂದಿದೆ ಎಂದು ತಿಳಿಸಿದರು.
ಇಂದು ಬೆಳಿಗ್ಗೆ ಕೂಡ ಎರಡು ತಂಡ ಮಾಡಿ ಕೆಂಡ ಇದ್ರೆ ಅದನ್ನು ಆರಿಸಲು ಹೇಳಿದ್ವಿ. ಸದ್ಯಕ್ಕೆ ಡ್ರೋನ್ ಹಾರಿಸಿ ಎಲ್ಲವನ್ನೂ ಪರಿಶೀಲನೆ ಮಾಡಿದ್ದೇವೆ ಎಂದು ಹೇಳಿದರು. ಸಣ್ಣ ಕಿಡಿ ಇಡೀ ಕಾಡನ್ನೇ ನಾಶ ಮಾಡತ್ತದೆ ಹೀಗಾಗಿ ಸಾರ್ವಜನಿಕರು ಕಾಡಿನಲ್ಲಿ ಬಿಡಿ ಸಿಗರೇಟ್ ಸೇದಿ ಎಸೆಯಬೇಡಿ ಎಂದು ಮನವಿ ಅವರು ಮಾಡಿದರು.
ಅದೃಷ್ಟವಶಾತ್ ಯಾವುದೇ ಪ್ರಾಣಿಗಳಿಗೆ ಹಾನಿಯಾಗಿಲ್ಲ. ಬೆಳಿಗ್ಗೆ ನಮ್ಮ ವಾಚರ್ ಕಣ್ಣಿಗೆ ಚಿರತೆ ಹಾಗೂ ಮರಿಗಳು ಬಿದ್ದಿದೆ. ಬೆಂಕಿ ಬಿದ್ದ ತಕ್ಷಣ ಪ್ರಾಣಿಗಳು ಒಂದು ಕಡೆಯಿಂದ ಮತ್ತೊಂದು ಭಾಗಕ್ಕೆ ಹೋಗಿವೆ ಎಂದರು. ರಾತ್ರಿ 10 ಗಂಟೆಯೊಳಗೆ ದೇವಾಲಯಕ್ಕೆ ಹೋಗುವ ನಾಲ್ಕು ದ್ವಾರಗಳನ್ನು ಮುಚ್ಚುವ ಅರಣ್ಯ ಇಲಾಖೆಯು ಸಂಜೆ 6 ಗಂಟೆಗೆ ಗೇಟ್‌ಗಳನ್ನು ಮುಚ್ಚುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿದೆ ಎಂದು ಅವರು ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ