High Court
ಹೈಕೋರ್ಟ್

ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ: ಜಯಲಲಿತಾ ಚಿನ್ನಾಭರಣ ವಾಪಸ್ ಕೋರಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಜಯಲಲಿತಾ ಅವರ ಸಹೋದರ ಜಯಕುಮಾರ್ ಮಕ್ಕಳಾದ ಜೆ. ದೀಪಾ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ಏಕಸದಸ್ಯ ಪೀಠ, 12 ಜುಲೈ 2023 ರ ವಿಶೇಷ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿಯಿತು.
Published on

ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ವಶಕ್ಕೆ ಪಡೆಯಲಾಗಿದ್ದ ಬಹುಕೋಟಿ ಮೌಲ್ಯದ ಚಿನ್ನಾಭರಣ ಮತ್ತಿತಿರ ವಸ್ತುಗಳನ್ನು ನಮಗೆ ಬಿಡುಗಡೆ ಮಾಡಬೇಕು ಎಂದು ರಾಜ್ಯದ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡುವಂತೆ ಕೋರಿ ಅವರ ಕಾನೂನುಬದ್ಧ ವಾರಸುದಾರರಾದ ಜೆ.ದೀಪಕ್ ಮತ್ತು ಜೆ.ದೀಪಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.

ಜಯಲಲಿತಾ ಅವರ ಸಹೋದರ ಜಯಕುಮಾರ್ ಮಕ್ಕಳಾದ ಜೆ. ದೀಪಾ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ಏಕಸದಸ್ಯ ಪೀಠ, 12 ಜುಲೈ 2023 ರ ವಿಶೇಷ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿಯಿತು.

ಈ ಹಿಂದೆ ಪ್ರಕರಣದಲ್ಲಿ ಜಪ್ತಿ ಮಾಡಲಾದ ಬೆಲೆಬಾಳುವ ಚಿನ್ನಾಭರಣಗಳನ್ನು ಮರಳಿಸಲು 19 ಫೆಬ್ರವರಿ 2024 ದಿನಾಂಕವನ್ನು ವಿಶೇಷ ನ್ಯಾಯಾಲಯ ನಿಗದಿಪಡಿಸಿತ್ತು. ವಶಕ್ಕೆ ಪಡೆದ ವಸ್ತುಗಳನ್ನು ವಶಕ್ಕೆ ಪಡೆಯಲು 2024ರ ಮಾರ್ಚ್ 6 ಮತ್ತು 7 ರಂದು ಅಧಿಕಾರಿಗಳನ್ನು ನೇಮಿಸುವಂತೆ ತಮಿಳುನಾಡು ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

High Court
ಜಯಲಲಿತಾ ಚಿನ್ನಾಭರಣಗಳ ಹಸ್ತಾಂತರಿಸುವ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ಆದರೆ, ಮಾರ್ಚ್ 5, 2024 ರಂದು ದೀಪಕ್ ಮತ್ತು ದೀಪಾ ಮೇಲ್ಮನವಿ ಸಲ್ಲಿಸಿದ ನಂತರ ಆ ಆದೇಶಕ್ಕೆ ಹೈಕೋರ್ಟ್‌ನ ಏಕ ಸದಸ್ಯ ಪೀಠ ತಡೆ ನೀಡಿತ್ತು. ಇದೀಗ ದೀಪಕ್ ಮತ್ತು ದೀಪ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವುದರಿಂದ ವಿಶೇಷ ನ್ಯಾಯಾಲಯ ತನ್ನ ಸುಪರ್ದಿಯಲ್ಲಿರುವ ಆಸ್ತಿಯನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ಮುಂದುವರೆಸಬಹುದು.

X

Advertisement

X
Kannada Prabha
www.kannadaprabha.com