ಶರಣಾದ 6 ನಕ್ಸಲರನ್ನು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ NIA ಕೋರ್ಟ್; ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್!

ಚಿಕ್ಕಮಗಳೂರು ಡಿವೈಎಸ್‌ಪಿ ಬಾಲಾಜಿ ಸಿಂಗ್ ಅವರು ನಕ್ಸಲ್ ನಾಯಕರಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ನಂತರ ಎನ್‌ಐಎ ವಿಶೇಷ ಕೋರ್ಟ್‌ನ ನ್ಯಾಯಾಧೀಶರಾದ ಗಂಗಾಧರ್ ಅವರ ಮುಂದೆ ಹಾಜರುಪಡಿಸಿದ್ದರು.
ನಕ್ಸಲ್ ನಾಯಕರಿಗೆ ನ್ಯಾಯಾಂಗ ಬಂಧನ
ನಕ್ಸಲ್ ನಾಯಕರಿಗೆ ನ್ಯಾಯಾಂಗ ಬಂಧನ
Updated on

ಬೆಂಗಳೂರು: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಸಿದ್ದರಾಮಯ್ಯ ಮುಂದೆ ಆರು ನಕ್ಸಲೀಯರು ಶರಣಾಗಿದ್ದರು. ನಕ್ಸಲ್ ನಾಯಕರಾದ ಮುಂಡಗಾರು ಲತಾ, ಸುಂದರಿ ಕೊತ್ಲೂರು, ವನಜಾಕ್ಷಿ ಬಾಳೆಹೊಳೆ, ಜಿಶಾ, ವಸಂತ್ ಟಿ.ಎನ್, ಮಾರೆಪ್ಪ ಅರೋಲಿ ಅವರಿಗೆ ಎನ್‌ಐಎ ವಿಶೇಷ ಕೋರ್ಟ್‌ ಜನವರಿ 31ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಚಿಕ್ಕಮಗಳೂರು ಡಿವೈಎಸ್‌ಪಿ ಬಾಲಾಜಿ ಸಿಂಗ್ ಅವರು ನಕ್ಸಲ್ ನಾಯಕರಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ನಂತರ ಎನ್‌ಐಎ ವಿಶೇಷ ಕೋರ್ಟ್‌ನ ನ್ಯಾಯಾಧೀಶರಾದ ಗಂಗಾಧರ್ ಅವರ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಧೀಶರು ಆರು ನಕ್ಸಲರಿಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ಹೀಗಾಗಿ ನಕ್ಸಲರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುತ್ತದೆ.

ನಿನ್ನೆ ಆರು ಮಂದಿ ನಕ್ಸಲೀಯರು ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಸಿದ್ದರಾಮಯ್ಯ ಅವರ ಮುಂದೆ ಶರಣಾದರು. ಇದರ ಸಂಕೇತವಾಗಿ ಮುಂಡಗಾರು ಲತಾ ನಕ್ಸಲ್ ಸಮವಸ್ತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಪ್ಪಿಸಿದರು. ಬಳಿಕ ಸಿದ್ದರಾಮಯ್ಯ ಸಂವಿಧಾನದ ಪ್ರತಿ ಹಾಗೂ ಹೂಗಳನ್ನು ಅವರಿಗೆ ನೀಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಮಾಡಿಕೊಂಡಿದ್ದರು. ನಂತರ ನಕ್ಸಲ್ ನಾಯಕರನ್ನು ವಶಕ್ಕೆ ಪಡೆದಿದ್ದ ಪೊಲೀಸರು ಮೂವರು ಮಹಿಳೆಯರನ್ನು ಡೈರಿ ಸರ್ಕಲ್ ಬಳಿಯ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಿದ್ದರೆ ಮೂವರು ಪುರುಷರನ್ನು ಮಡಿವಾಳದ FSL ವಿಶೇಷ ಘಟಕದಲ್ಲಿ ಇರಿಸಿದ್ದರು.

ನಕ್ಸಲ್ ನಾಯಕರಿಗೆ ನ್ಯಾಯಾಂಗ ಬಂಧನ
ನಕ್ಸಲ್ ಮುಕ್ತ ರಾಜ್ಯ ಕರ್ನಾಟಕ: ಶಸ್ತ್ರಾಸ್ತ್ರ ತ್ಯಜಿಸಿದ ನಕ್ಸಲೀಯರ ಪುನರ್‌ ವಸತಿಗೆ ಸರ್ಕಾರ ನೆರವು- ಸಿಎಂ ಸಿದ್ದರಾಮಯ್ಯ

ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. ವ್ಯವಸ್ಥೆಯ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ ನ್ಯಾಯಯುತವಾಗಿ ಮಾಡಬೇಕು. ನಕ್ಸಲಿಸಂ, ಶಸ್ತ್ರಾಸ್ತ್ರ ಹೋರಾಟಕ್ಕೆ ಸಂವಿಧಾನದಲ್ಲಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವಕಾಶವಿಲ್ಲ. ಈ ಹಿಂದೆಯೂ ಬಹಳ ನಕ್ಸಲೀಯರು ಶಸ್ತ್ರಾಸ್ತ ತ್ಯಜಿಸಿ ಮುಖ್ಯವಾಹಿನಿಗೆ ಬಂದಿದ್ದಾರೆ. ಇವರ ಪುನರ್‌ ವಸತಿಗೆ ಸರ್ಕಾರ ನೆರವು ಒದಗಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com