ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಪ್ರಿಯಾಂಕ್ ಖರ್ಗೆ ಆಪ್ತ ರಾಜು ಸೇರಿ ಐವರ ಬಂಧನ

ಸಿಐಡಿ ಪೊಲೀಸರು ಪ್ರಕರಣ ಸಂಬಂಧ ಇಂದು ಬೀದರ್​ನಲ್ಲಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರಿಯಾಂಕ್ ಖರ್ಗೆ-ರಾಜು ಕಪನೂರು-ಸಚಿನ್
ಪ್ರಿಯಾಂಕ್ ಖರ್ಗೆ-ರಾಜು ಕಪನೂರು-ಸಚಿನ್
Updated on

ಬೀದರ್: ಬೀದರ್‌ನ 26 ವರ್ಷದ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರು ಸೇರಿದಂತೆ ಐವರನ್ನು ಶುಕ್ರವಾರ ಬಂಧಿಸಿದ್ದಾರೆ.

ಆತ್ಮಹತ್ಯೆಗೂ ಮುನ್ನ ಡೆತ್​ನೋಟ್ ಬರೆದಿಟ್ಟಿದ್ದ ಬೀದರ್ ಗುತ್ತಿಗೆದಾರ ಸಚಿನ್, ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರು ಸೇರಿದಂತೆ ಒಟ್ಟು 8 ಜನರ ಹೆಸರನ್ನು ಉಲ್ಲೇಖಿಸಿದ್ದರು.

ಸಿಐಡಿ ಪೊಲೀಸರು ಪ್ರಕರಣ ಸಂಬಂಧ ಇಂದು ಬೀದರ್​ನಲ್ಲಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಜು ಕಪನೂರು, ಘೊರಕ್ ನಾಥ್, ನಂದಕುಮಾರ್ ನಾಗಬುಜಂಗಿ, ರಾಮನಗೌಡಾ ಪಾಟೀಲ್, ಸತೀಶ್ ಎನ್ನುವರನ್ನು ಬಂಧಿಸಲಾಗಿದೆ.

ಪ್ರಿಯಾಂಕ್ ಖರ್ಗೆ-ರಾಜು ಕಪನೂರು-ಸಚಿನ್
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ: ಪ್ರಿಯಾಂಕ್ ಖರ್ಗೆ ಗುರಿಯಾಗಿಸಿಕೊಂಡ BJP; ಬೆನ್ನಿಗೆ ನಿಂತ ಕಾಂಗ್ರೆಸ್, ತಿರುಗೇಟಿಗೆ ಮುಂದು!

ಬಂಧಿತ ಆರೋಪಿಗಳಿಗೆ ವಿಚಾರಣೆಗೆ ಬರುವಂತೆ ಸಿಐಡಿ ನೋಟಿಸ್ ನೀಡಿತ್ತು. ಅದರಂತೆ ಐವರು ಇಂದು ಬೀದರ್​ ರೈಲ್ವೆ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆ ವೇಳೆ ಸೂಕ್ತವಾದ ಉತ್ತರ ನೀಡದ ಹಿನ್ನೆಲೆಯಲ್ಲಿ ಸಿಐಡಿ, ಆರೋಪಿಗಳನ್ನು ಬಂಧಿಸಿದೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಂಗಾವ್ ಗ್ರಾಮದ ಗುತ್ತಿಗೆದಾರ ಸಚಿನ್ ಕಳೆದ ಡಿಸೆಂಬರ್ 26ರಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿದ್ದರು. 15 ಲಕ್ಷಕ್ಕೂ ಹೆಚ್ಚು ಹಣ ಪಡೆದು ಟೆಂಡರ್ ನೀಡದೆ ವಂಚನೆ ಮಾಡಿದ್ದು, ಜೊತೆಗೆ 1 ಕೋಟಿ ರೂ. ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ವಿರುದ್ಧ ಡೆತ್​ನೋಟ್​ನಲ್ಲಿ ಗಂಭೀರ ಆರೋಪ ಮಾಡಿದ್ದರು. ಹೀಗಾಗಿ ಈ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com