ಎಚ್ ಡಿ ಕುಮಾರಸ್ವಾಮಿಗೆ ಹಿನ್ನಡೆ: ಡಿನೋಟಿಫಿಕೇಷನ್‌ ಪ್ರಕರಣದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕುಮಾರಸ್ವಾಮಿ ಅವರು 2006ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿಯಲ್ಲಿ 3 ಎಕರೆ 34 ಗುಂಟೆ ಜಮೀನನ್ನು ಡಿನೋಟಿಫಿಕೇಶನ್‌ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ.
HD Kumaraswamy
ಎಚ್ ಡಿ ಕುಮಾರಸ್ವಾಮಿ
Updated on

BDAನವದೆಹಲಿ: ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಕೇಂದ್ರ ಬೃಹತ್ ಕೈಗಾ ರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿಗೆ ಸಂಕಷ್ಟ ತಂದಿಟ್ಟಿದೆ. ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನು ಡಿನೋಟಿಷಿಕೇಷನ್ ಸಂಬಂಧ ಕುಮಾರಸ್ವಾಮಿ ವಿರುದ್ಧದ ಪ್ರಕರಣದಲ್ಲಿ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಹೈಕೋರ್ಟ್​ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಕುಮಾರಸ್ವಾಮಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದು ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ರಾಜೇಶ್ ಬಿಂದಾಲ್ ಅವರಿದ್ದ ದ್ವಿಸದಸ್ಯ ಪೀಠ ಅರ್ಜಿ ವಜಾಗೊಳಿಸಿದೆ.

ಕುಮಾರಸ್ವಾಮಿ ಅವರು 2006ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿಯಲ್ಲಿ 3 ಎಕರೆ 34 ಗುಂಟೆ ಜಮೀನನ್ನು ಡಿನೋಟಿಫಿಕೇಶನ್‌ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಹಲಗೆವಡೇರಹಳ್ಳಿ ಸರ್ವೆ ನಂ. 128, 137 ರಲ್ಲಿನ 2 ಎಕರೆ 24 ಗುಂಟೆ ಜಮೀನನ್ನು ಕಾನೂನುಬಾಹಿರವಾಗಿ ಡಿ ನೋಟಿಫಿಕೇಷನ್ ಮಾಡಿದ್ದಾರೆ ಎಂದು ದಾಖಲೆಗಳ ಸಮೇತ ಮಹದೇವಸ್ವಾಮಿ 2012ರಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಕುಮಾರಸ್ವಾಮಿ ಜೊತೆಗೆ ಪದ್ಮಾ, ಶ್ರೀದೇವಿ, ಚೇತನ್‌ಕುಮಾರ್‌, ಕೆ.ಬಿ ಶಾಂತಮ್ಮ, ಎಸ್‌. ರೇಖಾ ಚಂದ್ರು, ಯೋಗ ಮೂರ್ತಿ, ಬಿ.ನರಸಿಂಹುಲು ನಾಯ್ಡು, ಆರ್‌. ಬಾಲಕೃಷ್ಣ, ಟಿ. ಮುರುಳಿಧರ್‌, ಜಿ. ಮಲ್ಲಿಕಾರ್ಜುನ, ಇ.ಎ ಯೋಗೇಂದ್ರನಾಥ, ಪಿ.ಜಗದೀಶ, ಡಿ.ಎಸ್‌ ದೀಪಕ್‌, ಎಂ.ಸುಬ್ರಮಣಿ, ಬಾಲಾಜಿ ಇನ್ಫ್ರಾ, ಶುಭೋಧಯ ಬಿಲ್ಡರ್ಸ್‌, ಸನ್‌ರೈಸ್‌ ಬಿಲ್ಡರ್ಸ್‌ ಮತ್ತು ಆರತಿ ಡೆವಲಪರ್ಸ್‌ ಪ್ರಮುಖರು ಆರೋಪಿತರಾಗಿದ್ದಾರೆ.

ಈ ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್‌ ಸಲ್ಲಿಸಿದ್ದರು. ಅದನ್ನು ಪ್ರಶ್ನಿಸಿ ದೂರುದಾರ ಮಹಾದೇವಸ್ವಾಮಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್‌ ತಿರಸ್ಕರಿಸಿ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು. ಇದನ್ನು ಪ್ರಶ್ನಿಸಿ ಕುಮಾರಸ್ವಾಮಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಆದರೆ ಇದೀಗ ಸುಪ್ರೀಂಕೋರ್ಟ್​ ಎಚ್​​ಡಿ ಕುಮಾರಸ್ವಾಮಿ ಅರ್ಜಿಯನ್ನು ವಜಾಗೊಳಿಸಿದೆ.

HD Kumaraswamy
ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಕೊಟ್ಟಿರುವ ಲೋಕಾಯುಕ್ತವನ್ನ ದೇವರೇ ಕಾಪಾಡಬೇಕು: ಹೆಚ್​.ಡಿ ಕುಮಾರಸ್ವಾಮಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com