ಸಿ.ಟಿ ರವಿ ಅವಾಚ್ಯ ಪದ ಬಳಕೆ ಆರೋಪ ಪ್ರಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ CID ಅಧಿಕಾರಿಗಳ ಭೇಟಿ, ಹೇಳಿಕೆ ದಾಖಲು

ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಕಲಾಪದ ವೇಳೆ ಸಚಿವರ ವಿರುದ್ಧ ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಅಶ್ಲೀಲ ಪದ ಬಳಿಸಿದ್ದರು. ಈ ಕುರಿತು ಸಿಐಡಿ ತನಿಖೆಗೆ ರಾಜ್ಯ ಸರಕಾರ ಆದೇಶಿಸಿತ್ತು‌.
ಲಕ್ಷ್ಮೀ ಹೆಬ್ಬಾಳ್ಕರ್
ಲಕ್ಷ್ಮೀ ಹೆಬ್ಬಾಳ್ಕರ್
Updated on: 

ಬೆಂಗಳೂರು: ವಿಧಾನಪರಿಷತ್ ಕಲಾಪದಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರು ಅವಾಚ್ಯ ಪದ ಬಳಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಶುಕ್ರವಾರ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಭೇಟಿ ನೀಡಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಕಲಾಪದ ವೇಳೆ ಸಚಿವರ ವಿರುದ್ಧ ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಅಶ್ಲೀಲ ಪದ ಬಳಿಸಿದ್ದರು. ಈ ಕುರಿತು ಸಿಐಡಿ ತನಿಖೆಗೆ ರಾಜ್ಯ ಸರಕಾರ ಆದೇಶಿಸಿತ್ತು‌.

ಪ್ರಕರಣದ ತನಿಖಾಧಿಕಾರಿಯಾಗಿರುವ ಸಿಐಡಿಯ ಡಿವೈಎಸ್‌ಪಿ ಅಂಜುಮಾಲಾ ನಾಯಕ್ ನೇತೃತ್ವದ ತಂಡ, ಬೆಂಗಳೂರಿನ ಸ್ಯಾಂಕಿ ರಸ್ತೆಯಲ್ಲಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸರ್ಕಾರಿ ನಿವಾಸಕ್ಕೆ ತೆರಳಿ ಹೇಳಿಕೆ ದಾಖಲಿಸಿಕೊಂಡಿದೆ.

ತನಿಖಾಧಿಕಾರಿಗಳ ಮುಂದೆ ಹೇಳಿಕೆ ದಾಖಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಪ್ರಕರಣವನ್ನು ನಾನು ಪ್ರತಿಷ್ಠೆಯಾಗಿ ಸ್ವೀಕರಿಸುವುದಿಲ್ಲ. ಇದು ನನ್ನ ಸ್ವಾಭಿಮಾನದ ಪ್ರಶ್ನೆ ಹಾಗೂ ಓರ್ವ ಹೆಣ್ಣುಮಗಳಿಗೆ ಆಗಿರುವ ಅವಮಾನದ ಪ್ರಶ್ನೆಯಾಗಿದೆ. ಪ್ರಕರಣದ ತನಿಖೆ ಈಗಿನ್ನೂ ಆರಂಭವಾಗಿದೆ. ಹಿನ್ನಡೆ ಅಥವಾ ಮುನ್ನಡೆಯ ಕುರಿತು ಚಿಂತಿಸುವುದಿಲ್ಲ. ಕಾನೂನು ಚೌಕಟ್ಟಿನಲ್ಲಿ ಏನು ಆಗಬೇಕಿದೆಯೋ ಅದು ಆಗಲಿದೆ. ಈ ವಿಚಾರದಲ್ಲಿ ಓರ್ವ ಹೆಣ್ಣುಮಗಳಾಗಿ ಎಲ್ಲರೂ ನನ್ನೊಂದಿಗೆ ನಿಲ್ಲಬೇಕು ಎಂದು ಕೇಳಿಕೊಳ್ಳುತ್ತೇನೆ ಎಂದು ಹೇಳಿದರು.

ಲಕ್ಷ್ಮೀ ಹೆಬ್ಬಾಳ್ಕರ್
ಲಕ್ಷ್ಮೀ ಹೆಬ್ಬಾಳ್ಕರ್'ಗೆ 'ಆ' ಪದ ಹೇಳಿದ್ದು ಸತ್ಯ, ನಾನೇ ಸಾಕ್ಷಿ: ಯತೀಂದ್ರ ಸಿದ್ದರಾಮಯ್ಯ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com