ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಪ್ರತಿಭಟನೆ: ನಾರಾಯಣಸ್ವಾಮಿ, ಸಿಟಿ ರವಿ ಸೇರಿ 11 ಮಂದಿ ವಿರುದ್ಧ FIR

ಪ್ರತಿಭಟನೆಯನ್ನು ಆಯೋಜಿಸಲು ಯಾವುದೇ ಅನುಮತಿಯನ್ನು ಕೇಳಲಾಗಿಲ್ಲ ಮತ್ತು ಡಿಸೆಂಬರ್ 31ರಂದು ಬಿಜೆಪಿ ಪಕ್ಷದ ಸದಸ್ಯರ ವಿರುದ್ಧ ಕಾನೂನುಬಾಹಿರ ಸಭೆಗಾಗಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಿಜೆಪಿ ಪ್ರತಿಭಟನೆ
ಬಿಜೆಪಿ ಪ್ರತಿಭಟನೆPTI
Updated on: 

ಬೆಂಗಳೂರು: ಅನುಮತಿ ಪಡೆಯದೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ರಾಜ್ಯ ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಎಂಎಲ್‌ಸಿ ಸಿಟಿ ರವಿ ಮತ್ತು ಪಕ್ಷದ ಇತರ 11 ಪದಾಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಕಳೆದ ವಾರ ಬೀದರ್‌ನಲ್ಲಿ ಗುತ್ತಿಗೆದಾರ ಸಚಿನ್ ಮಾನಪ್ಪ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಮುಖಂಡರು ಮಂಗಳವಾರ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆ ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಸಿ, ಪೋಸ್ಟರ್ ಅಂಟಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಪ್ರತಿಭಟನೆಯನ್ನು ಆಯೋಜಿಸಲು ಯಾವುದೇ ಅನುಮತಿಯನ್ನು ಕೇಳಲಾಗಿಲ್ಲ ಮತ್ತು ಡಿಸೆಂಬರ್ 31ರಂದು ಬಿಜೆಪಿ ಪಕ್ಷದ ಸದಸ್ಯರ ವಿರುದ್ಧ ಕಾನೂನುಬಾಹಿರ ಸಭೆಗಾಗಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸ್ ಸಬ್-ಇನ್‌ಸ್ಪೆಕ್ಟರ್‌ರ ದೂರಿನ ಆಧಾರದ ಮೇಲೆ, ಸಾರ್ವಜನಿಕ ಪ್ರದೇಶ ವಿರೂಪಗೊಳಿಸುವಿಕೆ ಕಾಯ್ದೆ ಸಂಬಂಧ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಬಿಜೆಪಿ ಪ್ರತಿಭಟನೆ
ನಾನು ನೀಡಿದ ದೂರಿನ ಮೇಲೆ ಪೊಲೀಸರು ಇನ್ನೂ ಎಫ್‌ಐಆರ್ ದಾಖಲಿಸಿಲ್ಲ: ಸಿಟಿ ರವಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com