KSRTC Health Scheme: ಸಾರಿಗೆ ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಯೋಜನೆಗೆ ಸಿಎಂ ಚಾಲನೆ!

ಈ ಯೋಜನೆ ಅನುಷ್ಠಾನಕ್ಕಾಗಿ ರಾಜ್ಯಾದ್ಯಂತ ಇರುವ ಸರ್ಕಾರಿ ಆಸ್ಪತ್ರೆಗಳು ಸೇರಿದಂತೆ ಒಟ್ಟು 250 ಖಾಸಗಿ ಆಸ್ಪತ್ರೆಗಳೊಂದಿಗೆ ಒಡಬಂಡಿಕೆ ಮಾಡಿಕೊಳ್ಳಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
KSRTC Health Scheme
ಕೆಎಸ್ಆರ್ ಟಿಸಿ ಆರೋಗ್ಯ ಯೋಜನೆಗೆ ಸಿಎಂ ಚಾಲನೆ online desk
Updated on: 

ಬೆಂಗಳೂರು: KSRTC ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆಗೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು.

ಈ ಮೂಲಕ ಸಾರಿಗೆ ನೌಕರರ ಹಲವು ವರ್ಷಗಳ ಬೇಡಿಕೆ ಈಡೇರಿದೆ. "ಕೆಎಸ್ಆರ್ಟಿಸಿ ಆರೋಗ್ಯ" ಯೋಜನೆಯಡಿ ಸಾರಿಗೆ ಸಂಸ್ಥೆಯ ಎಲ್ಲ ನೌಕರರು, ಅವರ ತಂದೆ - ತಾಯಿ ಮತ್ತು ಪತ್ನಿ - ಮಕ್ಕಳಿಗೆ ಖರ್ಚಿನ ಮಿತಿಯಿಲ್ಲದ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ಸಿಗಲಿದೆ.

ಈ ಯೋಜನೆ ಅನುಷ್ಠಾನಕ್ಕಾಗಿ ರಾಜ್ಯಾದ್ಯಂತ ಇರುವ ಸರ್ಕಾರಿ ಆಸ್ಪತ್ರೆಗಳು ಸೇರಿದಂತೆ ಒಟ್ಟು 250 ಖಾಸಗಿ ಆಸ್ಪತ್ರೆಗಳೊಂದಿಗೆ ಒಡಬಂಡಿಕೆ ಮಾಡಿಕೊಳ್ಳಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ನಮ್ಮ ಸಾರಿಗೆ ನೌಕರರು ಮತ್ತು ಕುಟುಂಬದವರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯದಿಂದ ಕಾಣಬಾರದು. ಚಿಕಿತ್ಸೆ ನೀಡುವಲ್ಲಿ ಉದಾಸೀನ ಮಾಡಕೂಡದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾಸಗಿ ಆಸ್ಪತ್ರೆಗಳಿಗೆ ಸಿಎಂ ಸ್ಪಷ್ಟ ಸೂಚನೆ ನೀಡಿದ್ದಾರೆ.

KSRTC Health Scheme
ಬಸ್‌ಗಳಲ್ಲಿ ವಿಶೇಷ ಚೇತನರಿಗಾಗಿ ಲೌಡ್ ಸ್ಪೀಕರ್ ಅಳವಡಿಸಿ: KSRTC ಗೆ ಹೈಕೋರ್ಟ್ ನಿರ್ದೇಶನ

ದೇಶದಲ್ಲಿ ಮೊದಲ ಬಾರಿಗೆ ಸಾರಿಗೆ ನಿಗಮದಲ್ಲಿ ಆರೋಗ್ಯ ಸೇವೆ ಸೌಲಭ್ಯ ನೀಡುತ್ತಿದೆ. ರಾಜ್ಯದ 250 ಆಸ್ಪತ್ರೆಯಲ್ಲಿ ಸಾರಿಗೆ ನೌಕರರು ಆರೋಗ್ಯ ಕಾರ್ಡ್ ಬಳಸಿ ನಗದು ರಹಿತವಾಗಿ ಚಿಕಿತ್ಸೆ ಪಡೆದುಕೊಳ್ಳಬಹುದು. ಸೂಪರ್ ಸ್ಪೆಷಾಲಿಟಿ, ಮಲ್ಟಿ ಸ್ಪೆಷಾಲಿಟಿ ಸೇರಿದಂತೆ ಸಾಮಾನ್ಯ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆ ಪಡೆಯಬಹುದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com