ಬೆಂಗಳೂರು: ಬೆಳ್ಳಂಬೆಳಗ್ಗೆ ಎರಡು ಅಂತಸ್ತಿನ ಕಟ್ಟಡದಲ್ಲಿ ಸಿಲಿಂಡರ್ ಸ್ಫೋಟ, ಇಬ್ಬರಿಗೆ ಗಾಯ

ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಂದು ಬೆಳಗ್ಗೆ ಸುಮಾರಿಗೆ ಘಟನೆ ನಡೆದಿದ್ದು, ಸ್ಥಳೀಯರು ಗಾಬರಿಯಾಗಿದ್ದಾರೆ.
Blast in bengaluru
ಬೆಂಗಳೂರಿನಲ್ಲಿ ಸ್ಫೋಟ
Updated on

ಬೆಂಗಳೂರು: ಆನೇಕಲ್ ತಾಲೂಕಿನ ಕಿತ್ತಗಾನಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎರಡು ಅಂತಸ್ತಿನ ಕಟ್ಟಡದಲ್ಲಿ ಸಿಲಿಂಡರ್ ಸ್ಫೋಟವಾಗಿದೆ. ಇಬ್ಬರು ಯುವಕರು ವಾಸವಿದ್ದ ಮನೆ ಬ್ಲಾಸ್ಟ್ ಆಗಿದೆ.

ಓರ್ವನಿಗೆ ಗಾಯ, ಮತ್ತೊಬ್ಬನಿಗೆ ತಲೆ-ಕೈಕಾಲುಗಳಿಗೆ ಪೆಟ್ಟು ಬಿದ್ದಿದೆ. ಸ್ಫೋಟಕ್ಕೆ ಕಾರಣ ಏನು ಅನ್ನೋದು ಇನ್ನು ತಿಳಿದು ಬಂದಿಲ್ಲ.

ಕೇರಳ ಮೂಲದ ಸುನೀಲ್ ಜೋಸೆಫ್, ವಿಷ್ಣು ಜಯರಾಜ್ ಎಂಬವರು ಗಾಯಗೊಂಡಿದ್ದು, ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಫೋಟದ ತೀವ್ರತೆಗೆ ಮನೆ ಗೋಡೆಗಳು, ಕಿಟಕಿ, ಬಾಗಿಲು ಛಿದ್ರವಾಗಿವೆ. ಅಕ್ಕಪಕ್ಕದ ನಾಲ್ಕೈದು ಮನೆಗಳು, ಕೆಲವು ವಾಹನಗಳಿಗೂ ಹಾನಿಯಾಗಿದೆ. ಸೂರ್ಯಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Blast in bengaluru
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು; ಮೃತರ ಸಂಖ್ಯೆ 8ಕ್ಕೆ ಏರಿಕೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com