ಹೊಸ ವರ್ಷಾಚರಣೆ ಮುಕ್ತಾಯದ ಬೆನ್ನಲ್ಲೇ ದುರಂತ: ರಾಜ್ಯದಲ್ಲಿ ಪ್ರತ್ಯೇಕ ಅಪಘಾತಗಳಲ್ಲಿ ಐವರು ಸಾವು

ಚಾಮರಾಜ ನಗರದಲ್ಲಿ ಹೊಸ ವರ್ಷಾಚರಣೆಯ ಸಂಭ್ರಮ ಮುಗಿಸಿ ಹಿಂತಿರುಗುವಾಗ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.
Five killed in separate accidents in Karnataka
ಮಾಗಡಿ ರಸ್ತೆ ಕಾರು ಅಪಘಾತ
Updated on

ಬೆಂಗಳೂರು: ರಾಜ್ಯಜದಲ್ಲಿ ಹೊಸ ವರ್ಷಾಚರಣೆ ಬೆನ್ನಲ್ಲೇ ಚಾಮರಾಜನಗರ ಮತ್ತು ಮಾಗಡಿಯಲ್ಲಿ ಸಂಭವಿಸಿದ 2 ಪ್ರತ್ಯೇಕ ಅಪಘಾತಗಳಲ್ಲಿ ಐದು ಮಂದಿ ಸಾವನ್ನಪ್ಪಿದ್ದಾರೆ.

ಚಾಮರಾಜ ನಗರದಲ್ಲಿ ಹೊಸ ವರ್ಷಾಚರಣೆಯ ಸಂಭ್ರಮ ಮುಗಿಸಿ ಹಿಂತಿರುಗುವಾಗ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಕೊಡಸೋಗೆ ಬಳಿ ಇಂದು ಮುಂಜಾನೆ ಈ ಘಟನೆ ನಡೆದಿದೆ.

ಬೊಮ್ಮಲಾಪುರ ಸೆಸ್ಕ್ ಕಚೇರಿಯಲ್ಲಿ ಅಸಿಸ್ಟೆಂಟ್ ಪವರ್ ಮ್ಯಾನ್ ಆಗಿದ್ದ ಪ್ರತಾಪ್(28) ಹಾಗೂ ಕೊಂಗಳ್ಳಯ್ಯ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದು, ತೀವ್ರವಾಗಿ ಗಾಯಗೊಂಡಿರುವ ಮಂಡ್ಯ ಜಿಲ್ಲೆಯ ಅಭಿಯನ್ನು ಸಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕೊಡಸೋಗೆ ಸಮೀಪದ ರಸ್ತೆ ಬದಿಯಲ್ಲಿದ್ದ ಲೈಟ್ ಕಂಬಕ್ಕೆ ಕಾರು ಡಿಕ್ಕಿಯಾದ ರಭಸಕ್ಕೆ ವಿದ್ಯುತ್ ಕಂಬ ಕಾರಿನ ಮೇಲೆ ಮುರಿದು ಬಿದ್ದಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೆರಕಣಾಂಬಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ.

Five killed in separate accidents in Karnataka
2024: ಮಾರಣಾಂತಿಕ ಅಪಘಾತಗಳ ಪ್ರಮಾಣ ಶೇ.1.26 ರಷ್ಟು ಕಡಿಮೆ- ಬೆಂಗಳೂರು ಟ್ರಾಫಿಕ್ ಪೊಲೀಸ್

ಕಾರು ಪಲ್ಟಿ

ಇತ್ತ ಮಾಗಡಿಯಲ್ಲೂ ಇಂತಹುದೇ ದುರಂತ ನಡೆದಿದ್ದು, ಸ್ನೇಹಿತರೆಲ್ಲಾ ಟೀ ಕುಡಿಯಲು ಹೊರಟಿದ್ದ ಯುವಕರ ಕಾರು ಪಲ್ಟಿಯಾಗಿ, ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕಾರಿನಲ್ಲಿದ್ದ ಐವರಿಗೆ ಗಾಯವಾಗಿವೆ.

ಮಾಗಡಿ ತಾಲೂಕಿನ ಹೊಸಪಾಳ್ಯದ ಜನತಾ ಕಾಲೋನಿ ಬಳಿ ಬೆಳಗಿನ ಜಾವ 3 ಗಂಟೆಗೆ ಅಪಘಾತ ನಡೆದು ಮಾಗಡಿ ತಾಲೂಕಿನ ಚೋಳನಾಯಕನಹಳ್ಳಿಯ ಮಂಜು (31), ಕಿರಣ್ (30) ಎಂಬುವವರು ಮೃತಪಟ್ಟಿದ್ದಾರೆ. ಗಾಯಾಳುಗಳಿಗೆ ಮಾಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮತ್ತೊಂದು ಅಪಘಾತದಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ಮಾಗಡಿ ಹೊಸ ಪೇಟೆ ಸರ್ಕಲ್ ಬಳಿ ಘಟನೆ ನಡೆದಿದೆ. ಮಧ್ಯರಾತ್ರಿ 12.30ರ ಸಮಯದಲ್ಲಿ ಈ ಘಟನೆ ನಡೆದಿದ್ದು, 45 ವರ್ಷದ ಸಿದ್ದಪ್ಪ ಎಂಬ ವ್ಯಕ್ತಿ ಸಾವಿಗೀಡಾಗಿದ್ದಾರೆ.

ಅಂತೆಯೇ ದ್ವಿಚಕ್ರ ವಾಹನ ಸವಾರ ಮೋಹನ್ ಎಂಬಾತನಿಗೆ ಗಾಯಗಳಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com