ನಕ್ಸಲ್ ಮುಕ್ತ ಕರ್ನಾಟಕ: ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಆರು ನಕ್ಸಲೀಯರು ಶರಣು!

ಪೊಲೀಸರು ಶರಣಾದ ನಕ್ಸಲರನ್ನು ತಮ್ಮ ವಶಕ್ಕೆ ಪಡೆಯಲಿದ್ದು, ಕೋರ್ಟ್‌ಗೆ ಹಾಜರುಪಡಿಸಿ ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳಲಿದ್ದಾರೆ.
CM Siddaramaiah, DCM DK Shivakumar and Minister Dr.G.Parameshwar
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್
Updated on

ಬೆಂಗಳೂರು: ಕರ್ನಾಟಕದ 'ರಕ್ತ ಚರಿತ್ರೆ' ಇತಿಹಾಸದಲ್ಲಿ ಬುಧವಾರ ಮಹತ್ವದ ದಿನವಾಗಿದೆ. 6 ಮಂದಿ ನಕ್ಸಲೀಯರು ಶಸಾಸ್ತ್ರಗಳನ್ನು ತ್ಯಜಿಸಿದ್ದು, ಸರ್ಕಾರದ ಶರಣಾಗತಿ ಪ್ಯಾಕೇಜ್ ಒಪ್ಪಿಕೊಂಡು ಶರಣಾಗಿದ್ದಾರೆ. ಈ ಮೂಲಕ ಸಮಾಜದ ಮುಖ್ಯವಾಹಿನಿಗೆ ಮರಳಿದ್ದು, ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗುವ ಕಾಲ ಸಮೀಪಿದಂತಾಗಿದೆ.

ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ರಾಜ್ಯದ ನಕ್ಸಲರಾದ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲದ ಸುಂದರಿ, ಮಾರಪ್ಪ ಅರೋಳಿ, ವನಜಾಕ್ಷಿ ಬಾಳೆಹೊಳೆ ಹಾಗೂ ಕೇರಳದ ವೈನಾಡಿನ ಎನ್. ಜೀಶಾ ಹಾಗೂ ತಮಿಳುನಾಡಿನ ಕೆ. ವಸಂತ್ ಅವರು ಹಸಿರು ಬಟ್ಟೆ ಕಳಚಿಟ್ಟು, ಕೆಂಪು ಬಾವುಟ ಕೆಳಗಿಟ್ಟು ಶರಣಾದರು. ಈ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಪೊಲೀಸರು ಶರಣಾದ ನಕ್ಸಲರನ್ನು ತಮ್ಮ ವಶಕ್ಕೆ ಪಡೆಯಲಿದ್ದು, ಕೋರ್ಟ್‌ಗೆ ಹಾಜರುಪಡಿಸಿ ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳಲಿದ್ದಾರೆ. ಇದರೊಂದಿಗೆ ಹಲವು ದಶಕಗಳಿಂದ ಸರ್ಕಾರಕ್ಕೆ ತಲೆ ನೋವಾಗಿದ್ದ ನಕ್ಸಲ್ ಚಳವಳಿ ಬಹುತೇಕ ಅಂತ್ಯವಾಗಿದೆ.

ಶರಣಾದ ನಕ್ಸಲರ ಪೈಕಿ ಮುಂಡಗಾರು ಲತಾ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಮುಂಡಗಾರು ಗ್ರಾಮದವರು. ಹಲವು ವರ್ಷಗಳಿಂದ ಇವರು ಕರ್ನಾಟಕದಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದು, ಇವರ ವಿರುದ್ಧ 85 ಪ್ರಕರಣಗಳಿವೆ.

ನಕ್ಸಲರು ಕಳೆದ ಮೂರು ದಿನಗಳಿಂದ ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರ ಜೊತೆ ಶರಣಾಗತಿ ಕುರಿತು ಮಾತುಕತೆಯನ್ನು ಚಿಕ್ಕಮಗಳೂರು ಕಾಡಿನಲ್ಲಿ ನಡೆಸುತ್ತಿದ್ದರು. ಬುಧವಾರ ಅವರುಗಳು ಶರಣಾಗಲು ದಿನಾಂಕ ನಿಗದಿ ಮಾಡಲಾಯಿತು. ಮೊದಲು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಶರಣಾಗಲಿದ್ದಾರೆ ಎಂಬ ಮಾಹಿತಿ ಇತ್ತು.ಆದರೆ ಬುಧವಾರ ಬೆಳಗ್ಗೆ ಚಿಕ್ಕಮಗಳೂರಿನಿಂದ ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರ ಜೊತೆ ಪೊಲೀಸರ ಭದ್ರತೆಯಲ್ಲಿ ಬೆಂಗಳೂರು ನಗರಕ್ಕೆ ಆಗಮಿಸಿದ ನಕ್ಸಲರು, ಮುಖ್ಯಮಂತ್ರಿಗಳ ಮುಂದೆ ಶರಣಾಗಿದ್ದಾರೆ.

ಪೊಲೀಸರು ಅವರನ್ನು ವಶಕ್ಕೆ ಪಡೆಯಲಿದ್ದು, ಮುಂದಿನ ಪ್ರಕ್ರಿಯೆ ಕೈಗೊಳ್ಳಲಿದ್ದಾರೆ. ನಕ್ಸಲರನ್ನು ಮೊದಲು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಕೋರ್ಟ್‌ ಮುಂದೆ ಹಾಜರುಪಡಿಸಬೇಕಿದೆ. ಡಿಸೆಂಬರ್ 30ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ ಜೀವಹಾನಿಯು ಯಾವ ಕಡೆಯು ನಡೆಯಬಾರದು ಎಂದು ಬಯಸುವ ವಿವಿಧ ಪ್ರಗತಿಪರ ಹಾಗೂ ಜನಪರ ವೇದಿಕೆಗಳ ಹಲವಾರು ಮುಖಂಡರು ಭೇಟಿ ಮಾಡಿದ್ದರು.

ಈ ಹಿಂದೆ ರಾಜ್ಯ ಸರ್ಕಾರ ಘೋಷಿಸಿದ್ದ ನಕ್ಸಲ್ ಶರಣಾಗತಿ ಪ್ಯಾಕೇಜ್ ಅಡಿ ಹಾಗಲಗಂಚಿ ವೆಂಕಟೇಶ್, ಮಲ್ಲಿಕಾ, ಹೊರ್ಲೆ ಜಯ, ಸಿರಿಮನೆ ನಾಗರಾಜ್, ನೂರು ಶ್ರೀಧರ್, ನೀಲಗುಳಿ ಪದ್ಮನಾಭ, ಪರಶುರಾಮ, ಭಾರತಿ, ಕನ್ಯಾಕುಮಾರಿ, ಶಿವು, ಚನ್ನಮ್ಮು ಸೇರಿ ಒಟ್ಟು 14 ಮಂದಿ ನಕ್ಸಲೀಯರು ಸಮಾಜದ ಮುಖ್ಯ ವಾಹನಿಗೆ ಮರಳಿದ್ದರು.

CM Siddaramaiah, DCM DK Shivakumar and Minister Dr.G.Parameshwar
ನಕ್ಸಲ್ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾವಣೆ: ಮುಖ್ಯಮಂತ್ರಿಗಳ ಸಮ್ಮುಖದಲ್ಲೇ ಮುಖ್ಯವಾಹಿನಿಗೆ ಮಾವೋವಾದಿಗಳು!

ಮೂಲಗಳ ಪ್ರಕಾರ ರಾಜ್ಯದಲ್ಲಿ ಇನ್ನೂ ಓರ್ವ ನಕ್ಸಲ್ ಮಾತ್ರ ಶರಣಾಗತಿಗೆ ಬಾಕಿ ಉಳಿದಿದ್ದು. ಆತನ ಶರಣಾಗತಿಗೆ ಪ್ರಯತ್ನ ನಡೆಸಲಾಗುತ್ತಿದೆ. ಇದರೊಂದಿಗೆ ರಾಜ್ಯದಲ್ಲಿ ಎರಡೂವರೆ ದಶಕಗಳ ಕಾಲದ ನಕ್ಸಲ್ ಚಳವಳಿ ಅಂತ್ಯ ಕಂಡಂತಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com