
ಬೆಂಗಳೂರು: ನಗರದ ಚೊಕ್ಕಸಂದ್ರದಲ್ಲಿ ಅನಿಲ ಸೋರಿಕೆಯಿಂದಾಗಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಬೆಳಗ್ಗೆ 8.30ರ ಸುಮಾರಿಗೆ ಈ ಘಟನೆ ನಡೆದಿದೆ. ಬಾಡಿಗೆಗೆಂದು ವಾಸವಿದ್ದ ಗಾಯಾಳುಗಳಾದ ದಿಜುಧಾರ್ ಮತ್ತು ಅವರ ಪತ್ನಿ ಅಂಜಲಿ ದಾಸ್ ಅವರ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ನೆರೆಹೊರೆಯವರೂ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ದಿಜುಧಾರ್ (34), ಅಂಜಲಿ ದಾಸ್ (31), ಮನುಶ್ರೀ (3), ಮನು (25), ತಿಪ್ಪೇರುದ್ರಸ್ವಾಮಿ (50), ಶೋಭಾ (60) ಹಾಗೂ ಕರೀಬುಲ್ಲ ಎಂಬುವವರಿಗೆ ಗಂಭೀರ ಗಾಯಗಾಳಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement