ಬೆಂಗಳೂರು: ಬೇಕಾಬಿಟ್ಟಿಯಾಗಿ ಕುಡಿಯುವ ನೀರು ಬಳಕೆ; 112 ಪ್ರಕರಣ ದಾಖಲು, 5.60 ಲಕ್ಷ ರೂ ದಂಡ ವಸೂಲಿ

ಕುಡಿಯುವ ನೀರಿನ ದುರ್ಬಳಕೆಗೆ ಕಡಿವಾಣ ಹಾಕಲು ಹಾಗೂ ಎಲ್ಲ ನಿವಾಸಿಗಳಿಗೆ ಸಮರ್ಪಕವಾಗಿ ಪೂರೈಕೆ ಮಾಡುವಂತೆ ಜಲಮಂಡಳಿ ಫೆ.17ರಂದು ಸುತ್ತೋಲೆ ಹೊರಡಿಸಿತ್ತು.
Casual Images
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ಹಲವೆಡೆ ನೀರಿನ ಸಮಸ್ಯೆ ಎದುರಾಗುತ್ತಿದ್ದು, ಕುಡಿಯುವ ನೀರನ್ನು ಬೇಕಾಬಿಟ್ಟಿಯಾಗಿ ಬಳಸುವುದ ವಿರುದ್ಧ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB)ಕ್ರಮ ಕೈಗೊಂಡಿದ್ದು, ಕಳೆದ ವಾರದಲ್ಲಿ 112 ಪ್ರಕರಣಗಳನ್ನು ದಾಖಲಿಸಿ, 5.60 ಲಕ್ಷ ರೂ. ದಂಡ ವಸೂಲಿ ಮಾಡುತ್ತಿದೆ.

ಕುಡಿಯುವ ನೀರಿನ ದುರ್ಬಳಕೆಗೆ ಕಡಿವಾಣ ಹಾಕಲು ಹಾಗೂ ಎಲ್ಲ ನಿವಾಸಿಗಳಿಗೆ ಸಮರ್ಪಕವಾಗಿ ಪೂರೈಕೆ ಮಾಡುವಂತೆ ಜಲಮಂಡಳಿ ಫೆ.17ರಂದು ಸುತ್ತೋಲೆ ಹೊರಡಿಸಿತ್ತು. ಅದರಂತೆ ಕುಡಿಯುವ ನೀರಿನ ಅನಾವಶ್ಯಕ ಪೋಲಿನ ವಿರುದ್ಧ ಅಭಿಯಾನವನ್ನು ತೀವ್ರಗೊಳಿಸಿದೆ.

BWSSB ಅಧಿಕಾರಿಗಳು 112 ಪ್ರಕರಣಗಳನ್ನು ಗುರುತಿಸಿ, ದಂಡ ವಿಧಿಸಿದ್ದಾರೆ. ಈ ಪೈಕಿ ದಕ್ಷಿಣ ವಲಯದಲ್ಲಿ ಅತಿ ಹೆಚ್ಚು 33 ಪ್ರಕರಣಗಳು ದಾಖಲಾಗಿದ್ದು, ಪಶ್ಚಿಮ ವಲಯ ಮತ್ತು ಪೂರ್ವ ವಲಯದಲ್ಲಿ ತಲಾ 28 ಪ್ರಕರಣಗಳು ಮತ್ತು ಉತ್ತರ ವಲಯದಲ್ಲಿ 23 ಪ್ರಕರಣಗಳು ದಾಖಲಾಗಿವೆ. ಅಪರಾಧಿಗಳಿಂದ ದಂಡ ವಸೂಲಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ 1964 ರ ಸೆಕ್ಷನ್ 33 ಮತ್ತು 34 ರಡಿ ಚಲನಚಿತ್ರ ಮಂದಿರಗಳು ಮತ್ತು ಮಾಲ್‌ಗಳಲ್ಲಿ ವಾಹನ ಸ್ವಚ್ಛತೆ, ತೋಟಗಾರಿಕೆ, ನಿರ್ಮಾಣ, ಮನರಂಜನೆ, ಅಲಂಕಾರಿಕ ಕಾರಂಜಿಗಳು ಮತ್ತು ಇತರ ಕುಡಿಯದ ಉದ್ದೇಶಗಳಿಗೆ ಕುಡಿಯುವ ನೀರನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಈ ನಿಯಮಗಳ ಹೊರತಾಗಿಯೂ, ಅನೇಕ ವ್ಯಕ್ತಿಗಳು ಮತ್ತು ಘಟಕಗಳು ನೀರಿನ ಬಿಕ್ಕಟ್ಟನ್ನು ನಿರ್ಲಕ್ಷಿಸಿ ಶುದ್ಧ ನೀರನ್ನು ದುರ್ಬಳಕೆ ಮಾಡುವುದನ್ನು ಮುಂದುವರೆಸಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

Casual Images
ಬೆಂಗಳೂರಿಗರೇ ಎಚ್ಚರ: ಕಾವೇರಿ ನೀರನ್ನು ಕುಡಿಯುವುದಕ್ಕೆ ಬಿಟ್ಟು ಬೇರೆ ಉದ್ದೇಶಗಳಿಗೆ ಬಳಸಿದರೆ 5000 ರೂ ದಂಡ!

ನೀರು ಅತ್ಯಮೂಲ್ಯ ಸಂಪನ್ಮೂಲವಾಗಿದ್ದು, ಸುಮಾರು 100 ಕಿಲೋಮೀಟರ್ ದೂರದಿಂದ ಬೆಂಗಳೂರಿಗೆ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ. ಸಾರ್ವಜನಿಕರು ನೀರು ವ್ಯರ್ಥವಾಗುವುದನ್ನು ತಪ್ಪಿಸಬೇಕು ಮತ್ತು ಅಗತ್ಯವಿರುವ ಎಲ್ಲಾ ಪ್ರದೇಶಗಳಿಗೆ ಮತ್ತು ನಿವಾಸಿಗಳಿಗೆ ಸಮಾನವಾಗಿ ನೀರು ಪೂರೈಕೆ ಖಾತ್ರಿಗೆ ಮಂಡಳಿಯೊಂದಿಗೆ ಸಹಕರಿಸಬೇಕು ಎಂದು BWSSB ಅಧ್ಯಕ್ಷ ಡಾ ರಾಮ್ ಪ್ರಸಾತ್ ಮನೋಹರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com