
ಬೆಂಗಳೂರು: ರಸ್ತೆ ಮೇಲೆ ಮಲಗಿದ್ದ ಬೀದಿನಾಯಿ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿರುವ ಧಾರುಣ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ.
ಬೆಂಗಳೂರಿನ ಜೆ.ಪಿ. ನಗರದ 8ನೇ ಹಂತ ಶೇಖರ್ ನಗರದಲ್ಲಿ ಡಿಸೆಂಬರ್ 31ರಂದು ಈ ಘಟನೆ ನಡೆದಿದ್ದು, ತಡವಾಗಿ ಈ ಘಟನೆ ಬೆಳಕಿಗೆ ಬಂದಿದೆ. ಬಿಸಿಲಿನಲ್ಲಿ ಬೀದಿನಾಯಿಗಳ ಗುಂಪು ರಸ್ತೆ ಮೇಲೆ ಮಲಗಿತ್ತು. ಈ ವೇಳೆ ಅದೇ ರಸ್ತೆಯಲ್ಲಿ ಕೆಂಪು ಬಣ್ಣದ ಥಾರ್ ಕಾರು ಬಂದಿತ್ತು. ಆದರೆ ರಸ್ತೆ ಮಧ್ಯೆ ಮಲಗಿದ್ದ ನಾಯಿ ಮೇಲೆ ಕಾರು ಚಾಲಕ ಉದ್ದೇಶಪೂರ್ವಕವಾಗಿಯೇ ಕಾರು ಹತ್ತಿಸಿದ್ದಾನೆ.
ಕಾರು ಹತ್ತುತ್ತಿದ್ದಂತೆಯೇ ಕಿರುಚಾಡಿದ ನಾಯಿ ಕ್ಷಣಾರ್ಧಲ್ಲಿ ರಕ್ತದ ಮಡುವಿನಲ್ಲಿ ಪ್ರಾಣ ಬಿಟ್ಟಿದೆ. ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ವಿಡಿಯೋ ನೋಡಿದರೆ ಉದ್ದೇಶಪೂರ್ವಕವಾಗಿಯೇ ಕಾರಿನ ಮಾಲೀಕ ಈ ಕೃತ್ಯವನ್ನು ಎಸಗಿದ್ದಾನೆ ಎಂದು ಪ್ರಾಣಿ ಪ್ರಿಯರು ಆರೋಪ ಮಾಡಿದ್ದಾರೆ.
ಈ ವಿಡಿಯೋ ನಾಯಿ ಹರಿಸಿದ ಮನೆಯ ಮುಂದಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋವನ್ನು ಸ್ಥಳೀಯ ಪ್ರಾಣಿ ಪ್ರಿಯರಿಗೆ ಹಂಚಿಕೊಂಡಿದ್ದು, ನಾಯಿ ಮೇಲೆ ಕಾರು ಹತ್ತಿಸಿದವನಿಗೆ ಸರಿಯಾಗಿ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದಾರೆ.
Advertisement