ನಕ್ಸಲರ ಶರಣಾಗತಿ, ವಿಕ್ರಮ್ ಗೌಡ ಎನ್‌ಕೌಂಟರ್‌ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಅಣ್ಣಾಮಲೈ

"ಸಾಮಾನ್ಯವಾಗಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮುಖದಲ್ಲಿ ಶರಣಾಗುವುದು ಕ್ರಮ. ಆದರೆ ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ನಕ್ಸಲರ ಶರಣಾಗತಿ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅಣ್ಣಾಮಲೈ ಹೇಳಿದರು.
ಅಣ್ಣಾಮಲೈ
ಅಣ್ಣಾಮಲೈ
Updated on

ಉಡುಪಿ: ರಾಜ್ಯದಲ್ಲಿ ನಕ್ಸಲರ ಶರಣಾಗತಿ ಮತ್ತು ಪುನರ್ವಸತಿ ನೀತಿಯ ಬಗ್ಗೆ ಸಂಶಯ ವ್ಯಕ್ತಪಡಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರು, ಅದರ ಪರಿಣಾಮಕಾರಿತ್ವ ಮತ್ತು ಪಾರದರ್ಶಕತೆಯನ್ನು ಶನಿವಾರ ಪ್ರಶ್ನಿಸಿದ್ದಾರೆ.

ಜನವರಿ 2015 ಮತ್ತು ಆಗಸ್ಟ್ 2016 ರ ನಡುವೆ ಉಡುಪಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಆಗಿ ಮತ್ತು ಕರ್ನಾಟಕದ ನಕ್ಸಲರ ಕೇಂದ್ರವೆಂದು ಪರಿಗಣಿಸಲಾದ ಚಿಕ್ಕಮಗಳೂರು ಎಸ್‌ಪಿಯಾಗಿ 2018 ರಲ್ಲಿ ಸೇವೆ ಸಲ್ಲಿಸಿದ್ದ ಅಣ್ಣಾಮಲೈ ಅವರು ಇಂದು ಉಡುಪಿಯಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದರು.

ರಾಜ್ಯದಲ್ಲಿ ನಕ್ಸಲರ ಶರಣಾಗತಿ ಮತ್ತು ಪುನರ್ವಸತಿ ನೀತಿ ಜಾರಿಯಲ್ಲಿದೆ. ನಕ್ಸಲರು ತಮ್ಮ ಚಟುವಟಿಕೆಗಳನ್ನು ತೊರೆದು ಮುಖ್ಯವಾಹಿನಿಗೆ ಬರಲು ದಾರಿ ಮಾಡಿಕೊಡುವುದು ಇದರ ಉದ್ದೇಶವಾಗಿದೆ. ಅದರೆ ಇಲ್ಲಿ ಸರ್ಕಾರವು ನಕ್ಸಲರಿಗೆ ಶರಣಾಗತಿ ಪ್ರಕ್ರಿಯೆಯನ್ನು ಸುಲಭ ಮಾಡಿಕೊಟ್ಟಂತೆ ಕಾಣುತ್ತಿದೆ ಎಂದರು.

ಅಣ್ಣಾಮಲೈ
ನಕ್ಸಲ್ ಮುಕ್ತ ರಾಜ್ಯ ಕರ್ನಾಟಕ: ಶಸ್ತ್ರಾಸ್ತ್ರ ತ್ಯಜಿಸಿದ ನಕ್ಸಲೀಯರ ಪುನರ್‌ ವಸತಿಗೆ ಸರ್ಕಾರ ನೆರವು- ಸಿಎಂ ಸಿದ್ದರಾಮಯ್ಯ

ಶರಣಾಗತಿ ಮತ್ತು ಎನ್‌ಕೌಂಟರ್ ಪ್ರಕರಣಗಳು ವ್ಯಾಪಕ ಊಹಾಪೋಹಗಳಿಗೆ ಕಾರಣವಾಗಿವೆ. ಅನೇಕರು ಈ ಘಟನೆಗಳು ಯಾವ ಸಂದರ್ಭದಲ್ಲಿ ನಡೆದವು ಎಂದು ಪ್ರಶ್ನಿಸುತ್ತಿದ್ದಾರೆ ಎಂದರು.

"ಸಾಮಾನ್ಯವಾಗಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮುಖದಲ್ಲಿ ಶರಣಾಗುವುದು ಕ್ರಮ. ಆದರೆ ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ನಕ್ಸಲರ ಶರಣಾಗತಿ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅಣ್ಣಾಮಲೈ ಹೇಳಿದರು.

ನಕ್ಸಲ್ ಮುಖಂಡ ವಿಕ್ರಮ್ ಗೌಡನ ಎನ್‌ಕೌಂಟರ್‌ನಲ್ಲೂ ಅನುಮಾನವಿದೆ. ಎನ್‌ಕೌಂಟರ್ ಆದ ತಕ್ಷಣ ನಕ್ಸಲರು ಶರಣಾದರು ಎಂದು ಸರ್ಕಾರ ಹೇಳುತ್ತಿದೆ. ಆದರೆ ನಕ್ಸಲರು ಶರಣಾಗುವಂತೆ ಯಾರು ಮಾತುಕತೆ ನಡೆಸಿದರು‌ ಎಂಬುದು ಗೊತ್ತಿಲ್ಲ. ನಕ್ಸಲ್ ತಂಡದೊಳಗಡೆ ಇರುವ ಆಂತರಿಕ ರಾಜಕೀಯವನ್ನು ಕಾಂಗ್ರೆಸ್ ದುರ್ಬಳಕೆ ಮಾಡಿಕೊಳ್ಳುತ್ತಿದೆಯೇ? ಎಂಬ ಅನುಮಾನ ಮೂಡುತ್ತಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com