ಸಾವಿರ ಟೀಕೆಗಳು ಬಂದರೂ ನನ್ನ ಧರ್ಮದ ಮೇಲೆ ನಂಬಿಕೆ ಅಚಲ: DK Shivakumar ಖಡಕ್ ಟಾಂಗ್!

ನಾನು ಹೋಗಿದ್ದು ಶಿವನರಾತ್ರಿಗೆ. ಇದು ನನ್ನ ಸ್ವಂತ ನಂಬಿಕೆ ಎಂದು ಹೇಳುವ ಮೂಲಕ ಎಐಸಿಸಿ ಕಾರ್ಯದರ್ಶಿ ಪಿವಿ ಮೋಹನ್‌ ಟೀಕೆ, ಎಚ್ಚರಿಕೆಗಳಿಗೆ ಡಿಕೆ ಶಿವಕುಮಾರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
Congress general secretary PV Mohan- DK Shivakumar
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿವಿ ಮೋಹನ್ (ಎಡಭಾಗದ ಚಿತ್ರ), ಡಿಕೆ ಶಿವಕುಮಾರ್ online desk
Updated on

ಬೆಂಗಳೂರು: ಇಶಾ ಫೌಂಡೇಶನ್ ನಲ್ಲಿ ಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದಕ್ಕಾಗಿ ತಮ್ಮ ವಿರುದ್ಧ ವ್ಯಕ್ತವಾಗುತ್ತಿರುವ ಟೀಕೆಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

ಸಾವಿರ ಟೀಕೆಗಳು ಬಂದರೂ, ನನ್ನ ನಂಬಿಕೆ ನನ್ನದು ಎಂದು ಟೀಕಾ ಪ್ರಹಾರ ನಡೆಸಿದವರಿಗೆ ಡಿಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.

ವಿಧಾನಸೌಧದಲ್ಲಿ ಪುಸ್ತಕ ಮೇಳ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಡಿಕೆ ಶಿವಕುಮಾರ್, ಹಿಂದೂ ಆಗಿಯೇ ಹುಟ್ಟಿದ್ದೇನೆ ಹಿಂದೂ ಆಗಿ ಸಾಯುತ್ತೇನೆ ಎಂಬ ಹೇಳಿಕೆಯನ್ನು ಸ್ವಾಗತಿಸಿರುವ ಬಿಜೆಪಿಗೂ ಡಿಕೆ ಶಿವಕುಮಾರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಯಾವ ಬಿಜೆಪಿಯ ಸ್ವಾಗತ ಬೇಡ, ಕಾಂಗ್ರೆಸ್ ಅವರು ಸ್ವಾಗತ ಮಾಡುವುದು ಬೇಡ. ಮಾಧ್ಯಮಗಳು ಮಾತನಾಡುವ ಅವಶ್ಯಕತೆ ಇಲ್ಲ. ನನ್ನ ವೈಯಕ್ತಿಕ ನಂಬಿಕೆ ನನ್ನದು ಎಂದು ಹೇಳಿದ್ದಾರೆ.

ನಾನು ಹೋಗಿದ್ದು ಶಿವನರಾತ್ರಿಗೆ. ಇದು ನನ್ನ ಸ್ವಂತ ನಂಬಿಕೆ ಎಂದು ಹೇಳುವ ಮೂಲಕ ಎಐಸಿಸಿ ಕಾರ್ಯದರ್ಶಿ ಪಿವಿ ಮೋಹನ್‌ ಟೀಕೆ, ಎಚ್ಚರಿಕೆಗಳಿಗೆ ಡಿಕೆ ಶಿವಕುಮಾರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಯಾವ ಧರ್ಮದಲ್ಲಿ ಹುಟ್ಟಬೇಕು ಎಂದು ಯಾರು ಅರ್ಜಿ ಹಾಕಿಕೊಂಡಿಲ್ಲ. ಅಂಬೇಡ್ಕರ್ ಹಿಂದೂ ಧರ್ಮದಲ್ಲಿ ಹುಟ್ಟಿ ಬೌದ್ದ ಧರ್ಮಕ್ಕೆ ಸೇರಿಕೊಂಡರು. ಅದು ಅವರ ಇಷ್ಟ. ನನ್ನ ನಂಬಿಕೆಗಳ ಬಗ್ಗೆ ಚರ್ಚೆ ಆದರೆ ಚರ್ಚೆ ಆಗುತ್ತನೇ ಇರಲಿ ಎಂದರು.

ಕುಂಭಮೇಳದ ವಿಷಯದಲ್ಲಿ ರಾಜಕೀಯ ಮಾಡುತ್ತಿರುವುದನ್ನೂ ವಿರೋಧಿಸಿರುವ ಡಿಕೆ ಶಿವಕುಮಾರ್, ಕುಂಭಮೇಳಕ್ಕೂ ರಾಜಕೀಯಕ್ಕೂ ಏನ್ ಸಂಬಂಧ? ನೀರು, ಗಾಳಿಗೆ ಜಾತಿ ಇದೆಯಾ? ಅಲ್ಲೂ 3 ನದಿ ಸೇರುತ್ತದೆ. ಟಿ ನರಸಿಪುರದಲ್ಲೂ 3 ನದಿ ಸೇರುತ್ತದೆ. ಅದು ಕಮ್ಯೂನಲ್ ವಿಷಯ ಅಲ್ಲ.

Congress general secretary PV Mohan- DK Shivakumar
ಕುಂಭ ಮೇಳವನ್ನು ಯೋಗಿ ಸರ್ಕಾರ ಅದ್ಭುತವಾಗಿ ಆಯೋಜಿಸಿದೆ; ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂ ಆಗಿ ಸಾಯುತ್ತೇನೆ: DK Shivakumar

ಸ್ಪೀಕರ್ ಯುಟಿ ಖಾದರ್ ಸಹ ಕುಂಭಮೇಳೆಕ್ಕೆ ಹೋಗಿದ್ದರು. ಕುಂಭಮೇಳದಲ್ಲಿ ಹೇಗೆ ವ್ಯವಸ್ಥೆ ಅಂತ ನೋಡಿಕೊಂಡು ಬಂದಿದ್ದೇನೆ. ಕಾವೇರಿ ಆರತಿ ಬಗ್ಗೆಯೂ ಮಾತಾಡಿದ್ದೇನೆ. ಅದಕ್ಕೆ ರಾಜಕೀಯ ಬೆಳೆಸಬೇಡಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com