ಮದ್ಯದ ಹೊಳೆಯಲ್ಲಿ ಮಿಂದೆದ್ದ ಕರ್ನಾಟಕ: ಅಬಕಾರಿ ಇಲಾಖೆಗೆ ಹರಿದು ಬಂದ ಆದಾಯ; ಅರ್ಧ ದಿನದಲ್ಲೇ 308 ಕೋಟಿ ರೂ ಲಿಕ್ಕರ್ ಸೇಲ್!
ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಗೆ ನೂರಾರು ಕೋಟಿ ರೂಪಾಯಿ ಆದಾಯ ಹರಿದುಬಂದಿದೆ. ನಿನ್ನೆ ಒಂದೇ ದಿನದಲ್ಲಿ ಕೆಎಸ್‌ಬಿಸಿಎಲ್‌ನಿಂದ ಬರೋಬ್ಬರಿ 308 ಕೋಟಿ ರೂ. ಮದ್ಯ ಮಾರಾಟವಾಗಿದೆ.
ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಗೆ ನೂರಾರು ಕೋಟಿ ರೂಪಾಯಿ ಆದಾಯ ಹರಿದು ಬಂದಿದೆ. ಡಿಸೆಂಬರ್ 31 ರ ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರ್ಧ ದಿನದಲ್ಲಿ KSblc ಯಿಂದ ಬರೋಬ್ಬರಿ 308 ಕೋಟಿ ರೂಪಾಯಿ ಮದ್ಯ ಮಾರಾಟವಾಗಿದೆ.
ಅಬಕಾರಿ ಇಲಾಖೆಯ ನಿರೀಕ್ಷೆಗೂ ಮೀರಿ ಮಾರಾಟವಾಗಿದೆ. ಅಬಕಾರಿ ಇಲಾಖೆ 250 ಕೋಟಿ ರೂ. ಮೌಲ್ಯದ ಮದ್ಯ ಮಾರಾಟದ ಗುರಿ ಇಟ್ಟುಕೊಂಡಿತ್ತು. ಆದರೆ, ಅದನ್ನೂ ಮೀರಿ ಮಾರಾಟವಾಗಿದೆ. ಕಳೆದ ವರ್ಷ 2023 ರ ಡಿಸೆಂಬರ್ 31 ರಂದು 193 ಕೋಟಿ ರುಪಾಯಿ ಮದ್ಯ ಮಾರಾಟ ಆಗಿತ್ತು. ಈ ಬಾರಿ 2024 ಡಿ.31 ರಂದು 7,305 ಮದ್ಯ ಮಾರಾಟಗಾರರು ಕೆಎಸ್‌ಬಿಸಿಎಲ್‌ನಿಂದ ಮದ್ಯ ಖರೀದಿ ಮಾಡಿದ್ದಾರೆ.
ಐಎಂಎಲ್ 4,83,715 ಲಕ್ಷ ಬಾಕ್ಸ್ ಮಾರಾಟದಿಂದ 250.25 ಕೋಟಿ ಆದಾಯ ಸಂಗ್ರಹವಾಗಿದೆ. 2,92,339 ಲಕ್ಷ ಬಿಯರ್ ಬಾಕ್ಸ್ ಮಾರಾಟದಿಂದ 57,75 ಕೋಟಿ ಆದಾಯ ಸಂಗ್ರಹವಾಗಿದೆ. ಒಟ್ಟು 7,76,042 ಲಕ್ಷ ಬಾಕ್ಸ್ ಮದ್ಯ ಮಾರಾಟದಿಂದ ಒಟ್ಟು 308 ಕೋಟಿ ರುಪಾಯಿ ಆದಾಯ ಸಂಗ್ರಹವಾಗಿದೆ.
27-12-2024 ರ ಶುಕ್ರವಾರದಂದು ಕೂಡ ಬರೋಬ್ಬರಿ 408.58 ಕೋಟಿ ರುಪಾಯಿ ಮದ್ಯ ಮಾರಾಟವಾಗಿತ್ತು. ಐಎಂಎಲ್ 6,22,062 ಲಕ್ಷ ಬಾಕ್ಸ್ ಮಾರಾಟದಿಂದ 327,50 ಕೋಟಿ ರುಪಾಯಿ ಆದಾಯ ಸಂಗ್ರಹವಾಗಿತ್ತು. ಬಿಯರ್ 4,04,998 ಲಕ್ಷ ಬಾಕ್ಸ್ ಮಾರಾಟದಿಂದ 80,58 ಕೋಟಿ ರುಪಾಯಿ ಆದಾಯ ಗಳಿಕೆಯಾಗಿತ್ತು. ಐಎಂಎಲ್, ಬಿಯರ್ ಸೇರಿ ಒಟ್ಟು- 10,27,060 ಲಕ್ಷ ಬಾಕ್ಸ್ ಮದ್ಯ ಮಾರಾಟದಿಂದ 408.50 ಕೋಟಿ ರುಪಾಯಿ ಆದಾಯ ಹರಿದುಬಂದಿತ್ತು.
ಬೆಂಗಳೂರಿನಲ್ಲಿ ಹೊಸ ವರ್ಷ ಆಚರಣೆ ಸಂಭ್ರಮದಿಂದ ನಡೆದಿದೆ. ಎಂ ಜಿ ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ನಗರದ ವಿವಿಧ ಕಡೆಗಳಲ್ಲಿ ಲಕ್ಷಾಂತರ ಮಂದಿ ಸಂಭ್ರಮದಿಂದ ಕುಣಿದು ಕುಪ್ಪಳಿಸಿದ್ದಾರೆ. ಕೆಲವೆಡೆ ಸಣ್ಣಪುಟ್ಟ ಅಹಿತಕರ ಘಟನೆಗಳು ನಡೆದಿದ್ದು ಬಿಟ್ಟರೆ, ಒಟ್ಟಾರೆಯಾಗಿ ಹೊಸ ವರ್ಷದ ಸ್ವಾಗತ, ಸಂಭ್ರಮಾಚರಣೆ ಶಾಂತಿಯುತವಾಗಿ ನೆರವೇರಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ