
ಬೆಂಗಳೂರು: ಚಿತ್ರಕಲಾ ಪರಿಷತ್ತು ಕುಮಾರಕೃಪ ರಸ್ತೆಯಲ್ಲಿ ಭಾನುವಾರ 22ನೇ ಚಿತ್ರ ಸಂತೆಯನ್ನು ಆಯೋಜಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 6ರಿಂದ ರಾತ್ರಿ 9ರವರೆಗೆ ಕುಮಾರ ಕೃಪಾ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಕುಮಾರಕೃಪಾ ರಸ್ತೆಯಲ್ಲಿ ಈ ಭಾನುವಾರ (ಜನವರಿ 5) 22ನೇ ಚಿತ್ರಸಂತೆ ನಡೆಯುವ ಕಾರಣ, ಕುಮಾರಕೃಪಾ ರಸ್ತೆಯ ವಿಂಡ್ಸ್ರ್ ಮ್ಯಾನರ್ ವೃತ್ತದಿಂದ ಶಿವಾನಂದ ವೃತ್ತದವರೆಗೆ (ಈಶಾನ್ಯ ದಿಕ್ಕಿನಿಂದ ನೈಋತ್ಯ ದಿಕ್ಕಿನ ಕಡೆಗೆ) ಅಂದು ಎಲ್ಲ ಮಾದರಿಯ ವಾಹನಗಳ ಸಂಚಾರ ನಿಷೇಧಿಸಲಾಗಿದ್ದು, ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ. ಅಲ್ಲದೆ ಚಿತ್ರಸಂತೆಗೆ ಬರುವವರಿಗೆ ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಸಾಧ್ಯವಾದಷ್ಟು ಎಲ್ಲರೂ ಸಾರ್ವಜನಿಕ ಸಾರಿಗೆ ಬಳಸಬೇಕು ಎಂದು ಬೆಂಗಳೂರು ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.
ಸಂಚಾರ ಮಾರ್ಗ ಇಂತಿದೆ...
ಮೌರ್ಯ ವೃತ್ತ ಮತ್ತು ಆನಂದರಾವ್ ವೃತ್ತದ ಕಡೆಯಿಂದ ಕುಮಾರಕೃಪಾ ರಸ್ತೆಯ ಕಡೆಗೆ ತೆರಳುವ ವಾಹನಗಳು ರೇಸ್ ವ್ಯೂ ಜಂಕ್ಷನ್‌ನಲ್ಲಿ ಬಸವೇಶ್ವರ ವೃತ್ತಕ್ಕೆ ಸಾಗಿ ಅಲ್ಲಿಂದ ಬಸವೇಶ್ವರ ವೃತ್ತದಲ್ಲಿ ಎಡಕ್ಕೆ ತಿರುವು ಪಡೆದುಕೊಳ್ಳಬೇಕು. ಹಳೇ ಹೈಗ್ರೆಂಡ್ಸ್ ಜಂಕ್ಷನ್ ವಿಂಡ್ಸರ್ ಮ್ಯಾನರ್ ವೃತ್ತದ ಮೂಲಕ ಸಾಗಬಹುದು.
ಟಿ.ಚೌಡಯ್ಯ ರಸ್ತೆಯಿಂದ ವಿಂಡ್ಸರ್ ಮ್ಯಾನರ್ ವೃತ್ತದ ಮೂಲಕ ಕುಮಾರಕೃಪಾ ರಸ್ತೆಗೆ ಪ್ರವೇಶ ಪಡೆಯುವ ವಾಹನಗಳು, ಹಳೇ ಹೈಗೌಂಡ್ಸ್ ಜಂಕ್ಷನ್‌ಗೆ ನೇರವಾಗಿ ಸಾಗಿ, ಎಲ್‌ಆರ್‌ಡಿಇ ಬಳಿ ಬಲಕ್ಕೆ ತಿರುವು ಪಡೆದು ಬಸವೇಶ್ವರ ವೃತ್ತ ದಾಟಿ ರೇಸ್ ಕೋರ್ಸ್ ರಸ್ತೆ ಮೂಲಕ ಮುಂದಕ್ಕೆ ಸಾಗಬಹುದು.
ಟಿ.ಚೌಡಯ್ಯ ರಸ್ತೆಯಲ್ಲಿ ಹೈಗ್ರೆಂಡ್ ಜಂಕ್ಷನ್‌ನಿಂದ ವಿಂಡ್ಸರ್ ಮ್ಯಾನರ್ ವೃತ್ತದ ಮೂಲಕ ಕುಮಾರಕೃಪಾ ರಸ್ತೆಗೆ ಪ್ರವೇಶ ಪಡೆಯುವ ವಾಹನಗಳು ನೇರವಾಗಿ ಆರ್‌ಪಿ ರಸ್ತೆ ಮೂಲಕ ಮುಂದಕ್ಕೆ ಸಾಗಬಹುದು.
ನೆಹರೂ ವೃತ್ತದಿಂದ ಸ್ಟೀಲ್ ಬ್ರಿಡ್ಜ್ ಕೆಳಭಾಗದಲ್ಲಿ ಶಿವಾನಂದ ವೃತ್ತದ ಮೂಲಕ ಟ್ರಿಲೈಟ್ ಜಂಕ್ಷನ್ ಮತ್ತು ರೇಸ್ ಕೋರ್ಸ್ ಕಡೆಗೆ ಸಾಗುವ ವಾಹನಗಳು ನೆಹರು ವೃತ್ತದಿಂದ ಸ್ಟೀಲ್ ಬ್ರಿಡ್ಜ್ ಮೂಲಕ ಸಾಗಿ ಟ್ರಿಲೈಟ್ ಜಂಕ್ಷನ್ ಹಾಗೂ ರೇಸ್ ಕೋರ್ಸ್ ರಸ್ತೆ ಕಡೆಗೆ ತೆರಳಬಹುದು.
ಮೌರ್ಯ ವೃತ್ತ ಮತ್ತು ಆನಂದರಾವ್ ವೃತ್ತದ ಕಡೆಯಿಂದ ಬರುವ ವಾಹನಗಳು ಟ್ರಿಲೈಟ್ ಜಂಕ್ಷನ್ - ಬಸವೇಶ್ವರ ವೃತ್ತ - ಹಳೇ ಹೈಗ್ರೆಂಡ್ಸ್ ಜಂಕ್ಷನ್ - ವಿಂಡ್ಸರ್ ಮ್ಯಾನರ್ ವೃತ್ತದ ಮೂಲಕ ಮುಂದಕ್ಕೆ ಸಾಗಬೇಕು.
ಟಿ.ಚೌಡಯ್ಯ ರಸ್ತೆಯಿಂದ ಬಂದು ವಿಂಡ್ಸರ್ ಮ್ಯಾನರ್ ವೃತ್ತದ ಮೂಲಕ ಕೆ.ಕೆ.ರಸ್ತೆ ಪ್ರವೇಶಿಸುವ ವಾಹನಗಳು ಟಿ.ಚೌಡಯ್ಯ ರಸ್ತೆ ಹಳೇ ಹೈಗೌಂಡ್ ಜಂಕ್ಷನ್ - ಎಲ್‌ಅರ್‌ಡಿಇ- ಬಸವೇಶ್ವರ ವೃತ್ತ ರೇಸ್ ಕೋರ್ಸ್ ರಸ್ತೆ ಮೂಲಕ ಮುಂದಕ್ಕೆ ಸಾಗಬಹುದು.
ವಾಹನ ನಿಲುಗಡೆ ವ್ಯವಸ್ಥೆ:
ರೈಲ್ವೆ ಪ್ಯಾರಲಲ್ ರಸ್ತೆಯಲ್ಲಿ ನಾಲ್ಕು ಚಕ್ರಗಳ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
ಕ್ರೆಸೆಂಟ್ ರಸ್ತೆಯಲ್ಲಿ, ಗುರುರಾಜ ಕಲ್ಯಾಣ ಮಂಟಪದಿಂದ ಹೋಟೆಲ್ ಜನಾರ್ದನದವರೆಗೆ ರಸ್ತೆಯ ಪಶ್ಚಿಮಕ್ಕೆ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ರೇಸ್‌ಕೋರ್ಸ್ ರಸ್ತೆ, ಟ್ರಿಲೈಟ್ ಜಂಕ್ಷನ್‌ನಿಂದ ಮೌರ್ಯ ಜಂಕ್ಷನ್‌ವರೆಗೆ, ರಸ್ತೆಯ ಪೂರ್ವ ಭಾಗಕ್ಕೆ ನಾಲ್ಕು ಚಕ್ರ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
Advertisement