ಸಾರಿಗೆ ನೌಕರರಿಗೆ ನಗದು ರಹಿತ ವೈದ್ಯಕೀಯ ಸೇವೆ: ಜನವರಿ ಮೊದಲ ವಾರದಲ್ಲಿ ಯೋಜನೆಗೆ ಚಾಲನೆ

ಈ ಯೋಜನೆಯಡಿ, ಚಾಲಕರು ಮತ್ತು ಕಂಡಕ್ಟರ್‌ಗಳು ಮತ್ತು ಅವರ ಕುಟುಂಬದ ಸದಸ್ಯರು ರಾಜ್ಯದಾದ್ಯಂತ 240 ಆಸ್ಪತ್ರೆಗಳಲ್ಲಿ ನಗದು ರಹಿತ ಚಿಕಿತ್ಸೆಗೆ ಅರ್ಹರಾಗಿರುತ್ತಾರೆ.
ನಗದು ರಹಿತ ವಹಿವಾಟು (ಸಂಗ್ರಹ ಚಿತ್ರ)
ನಗದು ರಹಿತ ವಹಿವಾಟು (ಸಂಗ್ರಹ ಚಿತ್ರ)
Updated on

ಬೆಂಗಳೂರು: ಸಾರಿಗೆ ನೌಕರರಿಗೆ ನಗದು ರಹಿತ ವೈದ್ಯಕೀಯ ಸೇವೆ ಒದಗಿಸುವ ಯೋಜನೆಗೆ ರಾಜ್ಯ ಸರ್ಕಾರ ಜನವರಿ ಮೊದಲ ವಾರದಲ್ಲಿ ಚಾಲನೆ ನೀಡಲಿದೆ.

ಈ ಯೋಜನೆಯಡಿ, ಚಾಲಕರು ಮತ್ತು ಕಂಡಕ್ಟರ್‌ಗಳು ಮತ್ತು ಅವರ ಕುಟುಂಬದ ಸದಸ್ಯರು ರಾಜ್ಯದಾದ್ಯಂತ 240 ಆಸ್ಪತ್ರೆಗಳಲ್ಲಿ ನಗದು ರಹಿತ ಚಿಕಿತ್ಸೆಗೆ ಅರ್ಹರಾಗಿರುತ್ತಾರೆ. ಈ ಮೊದಲು ನೌಕರರು ಚಿಕಿತ್ಸೆಗೆ ಮೊದಲು ಹಣವನ್ನು ಪಾವತಿ ಮಾಡಬೇಕಿತ್ತು. ನಂತರ ಹಣವನ್ನು ಮರುಪಾವತಿ ಮಾಡಲಾಗುತ್ತಿತ್ತು. ಯೋಜನೆಯಡಿ ಇದೀಗ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ಗೊತ್ತುಪಡಿಸಿದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ "ಕಾರ್ಡ್" ಮೂಲಕ ನಗದು ರಹಿತ ಚಿಕಿತ್ಸೆಯನ್ನು ಪಡೆಯಬಹುದಾಗಿದೆ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ನಗದು ರಹಿತ ಚಿಕಿತ್ಸಾ ಸೌಲಭ್ಯ ಒದಗಿಸುವಂತೆ ಮನವಿಗಳು ಬಂದಿದ್ದವು. ಹೀಗಾಗಿ ಸರ್ಕಾರ ಸಾರಿಗೆ ನೌಕರರ ಅನುಕೂಲಕ್ಕಾಗಿ ಹಲವು ಹೊಸ ಉಪಕ್ರಮಗಳನ್ನು ಪರಿಚಯಿಸುತ್ತಿದೆ. ಈ ಯೋಜನೆಯಡಿ ನೌಕರರಿಗೆ "ಕಾರ್ಡ್" ನೀಡಲಾಗುವುದು, ಕಾರ್ಡ್ ಮೂಲಕ ರಾಜ್ಯದಾದ್ಯಂತ 240 ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ಹಣ ಪಾವತಿಸಬೇಕಾಗಿಲ್ಲ ಎಂದು ಹೇಳಿದರು.

ಈ ಯೋಜನೆಯನ್ನು ಮೊದಲು ಕೆಎಸ್‌ಆರ್‌ಟಿಸಿ ನೌಕರರಿಗೆ ಪರಿಚಯಿಸಲಾಗುವುದು. ನಂತರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಮತ್ತು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲ್ಯುಕೆಆರ್‌ಟಿಸಿ) ಗೂ ವಿಸ್ತರಿಸಲಾಗುವುದು ಎಂದು ತಿಳಿಸಿದರು.

ನಗದು ರಹಿತ ವಹಿವಾಟು (ಸಂಗ್ರಹ ಚಿತ್ರ)
BMTC ಬಸ್‌ಗಳಲ್ಲಿ QR ಕೋಡ್‌: ಸ್ಕ್ಯಾನಿಂಗ್‌ಗೆ ಸಿದ್ಧ, ಆದರೆ ಇಂಟರ್‌ನೆಟ್ ಕನೆಕ್ಷನ್ ಸಮಸ್ಯೆಯಿಂದ ಅಡ್ಡಿ!

ಬಿಎಂಟಿಸಿಯ ಅಧಿಕಾರಿಗಳು ಮತ್ತು ಇತರ ಉದ್ಯೋಗಿಗಳ ಕುಟುಂಬಗಳ ಆರ್ಥಿಕ ಭದ್ರತೆಯನ್ನು ಹೆಚ್ಚಿಸಲು, ಸಮೂಹ ವಿಮಾ ಯೋಜನೆಯಡಿ ಪರಿಹಾರವನ್ನು ಪರಿಷ್ಕರಿಸಲಾಗಿದೆ. ಫೆಬ್ರವರಿ 19, 2024 ರಿಂದ, ಅನಾರೋಗ್ಯ ಅಥವಾ ಇತರ ಕಾರಣಗಳಿಂದ ತಮ್ಮ ಜೀವನವನ್ನು ಕಳೆದುಕೊಳ್ಳುವ ಉದ್ಯೋಗಿಗಳಿಗೆ ಪರಿಹಾರದ ಮೊತ್ತವನ್ನು 3 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಒಟ್ಟಾರೆಯಾಗಿ ಈವರೆಗೆ 1.70 ಕೋಟಿ ರೂಪಾಯಿ ಪರಿಹಾರ ವಿತರಿಸಲಾಗಿದೆ. ಹದಿನೇಳು ಮಂದಿ ನೌಕರರಿಗೆ ತಲಾ 10 ಲಕ್ಷ ರೂ.ಗಳನ್ನು ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಈ ಯೋಜನೆಗೆ ಕೆಎಸ್ಆರ್ಟಿಸಿ 20 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು, ನೌಕರರ ವೇತನದಿಂದ ಅತ್ಯಲ್ಪ ಮೊತ್ತವನ್ನು ಕಡಿತಗೊಳಿಸಲಾಗುವುದು ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com