ಇದೆಂತಾ ವಿಕೃತಿ..: ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದ ದುರುಳರು, ರಕ್ತದ ಮಡುವಿನಲ್ಲಿ ಗೋವುಗಳ ನರಳಾಟ

ರಾತ್ರಿಯಿಡೀ ಹಸುಗಳು ರಕ್ತದ ಮಡುವಿನಲ್ಲಿ ನರಳಾಡಿವೆ. ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಸಧ್ಯ ಹಸುಗಳಿಗೆ ಚಾಮರಾಜೇಟೆಯ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಅಮಾನವೀಯ ಘಟನೆ ನಗರದ ಚಾಮರಾಜಪೇಟೆಯ ವಿನಾಯಕನಗರದಲ್ಲಿ ನಡೆದಿದೆ.

ತಡರಾತ್ರಿ ಈ ಅಮಾನವೀಯ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲುಗಳನ್ನು ಕೊಯ್ಡ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ.

ರಾತ್ರಿಯಿಡೀ ಹಸುಗಳು ರಕ್ತದ ಮಡುವಿನಲ್ಲಿ ನರಳಾಡಿವೆ. ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಸಧ್ಯ ಹಸುಗಳಿಗೆ ಚಾಮರಾಜೇಟೆಯ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪಾಪಿಗಳ ಈ ಕೃತ್ಯಕ್ಕೆ ಸ್ಥಳೀಯರ ಹಿಡಿಶಾಪ ಹಾಕುತ್ತಿದ್ದಾರೆ. ಸ್ಥಳದಲ್ಲಿ ಜನರು ಜಮಾವಣೆಗೊಂಡಿದ್ದು, ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಸ್ಥಳಕ್ಕೆ ಹಿಂದೂ ಕಾರ್ಯಕರ್ತರು ಧಾವಿಸಿದ್ದು, ಕೃತ್ಯವನ್ನು ಖಂಡಿಸಿದ್ದಾರೆ.

ಸಂಗ್ರಹ ಚಿತ್ರ
ಕೊಡಗು: ಹಸು ಹುಡುಕುತ್ತಾ ಕಾಡಿಗೆ ಹೋಗಿದ್ದಾಗ ಕಾಡಾನೆ ದಾಳಿ, ವ್ಯಕ್ತಿ ಬಲಿ!

ಘಟನಾ ಸ್ಥಳಕ್ಕೆ ಆರ್.ಅಶೋಕ್, ಪಿಸಿ ಮೋಹನ್ ಭೇಟಿ: 1 ಲಕ್ಷ ಪರಿಹಾರ ಘೋಷಣೆ

ಇನ್ನು ಘಟನಾ ಸ್ಥಳಕ್ಕೆ ಸಂಸದ ಪಿ ಸಿ ಮೋಹನ್ ಅವರು ಭೇಟಿ ನೀಡಿದ್ದು, ಮಾತುಕತ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೊಂದು ಅಮಾನವೀಯ ಕೃತ್ಯ. ಗೋವುಗಳನ್ನ ದೇವರು ಎಂದು ಪೂಜೆ ಮಾಡುತ್ತೇವೆ. ಆದರೆ, ಕಿಡಿಗೇಡಿಗಳು ಗೋವುಗಳ ಕೆಚ್ಚಲು ಕೊಯ್ದು ದುಷ್ಕೃತ್ಯ ಎಸಗಿದ್ದಾರೆ. ಕೂಡಲೇ ಕಿಡಿಗೇಡಿಗಳ ಬಂಧನವಾಗಬೇಕು. ಈ ಸರ್ಕಾರ ಬಂದ ಮೇಲೆ ಇದೆಲ್ಲಾ ಆಗುತ್ತಿದೆ. ಕಿಡಿಗೇಡಿಗಳ ಬಂಧನವಾಗುವವರೆಗೆ ಹೋರಾಟ ನಿಲುವುದಿಲ್ಲ ಎಂದು ಹೇಳಿದ್ದಾರೆ.

ಪೊಲೀಸರ ಜೊತೆ ಮಾತಾನಾಡಿದ್ದೇನೆ. ಇಲ್ಲಿ ಸಿಸಿಟಿವಿಗಳು ಇಲ್ಲ. ಸಿಸಿಟಿವಿ ಹಾಕಿದರೆ ಕಿತ್ತು ಹಾಕುತ್ತಾರೆ. ಇದೀಗ ನನ್ನ ಎಂಪಿ ಫಂಡ್‌ ನಿಂದ ಸಿಸಿಟಿವಿ ಹಾಕೋಕೆ ವ್ಯವಸ್ಥೆ ಮಾಡುತ್ತೇನೆಂದು ತಿಳಿಸಿದರು.

ಘಟನೆಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ತೀವ್ರವಾಗಿ ಕಿಡಿಕಾರಿದ್ದು, ಹಸುಗಳ ಮಾಲೀಕನಿಗೆ ರೂ.1 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.

ವರದಿ ಬಳಿಕ ಕ್ರಮ

ಈ ನಡುವೆ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ.

ಗೃಹ ಸಚಿವ ಜಿ.ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿ, ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ, ಪೊಲೀಸರಿಂದ ವರದಿ ಕೇಳಲಾಗಿದ್ದು, ವರದಿ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com