
ಬೆಂಗಳೂರು: ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆಗೆ ಪ್ರಕರಣದಲ್ಲಿ ಬಂಧಿತರಾಗಿದ್ದ ಅವರ ಪತ್ನಿ ನಿಖಿತಾ ಸಿಂಘಾನಿಯಾ, ಅತ್ತೆ ನಿಶಾ ಸಿಂಘಾನಿಯಾ ಮತ್ತು ನಿಖಿತಾ ಸಹೋದರ ಅನುರಾಗ್ ಸಿಂಘಾನಿಯಾ ಅವರಿಗೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ.
ಜಾಮೀನು ಕೋರಿ ಮೂವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್, ಅತುಲ್ ಪತ್ನಿ ನಿಖಿತಾ ಸಿಂಘಾನಿಯಾ, ಅತ್ತೆ ನಿಶಾ ಸಿಂಘಾನಿಯಾ ಮತ್ತು ಬಾಮೈದ ಅನುರಾಗ್ ಸಿಂಘಾನಿಯಾಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
34 ವರ್ಷದ ಟೆಕ್ಕಿ ಅತುಲ್ ಅವರು ಡಿಸೆಂಬರ್ 9 ರಂದು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ತನ್ನ ಸಾವಿಗೆ ವಿಚ್ಛೇದಿತ ಹೆಂಡತಿ ಮತ್ತು ಅವಳ ಕುಟುಂಬ ಸದಸ್ಯರ ಕಿರುಕುಳವೇ ಕಾರಣ ಎಂದು ಆರೋಪಿಸಿದ್ದರು.
ನಂತರ ಟೆಕ್ಕಿ ಅತುಲ್ ಸುಭಾಷ್ ಅವರ ಸಹೋದರ ವಿಕಾಸ್ ನೀಡಿದ ದೂರಿನ ಆಧಾರದ ಮೇಲೆ ಅತುಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಮಾರತ್‌ಹಳ್ಳಿ ಪೊಲೀಸರು ನಿಖಿತಾ ಸಿಂಘಾನಿಯಾ, ಆಕೆಯ ತಾಯಿ ನಿಶಾ ಸಿಂಘಾನಿಯಾ ಮತ್ತು ಸಹೋದರ ಅನುರಾಗ್ ಸಿಂಘಾನಿಯಾ ಅವರನ್ನು ಕಳೆದ ಡಿಸೆಂಬರ್ 15ರಂದು ಬಂಧಿಸಿದ್ದರು.
ವಿಚ್ಛೇದನಕ್ಕಾಗಿ 3 ಕೋಟಿ ರೂಪಾಯಿ ನೀಡುವಂತೆ ಪತ್ನಿ ಮತ್ತು ಅತ್ತೆ ಒತ್ತಡ ಹೇರಿದ್ದರು ಎಂದು ಅತುಲ್ ಸುಭಾಷ್ 40 ಪುಟಗಳ ಡೆತ್ ನೋಟ್ ಮತ್ತು 6 ನಿಮಿಷ 50 ಸೆಕೆಂಡ್ ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.
Advertisement