ಮಾರ್ಚ್ ಅಂತ್ಯದೊಳಗೆ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ: BBMP

ಬಿಬಿಎಂಪಿ ವ್ಯಾಪ್ತಿಯಲ್ಲಿ ಖಾಯಂ ಮಾಡಿಕೊಳ್ಳುತ್ತಿರುವ ಪೌರಕಾರ್ಮಿಕರ ಪೈಕಿ ಪೊಲೀಸ್ ತಪಾಸಣೆ ಹಾಗೂ ಮೀಸಲಾತಿ ಪ್ರಮಾಣ ಪತ್ರಗಳ ಸಿಂಧುತ್ವ ಕಾರ್ಯ ನಡೆಯುತ್ತಿದ್ದು, ಆ ಪ್ರಕ್ರಿಯೆಯನ್ನು ಮಾರ್ಚ್ 2025ರ ಅಂತ್ಯದೊಳಗಾಗಿ ಪೂರ್ಣಗೊಳಿಸಲಾಗುವುದು.
ತುಷಾರ್ ಗಿರಿನಾಥ್
ತುಷಾರ್ ಗಿರಿನಾಥ್
Updated on

ಬೆಂಗಳೂರು: ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾದ ಪೌರಕಾರ್ಮಿಕರಿಗೆ ಮಾರ್ಚ್ 2025ರ ಅಂತ್ಯದೊಳಗೆ ನೇಮಕಾತಿ ಆದೇಶವನ್ನು ನೀಡಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರು ಗುರುವಾರ ಹೇಳಿದರು.

ಪೌರಕಾರ್ಮಿಕರ ಪಿತಾಮಹರಾದ ಐ.ಪಿ.ಡಿ ಸಾಲಪ್ಪ ಅವರ ಜನ್ಮ ದಿನಾಚರಣೆ ಅಂಗವಾಗಿ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿರುವ ಡಾ. ರಾಜ್ ಕುಮಾರ್ ಗಾಜಿನ ಮನೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಖಾಯಂ ಮಾಡಿಕೊಳ್ಳುತ್ತಿರುವ ಪೌರಕಾರ್ಮಿಕರ ಪೈಕಿ ಪೊಲೀಸ್ ತಪಾಸಣೆ ಹಾಗೂ ಮೀಸಲಾತಿ ಪ್ರಮಾಣ ಪತ್ರಗಳ ಸಿಂಧುತ್ವ ಕಾರ್ಯ ನಡೆಯುತ್ತಿದ್ದು, ಆ ಪ್ರಕ್ರಿಯೆಯನ್ನು ಮಾರ್ಚ್ 2025ರ ಅಂತ್ಯದೊಳಗಾಗಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

1929 ರಲ್ಲಿ ಜನಿಸಿದ ಐಪಿಡಿ ಸಾಲಪ್ಪ ಸ್ವಾತಂತ್ರ್ಯದ ಹೋರಾಟಗಾರರಾಗಿದ್ದರು.ಬಿನ್ನಿಪೇಟೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಪೌರಕಾರ್ಮಿಕರ ಜೀವನದ ಸ್ಥಿತಿಗತಿ ಅವರು 36 ಅಂಶಗಳ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದರು. ಈ ವರದಿಯನ್ನಾಧರಿಸಿ ಪೌರಕಾರ್ಮಿಕರಿಗೆ ವಿವಿಧ ಸೌಲಭ್ಯಗಳು ಸಿಗುತ್ತಿದ್ದು, ಸಾಲಪ್ಪ ಅವರ ಕೊಡುಗೆ ಅನುಕರಣೀಯ ಎಂದು ಶ್ಲಾಘಿಸಿದರು.

ತುಷಾರ್ ಗಿರಿನಾಥ್
BBMP: 402 ಅಕ್ರಮ ಕಟ್ಟಡ ನೆಲಸಮಗೊಳಿಸಲು ಬಿಬಿಎಂಪಿ ಮುಂದು!

ನಗರದಲ್ಲಿ ಮನೆ-ಮನೆಯಿಂದ ಸಂಗ್ರಹಿಸುವ ಕಸದ ಪದ್ದತಿ ಸರಿಯಾಗಿ ಜಾರಿಯಾಗಬೇಕಿದೆ. ನಾಗರೀಕರು ರಸ್ತೆ ಬದಿ ಕಸ ಬಿಸಾಡುತ್ತಾರೆ, ಅದನ್ನು ಪೌರಕಾರ್ಮಿಕರೇ ಸ್ವಚ್ಛಗೊಳಿಸಬೇಕಿದೆ. ಮನೆ-ಮನೆಯಿಂದ ಕಸ ಸಂಗ್ರಹಿಸುವ ಪದ್ದತಿ ಸರಿಯಾಗಿ ಜಾರಿಯಾದರೆ ಬಹುತೇಖ ಸಮಸ್ಯೆ ನಿವಾರಣೆಯಾಗಲಿದೆ ಎಂದು ಹೇಳಿದರು.

ತಂತ್ರಜ್ಞಾನ ಎಷ್ಟೇ ಬೆಳೆದಿದ್ದರೂ ಕೂಡಾ ಪೌರಕಾರ್ಮಿಕರು ಇನ್ನು ಪೊರಕೆಯಿಂದಲೇ ಬೀದಿಗಳನ್ನು ಸ್ವಚ್ಛ ಮಾಡುತ್ತಿದ್ದಾರೆ. ಅದನ್ನು ನಾವು ಬದಲಿಸಲು ಮುಂದಾಗಲಾಗುತ್ತಿದೆ. ಈ ನಿಟ್ಟಿನಲ್ಲಿ ಪೌರಕಾರ್ಮಿಕರಿಗೆ ಶೀಘ್ರ ಯಾಂತ್ರಿಕೃತ ಯಂತ್ರಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com