ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ: ಸಿಟಿ ರವಿಗೆ ಬೆದರಿಕೆ ಪತ್ರ

ಸಿಟಿ ರವಿಯವರ ಚಿಕ್ಕಮಗಳೂರಿನ ಬಸವನಹಳ್ಳಿ ನಿವಾಸಕ್ಕೆ ಈ ಪತ್ರ ಬಂದಿದ್ದು, ​ಲಕ್ಷ್ಮೀ ಹೆಬ್ಬಾಳ್ಕರ್​ ಅವರ ಬಳಿ ಕ್ಷಮೆ ಕೇಳದಿದ್ದರೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕಕರ್ - ಸಿಟಿ ರವಿ
ಲಕ್ಷ್ಮಿ ಹೆಬ್ಬಾಳ್ಕಕರ್ - ಸಿಟಿ ರವಿ
Updated on

ಚಿಕ್ಕಮಗಳೂರು: ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ವಿಧಾನಪರಿಷತ್​​ ಸದಸ್ಯ ಸಿಟಿ ರವಿ ಅವರಿಗೆ ಜೀವ ಬೆದರಿಕೆ ಹಾಕಿ ಅನಾಧೇಯ ಪತ್ರವೊಂದು ಬಂದಿದೆ.

ಸಿಟಿ ರವಿಯವರ ಚಿಕ್ಕಮಗಳೂರಿನ ಬಸವನಹಳ್ಳಿ ನಿವಾಸಕ್ಕೆ ಈ ಪತ್ರ ಬಂದಿದ್ದು, ​ಲಕ್ಷ್ಮೀ ಹೆಬ್ಬಾಳ್ಕರ್​ ಅವರ ಬಳಿ ಕ್ಷಮೆ ಕೇಳದಿದ್ದರೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

“ಲಕ್ಷ್ಮೀ ಹೆಬ್ಬಾಳ್ಕರ್​ಗೆ ಕ್ಷಮೆ ಕೇಳದಿದ್ದರೆ ನಿಮ್ಮನ್ನು ಮತ್ತು ನಿಮ್ಮ ಪುತ್ರ ಸೂರ್ಯನನ್ನು ಹತ್ಯೆ ಮಾಡಲಾಗುವುದು” ಎಂದು ಬೆದರಿಕೆ ಹಾಕಲಾಗಿದ್ದು, ಈ ಸಂಬಂಧ ಸಿಟಿ ರವಿ ಪಿಎ ಚೇತನ್​ ಅವರು ಬಸವನಹಳ್ಳಿ ಪೊಲೀಸ್ ‌ಠಾಣೆಗೆ ದೂರು ನೀಡಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕಕರ್ - ಸಿಟಿ ರವಿ
ಸಿ.ಟಿ ರವಿ ಪ್ರಕರಣ: ಪೊಲೀಸ್ ದೌರ್ಜನ್ಯವನ್ನು ಗಂಭೀರವಾಗಿ ಪರಿಗಣಿಸಿ; ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರ ಸೂಚನೆ

ಈ ಬಗ್ಗೆ ಪ್ರತಿಕ್ರಿಯಿಸಿದ ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಆಮ್ಟೆ ಅವರು, ಅಪರಿಚಿತ ವ್ಯಕ್ತಿಗಳಿಂದ ಎಂಎಲ್​ಸಿ ಸಿ‌.ಟಿ.ರವಿ ಅವರಿಗೆ ಬೆದರಿಕೆ ಪತ್ರ ಬಂದಿದೆ. ಈ ಸಂಬಂಧ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಿ.ಟಿ.ರವಿ ಅವರಿಗೆ ಹೆಚ್ಚಿನ ಭದ್ರತೆ ನೀಡುತ್ತೇವೆ ಎಂದು ತಿಳಿಸಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನದ ಕೊನೆಯ ದಿನ ಡಿಸೆಂಬರ್​ 19 ರಂದು ವಿಧಾನ ಪರಿಷತ್‌ನಲ್ಲಿ ಅಮಿತ್‌ ಶಾ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಮಾತಿನ ಚಕಮಕಿ ನಡೆಯವಾಗ ಸಿಟಿ ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪ ಮಾಡಿದ್ದರು. ಈ ಕುರಿತು ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com