ಟೆಕ್ಕಿ ಅತುಲ್ ಆತ್ಮಹತ್ಯೆ ಪ್ರಕರಣ: ಪತ್ನಿ ನಿಖಿತಾ ಜಾಮೀನು ಅರ್ಜಿ ಜನವರಿ 4ರಂದೇ ಇತ್ಯರ್ಥಕ್ಕೆ ಹೈಕೋರ್ಟ್ ಸೂಚನೆ

ಮಗುವನ್ನು ವಶಕ್ಕೆ ಪಡೆಯುವುದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ಗೆ ಮಗುವಿನ ಅಜ್ಜ(ತಂದೆಯ ಅಪ್ಪ) ಸುಪ್ರೀಂ ಕೋರ್ಟ್‌ನಲ್ಲಿ ಹೆಬಿಯಾಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ.
Atul Subhash wife family members (left) Atul Subhash (right side)
ಟೆಕ್ಕಿ ಅತುಲ್ ಪತ್ನಿ ಕುಟುಂಬ ಸದಸ್ಯರು (ಎಡಭಾಗದ ಚಿತ್ರ) ಅತುಲ್ ಸುಭಾಷ್ (ಬಲಭಾಗದ ಚಿತ್ರ)
Updated on

ಬೆಂಗಳೂರು: ಪತಿ ಅತುಲ್ ಸುಭಾಷ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಧಿತರಾಗಿರುವ ನಿಕಿತಾ ಸಿಂಘಾನಿಯಾ ಸಲ್ಲಿಸಿರುವ ಜಾಮೀನು ಅರ್ಜಿ ಜನವರಿ 4ರಂದೇ ಇತ್ಯರ್ಥಗೊಳಿಸಬೇಕು ಎಂದು ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಸೂಕ್ತ ಕಾರಣ ನೀಡದೆ ಬಂಧಿಸಿದ್ದು ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ನಿಖಿತಾ ಸುಭಾಷ್ ಮತ್ತವರ ಕುಟುಂಬದ ಸದಸ್ಯರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್​ ಚಂದನಗೌಡರ ಅವರಿದ್ದ ರಜಾಕಾಲದ ನ್ಯಾಯಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಅರ್ಜಿದಾರರಲ್ಲಿ ಒಬ್ಬರಾದ ನಿಖಿತಾಗೆ ಸಣ್ಣ ಮಗುವಿದೆ. ಮಗುವನ್ನು ವಶಕ್ಕೆ ಪಡೆಯುವುದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ಗೆ ಮಗುವಿನ ಅಜ್ಜ(ತಂದೆಯ ಅಪ್ಪ) ಸುಪ್ರೀಂ ಕೋರ್ಟ್‌ನಲ್ಲಿ ಹೆಬಿಯಾಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ಸಂಬಂಧ ನಿಖಾ ಸಿಂಘಾನಿಯಾ ಅವರಿಗೆ ನೋಟಿಸ್ ಜಾರಿಯಾಗಿದೆ. ಆ ನೋಟಿಸ್‌ಗೆ ಪ್ರತಿಕ್ರಿಯೆ ನೀಡಬೇಕಾಗಿದೆ.

ಆದರೆ, ಪ್ರಸ್ತುತ ಅರ್ಜಿದಾರರು ನ್ಯಾಯಾಂಗ ಬಂಧನಲ್ಲಿದ್ದು, ಆಕ್ಷೇಪಣೆ ಸಲ್ಲಿಸುವುದಕ್ಕೆ ಸಾಧ್ಯವಾಗುತ್ತಿಲ್ಲ. ಅವರನ್ನು ಬಂಧಿಸುವ ಸಂದರ್ಭದಲ್ಲಿ ಯಾವ ಕಾರಣಕ್ಕಾಗಿ ಬಂಧಿಸಲಾಗಿದೆ ಎಂಬುದಕ್ಕೆ ವಿವರಣೆ ನೀಡಿಲ್ಲ. ಆದ್ದರಿಂದ ಜಾಮೀನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ಸರ್ಕಾರದ ಪರ ವಕೀಲರು ವಾದ ಮಂಡಿಸಿ, ಪ್ರಕರಣ ಸಂಬಂಧ ತನಿಖಾಧಿಕಾರಿಗಳಿ ಮಾಹಿತಿ ಪಡೆಯಬೇಕಿದೆ. ಆದ್ದರಿಂದ ಜಾಮೀನು ಮಂಜೂರು ಮಾಡಬಾರದು ಎಂದು ಪೀಠಕ್ಕೆ ತಿಳಿಸಿದರು.

ವಾದ ಆಲಿಸಿದ ನ್ಯಾಯಪೀಠ, ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿದಾರರ ಜಾಮೀನು ಅರ್ಜಿ 2025ರ ಜನವರಿ 4ಕ್ಕೆ ನಿಗದಿಯಾಗಿದ್ದು, ಅಂದೇ ವಿಚಾರಣೆ ಪೂರ್ಣಗೊಳಿಸಿ ಇತ್ಯರ್ಥಪಡಿಸಬೇಕು ಎಂದು ಸೂಚನೆ ನೀಡಿ ವಿಚಾರಣೆ ಮುಂದೂಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com