ರೇಣುಕಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್'ಗೆ ನೋಟಿಸ್ ಜಾರಿ, ಗನ್ ಲೈಸೆನ್ಸ್ ರದ್ದು ಸಾಧ್ಯತೆ

ನಟ ದರ್ಶನ್ ಕೆಲ ವರ್ಷಗಳ ಹಿಂದೆ ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪಡೆದಿದ್ದರು. ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅವರು ಸಿಲುಕಿರುವುದರಿಂದ ಸಂಕಷ್ಟ ಎದುರಾಗಿದೆ.
ನಟ ದರ್ಶನ್
ನಟ ದರ್ಶನ್
Updated on

ಬೆಂಗಳೂರು: ರೇಣುಕಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ಬಳಿ ಇರುವ ಗನ್ ಲೈಸೆನ್ಸ್'ನ್ನು ಪೊಲೀಸರು ಹಿಂಪಡೆಯುವ ಸಾಧ್ಯತೆಗಳಿವೆ.

ಕೊಲೆ ಪ್ರಕರಣದಲ್ಲಿ ಈಗಾಗಲೇ ಜಾಮೀನು ಮೇಲೆ ಬಿಡುಗಡೆಯಾಗಿರುವ ದರ್ಶನ್, ಪರವಾನಗಿ ಗನ್ ಬಳಸಿ ಪ್ರಕರಣ ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆಗಳಿವೆ. ಹೀಗಾಗಿ ನಿಮ್ಮ ಗನ್ ಲೈಸೆನ್ಸ್ ಏಕೆ ರದ್ದುಗೊಳಿಸಬಾರದು ಎಂದು ಪ್ರಶ್ನಿಸಿ ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ಪದ್ಮಿನಿ ಸಾಹು ಅವರು ನಟನಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.

ನೋಟಿಸ್ ತಲುಪಿದ 7 ದಿನಗಳೊಳಗೆ ಸ್ಪಷ್ಟನೆ ನೀಡುವಂತೆ ನೋಟಿಸ್ ನಲ್ಲಿ ಸೂಚಿಸಿದ್ದಾರೆ. ದರ್ಶನ್ ಸ್ಪಷ್ಟನೆ ನೀಡಿದ ಬಳಿಕ ಅದನ್ನು ಪರಿಶೀಲಿಸಿ ಗನ್ ಲೈಸೆನ್ಸ್ ಹಿಂಪಡೆಯುವ ಬಗ್ಗೆ ಪೊಲೀಸರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆಂದು ತಿಳಿದುಬಂದಿದೆ.

ನಟ ದರ್ಶನ್ ಕೆಲ ವರ್ಷಗಳ ಹಿಂದೆ ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪಡೆದಿದ್ದರು. ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅವರು ಸಿಲುಕಿರುವುದರಿಂದ ಸಂಕಷ್ಟ ಎದುರಾಗಿದೆ.

ಕೊಲೆ ಪ್ರಕರಣದಲ್ಲಿ ಜೂನ್ ತಿಂಗಳಲ್ಲಿ ಬಂಧನಕ್ಕೆ ಒಳಗಾಗಿ ಸುಮಾರು 6 ತಿಂಗಳು ಜೈಲು ವಾಸ ಅನುಭವಿಸಿದ್ದ ದರ್ಶನ್, ಡಿ.13ರಂದು ಹೈಕೋರ್ಟ್'ನಿಂದ ಜಾಮೀನು ಪಡೆದು ಬಿಡುಗಡೆಯಾಗಿದ್ದರು.

ನಟ ದರ್ಶನ್
ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಜಾಮೀನು ಪ್ರಶ್ನಿಸಿ ಮೇಲ್ಮನವಿ; ವಿಶೇಷ ವಕೀಲರ ನೇಮಕ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com