ಚಿನ್ನವಾಗಲಿದೆ ನಿಮ್ಮ ಭೂಮಿ, ಮಾರಿಕೊಳ್ಳದಿರಿ: ರಾಮನಗರ ರೈತರಿಗೆ ಡಿ.ಕೆ ಶಿವಕುಮಾರ್ ಸಲಹೆ

ರಾಮನಗರ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ದೆಹಲಿಗೆ ಕಳುಹಿಸಲಾಗಿದೆ. ಶೀಘ್ರದಲ್ಲೇ ಬೆಂಗಳೂರು ದಕ್ಷಿಣ ಜಿಲ್ಲೆ ಅಸ್ತಿತ್ವಕ್ಕೆ ಬರಲಿದೆ.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್
Updated on

ಬೆಂಗಳೂರು: ಶೀಘ್ರದಲ್ಲೇ ನಿಮ್ಮ ಭೂಮಿ ಚಿನ್ನವಾಗಿ ಮಾರ್ಪಡಲಿದೆ, ಮಾರಾಟ ಮಾಡದಿರಿ ಎಂದು ರಾಮನಗರ ರೈತರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಲಹೆ ನೀಡಿದ್ದಾರೆ.

ಕನಕಪುರದಲ್ಲಿ ಭಾನುವಾರ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅವರು, ರಾಮನಗರ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ದೆಹಲಿಗೆ ಕಳುಹಿಸಲಾಗಿದೆ. ಶೀಘ್ರದಲ್ಲೇ ಬೆಂಗಳೂರು ದಕ್ಷಿಣ ಜಿಲ್ಲೆ ಅಸ್ತಿತ್ವಕ್ಕೆ ಬರಲಿದೆ. ಬೆಂಗಳೂರು ದಕ್ಷಿಣ ಜಿಲ್ಲೆ ಅಸ್ತಿತ್ವಕ್ಕೆ ಬಂದ ನಂತರ ನಿಮ್ಮ ಭೂಮಿ ಚಿನ್ನದ ಬೆಲೆ ಪಡೆಯಲಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಆಸ್ತಿ ಮಾರಿಕೊಳ್ಳಬೇಡಿ, ಉಳಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಜಿಲ್ಲೆಗೆ ಕೇಂದ್ರ ಗೃಹ ಸಚಿವಾಲಯದಿಂದ ಗುಪ್ತಚರ ಇಲಾಖೆಯವರು ವರದಿ ಕಳುಹಿಸುವುದು ಬಾಕಿ ಇದೆ. ಈ ಕುರಿತು ಕೇಂದ್ರ ಸಚಿವರು ಹಾಗೂ ಪ್ರಧಾನಮಂತ್ರಿಗೆ ಪತ್ರ ಬರೆಯುತ್ತೇನ. ನಂತರ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಅಧಿಕೃತವಾಗಿ ಘೋಷಣೆಯಾಗಲಿದೆ. ರಾಮನಗರ ಜಿಲ್ಲಾ ಕೇಂದ್ರವಾಗಿಯೇ ಉಳಿಯಲಿದೆ’ ಎಂದು ತಿಳಿಸಿದರು.

ನಾವು ಬೆಂಗಳೂರಿನವರು, ನಮ್ಮ ಈ ಗುರುತನ್ನು ನಾವು ಯಾಕೆ ಬಿಟ್ಟುಕೊಡಬೇಕು? ಭವಿಷ್ಯದಲ್ಲಿ ನಿಮ್ಮ ಜಮೀನಿನ ಬೆಲೆ ಏನಾಗುತ್ತದೆ ಎಂದು ನೀವು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಈ ವಿಚಾರವಾಗಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಬಹಳ ಟೀಕೆ ಟಿಪ್ಪಣಿ ಮಾಡುತ್ತಿದ್ದಾರೆ. ಹಾಗಿದ್ದರೆ ಇವರುಗಳು ತಮ್ಮ ಊರು ಬಿಟ್ಟು ಇಲ್ಲಿಗೆ ಬಂದು ಯಾಕೆ ನೂರಾರು ಎಕರೆ ಜಮೀನು ಖರೀದಿ ಮಾಡಿದ್ದಾರೆ?' ಎಂದು ಪ್ರಶ್ನಿಸಿದರು.

15 ರಿಂದ 20 ವರ್ಷಗಳ ಹಿಂದೆ ಈ ಪ್ರದೇಶದಲ್ಲಿ ಭೂಮಿಯ ಬೆಲೆ ಎಷ್ಟಿತ್ತು? ಈಗ ಅದರ ಬೆಲೆ ಎಷ್ಟು? ನಾನು ನಿಮಗೆ ನೇರವಾಗಿ ಹಣ ನೀಡಲು ಸಾಧ್ಯವಾಗದಿದ್ದರೂ, ನಿಮ್ಮ ಆಸ್ತಿಯ ಬೆಲೆಯನ್ನು ಹೆಚ್ಚಿಸುವ ಮೂಲಕ ನಿಮಗೆ ಸಹಾಯ ಮಾಡಿದ್ದೇನೆ. ಹೀಗಾಗಿ, ನಾನು ನಿಮ್ಮ ಜೀವನದಲ್ಲಿ ಬದಲಾವಣೆಯನ್ನು ತಂದಿದ್ದೇನೆ ಎಂದು ಹೇಳಿದರು

ಡಿಕೆ.ಶಿವಕುಮಾರ್
ಈಗಿನ ಕಾಂಗ್ರೆಸ್ ಅಡಳಿತಾವಧಿಯಲ್ಲೇ ಡಿಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ವಿನಯ್ ಗುರೂಜಿ ಭವಿಷ್ಯ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com