
ಬೆಂಗಳೂರು: ದೂರು ನೀಡಲು ಬಂದ ಮಹಿಳೆಯನ್ನೇ ತನ್ನ ಕಾಮತೃಷೆಗೆ ಬಳಸಿಕೊಂಡ ಆರೋಪದ ಮೇರೆಗೆ ತುಮಕೂರು ಜಿಲ್ಲೆ ಮಧುಗಿರಿ ಉಪ ವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯೊಂದಿಗೆ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಡಿವೈಎಸ್‌ಪಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿತ್ತು.
ಜಮೀನು ವ್ಯಾಜ್ಯದ ಬಗ್ಗೆ ಪಾವಗಡ ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಸಂಬಂಧ ವಿಚಾರಿಸುವ ಸಲುವಾಗಿ ಮಹಿಳೆಯನ್ನು ಕಚೇರಿಗೆ ಕರೆಯಿಸಿದ ಆಕೆಯನ್ನು ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋಗಿ ಕಾಮತೃಷೆಗೆ ಬಳಸಿಕೊಂಡಿದ್ದರು.
ಇದನ್ನು ಮೊಬೈಲ್ ನಲ್ಲಿ ಸೆರೆ ಹಿಡಿದ ವ್ಯಕ್ತಿಯೊಬ್ಬರು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದರು. ಗೃಹ ಸಚಿವರ ತವರು ಜಿಲ್ಲೆಯಲ್ಲಿಯೇ ನಡೆದ ಈ ಘಟನೆ ಸರ್ಕಾರಕ್ಕೆ ಮುಜುಗರವನ್ನು ಮಾಡಿತ್ತು. ಈ ಮಧ್ಯೆ ಅವರನ್ನು ಡಿಜಿ ಮತ್ತು ಐಜಿಪಿ ಸೇವೆಯಿಂದ ಅಮಾನತುಗೊಳಿಸಿದ್ದಾರೆ.
Advertisement