ಅಂತರ್ಜಾತಿ ವಿವಾಹಗಳಿಂದ ಸಮ ಸಮಾಜ ನಿರ್ಮಾಣ ಸಾಧ್ಯ: ಸಿಎಂ ಸಿದ್ದರಾಮಯ್ಯ

ಬಸವಣ್ಣನವರ ಕಾಲದಲ್ಲಿಯೇ ಅಂತರ್ಜಾತಿ ವಿವಾಹ ಪದ್ಧತಿ ಪ್ರಚಲಿತದಲ್ಲಿತ್ತು. ವಿವಾಹದ ಖರ್ಚು ವೆಚ್ಚಗಳನ್ನು ಭರಿಸಲಾಗದ ಬಡಕುಟುಂಬಗಳಿಗೆ ಸಾಮೂಹಿಕ ವಿವಾಹ ವರದಾನವಾಗಿದೆ
CM Siddaramaiah wishes to new Couples
ನವ ಜೋಡಿಗಳಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ
Updated on

ವಿಜಯನಗರ: ಅಂತರ್ಜಾತಿ ವಿವಾಹಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕು. ಇದರಿಂದಾಗಿ ಸಮಾಜದಲ್ಲಿನ ಜಾತಿ ವ್ಯವಸ್ಥೆ ಅಳಿದು ಸಮಸಮಾಜ ನಿರ್ಮಾಣ ಸಾಧ್ಯವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದರು.

ವಿಜಯನಗರ ಜಿಲ್ಲೆಯ ಬಂಡಿಹಳ್ಳಿಯಲ್ಲಿ ಆಯೋಜಿಸಿದ್ದ "ಸರ್ವಧರ್ಮಗಳ ಸಾಮೂಹಿಕ ವಿವಾಹ" ಸಮಾರಂಭದಲ್ಲಿ ಭಾಗವಹಿಸಿ, ನವಜೋಡಿಗೆ ಶುಭ ಹಾರೈಸಿ, ಮಾತನಾಡಿದ ಮುಖ್ಯಮಂತ್ರಿ, ಬಸವಣ್ಣನವರ ಕಾಲದಲ್ಲಿಯೇ ಅಂತರ್ಜಾತಿ ವಿವಾಹ ಪದ್ಧತಿ ಪ್ರಚಲಿತದಲ್ಲಿತ್ತು. ವಿವಾಹದ ಖರ್ಚು ವೆಚ್ಚಗಳನ್ನು ಭರಿಸಲಾಗದ ಬಡಕುಟುಂಬಗಳಿಗೆ ಸಾಮೂಹಿಕ ವಿವಾಹ ವರದಾನವಾಗಿದೆ. ಸರಳ ಶೈಲಿಯಲ್ಲಿ ವಿವಾಹವಾಗುವ ಪದ್ದತಿಯನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಜಾತ್ಯತೀತ ತತ್ವವನ್ನು ನಮ್ಮ ಸಂವಿಧಾನ ಬೋಧಿಸಿದೆ. ಇದೇ ಆಶಯವನ್ನು ವ್ಯಕ್ತಪಡಿಸಿದ ಬಸವಣ್ಣವರು, ಜಾತಿ ಆಧಾರಿತ ಸಮಾಜ ವ್ಯವಸ್ಥೆ ಸಾಧುವಲ್ಲ ಎಂದು ಪ್ರತಿಪಾದಿಸಿದ್ದರು. ‘ದಯವೇ ಧರ್ಮದ ಮೂಲವಯ್ಯ’ ಎಂದು ನುಡಿದು, ಹಲವು ಉದಾತ್ತ ತತ್ವವನ್ನು ಬೋಧಿಸಿದ ಬಸವೇಶ್ವರರನ್ನು ಸರ್ಕಾರ ‘ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿರುವುದಾಗಿ ತಿಳಿಸಿದರು.

ಮನುಷ್ಯ ಹುಟ್ಟುವಾಗ ವಿಶ್ವಮಾನವನಾಗಿದ್ದು, ಜಾತಿಧರ್ಮಗಳ ಬಂಧನದದಲ್ಲಿ ಸಿಲುಕಿ ಅಲ್ಪಮಾನವನಾಗುತ್ತಾನೆ. ಆದ್ದರಿಂದ ವಿಶ್ವಮಾನವರಾಗುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕಾಗಿದೆ. ಹೆಣ್ಣುಮಕ್ಕಳಿಗೆ ಶಕ್ತಿತುಂಬುವ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಯಶಸ್ವಿಯಾಗಿ ಜಾರಿಗೊಳಿಸಿದೆ. ಇಂದು ವಿವಾಹ ಬಂಧನಕ್ಕೊಳಗಾದ ಮಹಿಳೆಯರಿಗೂ ಸರ್ಕಾರದ ಗ್ಯಾರಂಟಿಗಳು ತಲುಪವಂತಾಗಬೇಕು ಎಂದರು.

CM Siddaramaiah wishes to new Couples
ಸಾಮಾಜಿಕ ಪರಿವರ್ತನೆ?: ಮೈಸೂರು ಜಿಲ್ಲೆಯಲ್ಲಿ ಅಂತರ್ಜಾತಿ ವಿವಾಹ ಪ್ರಮಾಣ ಹೆಚ್ಚಳ!

ಆರ್ಥಿಕವಾಗಿ ದುರ್ಬಲರಾಗಿರುವ ಜನರ ಕೊಂಡುಕೊಳ್ಳುವ ಶಕ್ತಿ ಹೆಚ್ಚಬೇಕು. ಅಂತೆಯೇ ಶ್ರೀಮಂತವರ್ಗದವರೂ ಕೂಡ ಬಡವರ ಸಹಾಯಕ್ಕೆ ಮುಂದಾಗಬೇಕು, ಈ ಮೂಲಕ ಸಮಾಜದ ಋಣ ತೀರಿಸಲು ಪ್ರಯತ್ನಿಸಬೇಕು. ಡಾ. ಅಂಬೇಡ್ಕರ್ ಅವರು ನೀಡಿರುವ ಸಂವಿಧಾನ ಎಲ್ಲರಿಗೂ ಸಮಾನ ಹಕ್ಕು ಹಾಗೂ ಸಮಾನ ಅವಕಾಶಗಳನ್ನು ನೀಡಿದೆ. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಅರಿತಿರಬೇಕು. ಸಂವಿಧಾನ ನೀಡಿರುವ ಹಕ್ಕು ಬಾಧ್ಯತೆಗಳ ಬಗ್ಗೆ ಅರಿವು ಪಡೆದು, ಜವಾಬ್ದಾರಿಯುತ ನಾಗರಿಕನಾಗುವುದು ಅವಶ್ಯವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com