ಬಿಜೆಪಿ ಸಂಸದ ತೇಜಸ್ವಿ ಸೂರ್ಯ
ಬಿಜೆಪಿ ಸಂಸದ ತೇಜಸ್ವಿ ಸೂರ್ಯ

Namma Metro ಹಳದಿ ಮಾರ್ಗ: ಕಾರ್ಯಾಚರಣೆ ವಿಳಂಬಕ್ಕೆ ಕಾರಣ ತಿಳಿಸಿದ ಸಂಸದ ತೇಜಸ್ವಿ ಸೂರ್ಯ

ಜನವರಿ ಅಂತ್ಯ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ಎರಡನೇ ರೈಲನ್ನು ಮತ್ತು ಏಪ್ರಿಲ್‌ನಲ್ಲಿ ಮೂರನೇ ರೈಲನ್ನು ತಲುಪಿಸುವುದಾಗಿ ತೀತಗಢ್‌ ತಿಳಿಸಿದೆ.
Published on

ಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಮತ್ತಷ್ಟು ವಿಳಂಬವಾಗುತ್ತಿತ್ತು, ಕಾರ್ಯಾಚರಣೆ ವಿಳಂಬಕ್ಕೆ ಸಂಸದ ತೇಜಸ್ವಿ ಸೂರ್ಯ ಅವರು ಕಾರಣ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಿಮಗೆಲ್ಲರಿಗೂ ತಿಳಿದಿರುವಂತೆ, ನಮ್ಮ ಮೆಟ್ರೋ ಹಳದಿ ಮಾರ್ಗದ ಕಾರ್ಯಾಚರಣೆಯ ಪ್ರಾರಂಭವು ಬಿಎಂಆರ್'ಸಿಎಲ್ ನೀಡಿದ ಎಲ್ಲಾ ಗಡುವನ್ನು ಪೂರೈಸುವಲ್ಲಿ ವಿಫಲವಾಗಿದೆ. ಇದು ನಮ್ಮೆಲ್ಲರನ್ನು ನಿರಾಶೆಗೊಳಿಸಿದೆ. ರೈಲುಗಳ ಅಲಭ್ಯತೆಯೇ ಕಾರ್ಯಾಚರಣೆ ವಿಳಂಬಕ್ಕೆ ಪ್ರಮುಖ ಕಾರಣ ಎಂದು ಹೇಳಿದ್ದಾರೆ.

ಮುಂದುವರೆದು, ಕಳೆದ ಕೆಲವು ತಿಂಗಳುಗಳಿಂದ, ಉತ್ಪಾದನೆಯನ್ನು ತ್ವರಿತಗೊಳಿಸಲು ನಾನು ರೈಲು ತಯಾರಕರಾದ ತೀತಗಢ್ ರೈಲ್ ಸಿಸ್ಟಮ್ಸ್‌ನೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ಎಂಜಿನಿಯರ್‌ಗಳಿಗೆ ವೀಸಾ ಸೇರಿದಂತೆ ಹಲವು ರಸ್ತೆ ತಡೆಗಳನ್ನು ಪರಿಹರಿಸಲಾಗಿದೆ. ಈಗ ಜನವರಿ 6 ರಂದು ಬೆಂಗಳೂರಿಗೆ ಕಳುಹಿಸಲು ಮೊದಲ ರೈಲು ಸಿದ್ಧವಾಗಿದೆ. ಜನವರಿ ಅಂತ್ಯ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ಎರಡನೇ ರೈಲನ್ನು ಮತ್ತು ಏಪ್ರಿಲ್‌ನಲ್ಲಿ ಮೂರನೇ ರೈಲನ್ನು ತಲುಪಿಸುವುದಾಗಿ ತೀತಗಢ್‌ ತಿಳಿಸಿದೆ. ಅದಾದ ಬಳಿಕ, ತಿಂಗಳಿಗೆ 1 ರೈಲನ್ನು ಸರಬರಾಜು ಮಾಡುವುದಾಗಿ ಹೇಳಿದೆ.

ಸೆಪ್ಟೆಂಬರ್ ವೇಳೆಗೆ ತಿಂಗಳಿಗೆ 2 ರೈಲುಗಳನ್ನು ಬೆಂಗಳೂರಿಗೆ ಕಳುಹಿಸುವ ಪ್ರಯತ್ನ ಸಹ ಆಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸಂಸದ ತೇಜಸ್ವಿ ಸೂರ್ಯ
ಹಳದಿ ಮಾರ್ಗ:2 ಮೆಟ್ರೋ ರೈಲು ಕೋಚ್ ತ್ವರಿತ ಪೂರೈಕೆಗೆ ಚೀನಾ ಗುತ್ತಿಗೆದಾರ ಸಂಸ್ಥೆ ಒಪ್ಪಿಗೆ

ಕೇಂದ್ರದ ನಗರಾಭಿವೃದ್ಧಿ ಇಲಾಖೆ ಸಚಿವರಿಗೂ ಜನವರಿ 6 ರಂದು ತೀತಗಢಕ್ಕೆ ತೆರಳಿ ಪರಿಶೀಲಿಸಲು ಮನವಿ ಮಾಡಿಕೊಂಡಿದ್ದೇನೆ. ಈ ವೇಳೆ ಬೆಂಗಳೂರಿಗೆ ಬರಲಿರುವ ಮೆಟ್ರೋ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ರೈಲುಗಳ ತ್ವರಿತ ಪೂರೈಕೆಗೆ ಸಹಾಯ ಮಾಡಲು ಘಟಕ ಪರಿಶೀಲನೆ ಮಾಡಲಿದ್ದಾರೆ. ಈ ಸಂಬಂಧ ನಾನು ಕೊಲ್ಕತ್ತಾಗೆ ತೆರಳಲಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

ಹಳದಿ ಮಾರ್ಗ ಕಾರ್ಯಾಚರಣೆ ವಿಳಂಬದಿಂದ ನಾನು ನಿರಾಶೆಗೊಂಡಿದ್ದಾರೆ. ಆದರೆ, ಇನ್ಮುಂದೆ ಯಾವುದೇ ರೀತಿಯ ಅಡ್ಡಿಗಳು ಬರದಂತೆ ನೋಡಿಕೊಳ್ಳುತ್ತೇವೆ. ಶೀಘ್ರದಲ್ಲೇ ಹಳದಿ‌ ಮೆಟ್ರೋ ಮಾರ್ಗ ಕಾರ್ಯಾಚರಣೆ ಆಗಲಿದೆ ಎಂದು ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com