ನಿಲ್ಲದ ಸಮರ: ಡಿಕೆಶಿ, ಲಕ್ಷ್ಮೀ ಸೇರಿದಂತೆ ಹಲವರ ವಿರುದ್ಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಸಿಟಿ ರವಿ ದೂರು!

ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ ಪರಮೇಶ್ವರ್, ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ ಹಿಂಸೆ ತಡೆಯುವಲ್ಲಿ ವಿಫಲರಾಗಿದ್ದಾರೆ. ಪೊಲೀಸ್ ಅಧಿಕಾರಿಗಳ ವಿರುದ್ಧ ಡಿಜಿಪಿ ಇನ್ನೂ ಕ್ರ‌ಮ ಕೈಗೊಂಡಿಲ್ಲ ಎಂದು ಆರೋಪ ಮಾಡಿದ್ದಾರೆ.
CT Ravi
ಸಿಟಿ ರವಿ
Updated on

ಬೆಂಗಳೂರು: ವಿಧಾನಪರಿಷತ್ ನಲ್ಲಿ ಅಶ್ಲೀಲ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್​ ಸದಸ್ಯ ಸಿ.ಟಿ ರವಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ದೂರು, ಪ್ರತಿದೂರುಗಳು ದಾಖಲಾಗುತ್ತಲೇ ಇವೆ. ಇದೀಗ ಸಿಟಿ ರವಿ ಡಿಸೆಂಬರ್ 19ರಂದು ಬೆಳಗಾವಿಯಲ್ಲಿ ತಮ್ಮ ಬಂಧನದ ವೇಳೆ ಪೊಲೀಸ್ ದೌರ್ಜನ್ಯ ನಡೆದಿದ್ದು ಇದರಲ್ಲಿ ಅಧಿಕಾರಿಗಳು ಭಾಗಿಯಾಗಿರುವ ಬಗ್ಗೆ 13 ಪುಟಗಳ ದೂರನ್ನು ಇ-ಮೇಲ್​ ಮೂಲಕ ರಾಷ್ಟ್ರೀಯ ಮಾನವಹಕ್ಕುಗಳ ಆಯೋಗಕ್ಕೆ ಸಲ್ಲಿಸಿದ್ದಾರೆ.

ಸಿಟಿ ತಮ್ಮ ದೂರಿನಲ್ಲಿ ಡಿಸಿಎಂ ಡಿಕೆ. ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಬಸವನಗೌಡ ಬಾದರ್ಲಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ ಮತ್ತು ಅವರ ಪಿಎಗಳು ಹಾಗೂ ಹಿರೇಬಾಗೇವಾಡಿ ಸಿಪಿಐ ರಾಜು ಪಾಟೀಲ್ ಹೆಸರು ಕೂಡ ಉಲ್ಲೇಖಿಸಿದ್ದಾರೆ. ಅಲ್ಲದೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ ಪರಮೇಶ್ವರ್, ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ ಹಿಂಸೆ ತಡೆಯುವಲ್ಲಿ ವಿಫಲರಾಗಿದ್ದಾರೆ. ಪೊಲೀಸ್ ಅಧಿಕಾರಿಗಳ ವಿರುದ್ಧ ಡಿಜಿಪಿ ಇನ್ನೂ ಕ್ರ‌ಮ ಕೈಗೊಂಡಿಲ್ಲ ಎಂದು ಆರೋಪ ಮಾಡಿದ್ದಾರೆ.

ಇದೇ ವೇಳೆ ಪ್ರಕರಣ ದಾಖಲಿಸಿಕೊಂಡಿರುವ ಸಿಐಡಿ ತನಿಖೆ ಕೈಗೊಂಡಿದ್ದು ದಾಖಲೆಗಳನ್ನ ಸಂಗ್ರಹಿಸುತ್ತಿದ್ದು, ಸಿಟಿ ರವಿಗೂ ನೋಟಿಸ್ ಕೊಡಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಮತ್ತೊಂದು ಕಡೆ ರಾಜ್ಯಪಾಲರಿಗೆ, ಡಿಐಜಿ ಅಲೋಕ್ ಮೋಹನ್‌ ಅವರಿಗೆ ಸಿಟಿ ರವಿ ದೂರು ನೀಡಿದ್ದು, ನಾನು ಕೊಟ್ಟ ದೂರಿನ ಸಂಬಂಧ ಎಫ್​ಐಆರ್​ ಆಗಿಲ್ಲವೆಂದು ಕಿಡಿಕಾರಿದ್ದಾರೆ.

CT Ravi
ಕಾಂಗ್ರೆಸ್ ಅವಧಿಯಲ್ಲಿ ಶೇ. 60 ರಷ್ಟು ಕಮಿಷನ್ ನಡೆಯುತ್ತಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಬಾಂಬ್!

ತನಗೆ ಇನ್ನೂ ಅಪಾಯವಿದ್ದು, ಕೇಂದ್ರೀಯ ಸಶಸ್ತ್ರ ಭದ್ರತೆಯನ್ನ ಒದಗಿಸುವಂತೆ ದೂರಿನಲ್ಲಿ ಸಿಟಿ ರವಿ ಮನವಿ ಮಾಡಿದ್ದಾರೆ. ಪ್ರತಿಯೊಬ್ಬ ಅಪರಾಧಿಗೂ ಶಿಕ್ಷೆ ಆಗಬೇಕು. ಈ ಮೂಲಕ ಪೊಲೀಸ್ ಇಲಾಖೆಯಲ್ಲಿ ಶಿಸ್ತು ಮೂಡುವಂತಾಗಬೇಕು. ಮತ್ತೆ ಈ ರೀತಿಯ ಪೊಲೀಸ್ ದೌರ್ಜನ್ಯ ಮರುಕಳಿಸಬಾರದು ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ನೀಡಿರೋ ದೂರಿನಲ್ಲಿ ಸಿಟಿ ರವಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com