ಬೆಂಗಳೂರು: ಕುಡಿದ ಅಮಲಿನಲ್ಲಿ ತಾಯಿ ಕೊಂದು ಮಗ ಆತ್ಮಹತ್ಯೆ

ಶನಿವಾರ ರಾತ್ರಿ ರಮೇಶ್ ಕುಡಿದ ಅಮಲಿನಲ್ಲಿ ಮನೆಗೆ ಬಂದ ನಂತರ ಲಕ್ಷ್ಮಿ ಮತ್ತು ರಮೇಶ್ ನಡುವೆ ತೀವ್ರ ವಾಗ್ವಾದ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ
Representational image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: 21 ವರ್ಷದ ಯುವಕನೊಬ್ಬ ಮದ್ಯದ ಅಮಲಿನಲ್ಲಿ ತನ್ನ ತಾಯಿಯನ್ನು ಮೊಬೈಲ್ ಚಾರ್ಜಿಂಗ್ ಕೇಬಲ್‌ನಿಂದ ಕತ್ತು ಹಿಸುಕಿ, ಕೊದು ನಂತರ ಹೊರವಲಯದಲ್ಲಿರುವ ಹಳೆ ಚಂದಾಪುರದ ಅವರ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ.

ಮೃತರನ್ನು ಲಕ್ಷ್ಮೀದೇವಿ (41) ಎಂದು ಗುರುತಿಸಲಾಗಿದ್ದು, ದಿನಗೂಲಿ ಕೆಲಸ ಮಾಡುತ್ತಿದ್ದರು. ಆಕೆಯ ಮಗ ರಮೇಶ್ ಹೋಟೆಲ್ ನಲ್ಲಿ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದ. ಲಕ್ಷ್ಮಿ ಅವರು ಪತಿ, ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು, ಲಕ್ಷ್ಮಿ ಪತಿ ಮತ್ತು ಮತ್ತೊಬ್ಬ ಪುತ್ರನನ್ನು ಅಗಲಿದ್ದಾರೆ. ಚಿತ್ರದುರ್ಗ ಮೂಲದ ಕುಟುಂಬ ಸೂರ್ಯ ನಗರದ ಹಳೆ ಚಂದಾಪುರದಲ್ಲಿ ನೆಲೆಸಿತ್ತು.

ಶನಿವಾರ ರಾತ್ರಿ ರಮೇಶ್ ಕುಡಿದ ಅಮಲಿನಲ್ಲಿ ಮನೆಗೆ ಬಂದ ನಂತರ ಲಕ್ಷ್ಮಿ ಮತ್ತು ರಮೇಶ್ ನಡುವೆ ತೀವ್ರ ವಾಗ್ವಾದ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆಗಾಗ ಮದ್ಯ ಸೇವಿಸಿ ತಾಯಿಯೊಂದಿಗೆ ಜಗಳವಾಡುತ್ತಿದ್ದ ರಮೇಶ್, ನಿಯಂತ್ರಣ ತಪ್ಪಿ ಸಿಟ್ಟಿನಿಂದ ಮೊಬೈಲ್ ಚಾರ್ಜಿಂಗ್ ಕೇಬಲ್ ನಿಂದ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಕೃತ್ಯ ಎಸಗಿದ ಬಳಿಕ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಾನೆ. ನಂತರ ಮನೆಗೆ ಭೇಟಿ ನೀಡಿದ ಕುಟುಂಬಸ್ಥರು ರಮೇಶ್ ಮತ್ತು ಲಕ್ಷ್ಮಿ ಇಬ್ಬರೂ ಸಾವನ್ನಪ್ಪಿರುವುನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಚಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Representational image
ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ಟೆಕ್ಕಿ ದಂಪತಿ ಆತ್ಮಹತ್ಯೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com