
ಬೆಂಗಳೂರು: ಎರಡು ತಿಂಗಳ ಹಿಂದೆ ಅಪ್ರಾಪ್ತ ವಿದ್ಯಾರ್ಥಿಯೊಂದಿಗೆ ಪರಾರಿಯಾಗಿದ್ದ ಮಂಡ್ಯದ ಟ್ಯೂಷನ್ ಶಿಕ್ಷಕನೊಬ್ಬನನ್ನು ಬಂಧಿಸಲಾಗಿದೆ. ಬಾಲಕಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಮಂಡ್ಯದಲ್ಲಿ ಅಭಿಷೇಕ್ ಗೌಡ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿತ್ತು.
ಆರೋಪಿ ವಿವಾಹಿತನಾಗಿದ್ದು, ಎರಡು ವರ್ಷದ ಮಗುವಿದೆ ಎಂದು ಪೊಲೀಸ್ ಮೂಲಗಳು ಬಹಿರಂಗಪಡಿಸಿವೆ. ನವೆಂಬರ್ 23 ರಂದು ಅಪ್ರಾಪ್ತ ಬಾಲಕಿಯನ್ನು ಅಪಹರಿಸಲಾಗಿದ್ದು, ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ ವಿಭಾಗ) ಲೋಕೇಶ್ ಬಿ ಜೆ ತಿಳಿಸಿದ್ದಾರೆ.
"ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಿಂದ ಜನವರಿ 5 ರಂದು ಬಾಲಕಿಯನ್ನು ರಕ್ಷಿಸಲಾಗಿತ್ತು. ಆಕೆಯನ್ನು ಆಕೆಯ ಟ್ಯೂಷನ್ ಟೀಚರ್ ಕಿಡ್ನಾಪ್ ಮಾಡಿದ್ದ. ಆಕೆ ತರಗತಿಗಳಿಗೆ ಪ್ರತಿದಿನ ಭೇಟಿ ನೀಡುತ್ತಿದ್ದಳು" ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ, 25 ವರ್ಷದ ಯುವಕನನ್ನು ಬಂಧಿಸಲಾಗಿದೆ ಮತ್ತು ಅಪಹರಣ ಮತ್ತು ಅತ್ಯಾಚಾರದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ.
Advertisement