BBMP: ಪೂರ್ವ ವಲಯದ ಅನಧಿಕೃತ ಕಟ್ಟಡಗಳ ಸೀಲ್ ಮಾಡಿ; ಅಧಿಕಾರಿಗಳಿಗೆ ಆಯುಕ್ತ ಸೂಚನೆ

ಏತನ್ಮಧ್ಯೆ, ದಕ್ಷಿಣ ವಲಯದಲ್ಲಿ ಕಾನೂನು ಉಲ್ಲಂಘಿಸಿ ನಿರ್ಮಾಣ ಮಾಡಿರುವ 10 ಕ್ಕೂ ಹೆಚ್ಚು ಕಟ್ಟಡಗಳನ್ನು ಸೀಲ್ ಮಾಡಿರುವುದಾಗಿ ವರದಿಗಳಿಂದ ತಿಳಿದುಬಂದಿದೆ.
ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿರುವ ಬಿಬಿಎಂಪಿ ಆಯುಕ್ತ.
ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿರುವ ಬಿಬಿಎಂಪಿ ಆಯುಕ್ತ.
Updated on: 

ಬೆಂಗಳೂರು: ನಗರದ ಪೂರ್ವ ವಲಯದ ಅನಧಿಕೃತ ಕಟ್ಟಡಗಳನ್ನು ಸೀಲ್ ಮಾಡುವಂತೆ ಅಧಿಕಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಂಗಳವಾರ ಸೂಚನೆ ನೀಡಿದರು.

ಪೂರ್ವ ವಲಯದಲ್ಲಿ ಮುಖ್ಯ ಆಯುಕ್ತರ ನಡೆ ವಲಯದೆಡೆಗೆ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ದೂರು ಸ್ವೀಕರಿಸಿದರು. ಈ ವೇಳೆ ನಾಗರೀಕರೊಬ್ಬರು ಅನಧಿಕೃತ ಕಟ್ಟಡಗಳ ನಿರ್ಮಾಣದ ವಿರುದ್ಧ ಕಾನೂನು ಕ್ರಮ ಕೈಗೊಂಡು ಪರಿಣಾಮಕಾರಿಯಾಗಿ ನಿಯಂತ್ರಿಸುವಂತೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ಆಯುಕ್ತರು, ಪಾಲಿಕೆ ವ್ಯಾಪ್ತಿಯಲ್ಲಿ ಯೋಜನಾ ಮಂಜೂರಾತಿ ಉಲ್ಲಂಘಿಸಿರುವ ಕಟ್ಟಡ/ಅನಧಿಕೃತ ಕಟ್ಟಡಗಳನ್ನು ಗುರುತಿಸಿ ಸೀಲ್ ಮಾಡಬೇಕು, ಮೇಲ್ಮನವಿ ಪ್ರಾಧಿಕಾರದಿಂದ ವಜಾಗೊಳಿಸಿದ ಪ್ರಕರಣಗಳನ್ನು ರದ್ದು ಮಾಡಬೇಕು. ಸದರಿ ಕಟ್ಟಡಗಳಿಗೆ ನೀಡಿರುವ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಬೆಸ್ಕಾಂಗೆ ಪತ್ರ ಬರೆಯಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಏತನ್ಮಧ್ಯೆ, ದಕ್ಷಿಣ ವಲಯದಲ್ಲಿ ಕಾನೂನು ಉಲ್ಲಂಘಿಸಿ ನಿರ್ಮಾಣ ಮಾಡಿರುವ 10 ಕ್ಕೂ ಹೆಚ್ಚು ಕಟ್ಟಡಗಳನ್ನು ಸೀಲ್ ಮಾಡಿರುವುದಾಗಿ ವರದಿಗಳಿಂದ ತಿಳಿದುಬಂದಿದೆ.

ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿರುವ ಬಿಬಿಎಂಪಿ ಆಯುಕ್ತ.
BBMP: 402 ಅಕ್ರಮ ಕಟ್ಟಡ ನೆಲಸಮಗೊಳಿಸಲು ಬಿಬಿಎಂಪಿ ಮುಂದು!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com