
ಮೈಸೂರು: ಕನ್ನಡ ಉಪಭಾಷೆಗಳ ಅಧ್ಯಯನ ಸೇರಿದಂತೆ ಭಾಷಾ ವಿಜ್ಞಾನಕ್ಕೆ ಸಂಬಂಧಿಸಿದ ಅನೇಕ ಲೇಖನಗಳನ್ನು ಕನ್ನಡಕ್ಕೆ ಕೊಡುಗೆಯಾಗಿ ನೀಡಿದ್ದ ಕನ್ನಡದ ಖ್ಯಾತ ಭಾಷಾವಿಜ್ಞಾನಿ ಡಾ. ಕೆ ಕೆಂಪೇಗೌಡ ನಿಧನರಾಗಿದ್ದಾರೆ. ಮೈಸೂರಿನ ಸರಸ್ವತಿಪುರಂನಲ್ಲಿರುವ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಚನ್ನಪಟ್ಟಣದ ಹೆಚ್ ಬ್ಯಾಡ್ರಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಬ್ಯಾಡರಹಳ್ಳಿಯಲ್ಲಿ ಕೆಂಪೇಗೌಡ ಜನಿಸಿದ್ದರು. ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ, ಶೆಟ್ಟಿಹಳ್ಳಿಯಲ್ಲಿ ಮಾಧ್ಯಮಿಕ ಮತ್ತು ಚನ್ನಪಟ್ಟಣದಲ್ಲಿ ಹೈಯರ್ ಸೆಕೆಂಡರಿ ಶಿಕ್ಷಣ ಪಡೆದರು. ಮೈಸೂರು ವಿಶ್ವವಿದ್ಯಾಲಯದಿಂದ ಹಿಂದಿ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ನಂತರ ಪುಣೆಯ ಡೆಕ್ಕನ್ ಕಾಲೇಜಿನಲ್ಲಿ ಭಾಷಾ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು.
A Descriptive Analysis of Irula Dialect ಈ ವಿಷಯ ಕುರಿತು ಸಲ್ಲಿಸಿದ ಮಹಾಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ಪಡೆದರು. ಸಾಮಾನ್ಯ ಭಾಷಾ ವಿಜ್ಞಾನ ಕೃತಿಗೆ ಮೈಸೂರು ವಿಶ್ವವಿದ್ಯಾಲಯದಿಂದ ಡಿ.ಲಿಟ್. ಪದವಿ ಪಡೆದರು. ಭಾಷಾ ವಿಜ್ಞಾನ ಕೋಶ, ಧ್ವನಿಮಾ ವಿಜ್ಞಾನ, ಸಾಮಾನ್ಯ ಭಾಷಾ ವಿಜ್ಞಾನ, ಕನ್ನಡ ಭಾಷಾ ಚರಿತ್ರೆ, ತೌಲನಿಕ ದ್ರಾವಿಡ ಭಾಷಾ ವಿಜ್ಞಾನಕ್ಕೆ ಸಂಬಂಧಿಸಿದ ಅನೇಕ ಲೇಖನಗಳನ್ನು ಕನ್ನಡಕ್ಕೆ ಕೊಡುಗೆಯಾಗಿ ನೀಡಿದ್ದಾರೆ.
Advertisement