ಕಲಬುರಗಿ: 'ಪ್ರೀತ್ಸೆ ಪ್ರೀತ್ಸೆ' ಅಂತಾ ಅಪ್ರಾಪ್ತೆ ಪ್ರಾಣಕ್ಕೆ ಎರವಾದ ಮುಸ್ಲಿಂ ಯುವಕನ ಬಂಧನ

ಇನ್ನೂ ಬಾಲಕಿ ಸಾವಿಗೆ ನ್ಯಾಯ ಸಿಗಬೇಕು ಎಂದು ಘಟನೆಯನ್ನು ಖಂಡಿಸಿ ಜೇವರ್ಗಿ ಪಟ್ಟಣದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜದಿಂದ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದರು.
Mehaboob
ಆರೋಪಿ ಮೆಹಬೂಬ್
Updated on

ಕಲಬುರಗಿ: ಪ್ರೀತಿಸುವಂತೆ ಪೀಡಿಸುತ್ತಿದ್ದ ಮುಸ್ಲಿಂ ಯುವಕನ ಕಿರುಕುಳ ತಾಳಲಾರದೇ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಜೇವರ್ಗಿ ತಾಲೂಕಿನಲ್ಲಿ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 14 ವರ್ಷದ ಬಾಲಕಿಗೆ ಕಳೆದ ಹಲವು ದಿನಗಳಿಂದ ಆಟೋ ಚಾಲಕ ಮೆಹಬೂಬ್ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ, ಆತನ ಕಿರುಕುಳ ತಾಳಲಾರದೇ ನೇಣುಬಿಗಿದುಕೊಂಡು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇನ್ನೂ ಬಾಲಕಿ ಸಾವಿಗೆ ನ್ಯಾಯ ಸಿಗಬೇಕು ಎಂದು ಘಟನೆಯನ್ನು ಖಂಡಿಸಿ ಜೇವರ್ಗಿ ಪಟ್ಟಣದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜದಿಂದ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದರು.

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಬಾಲಕಿಯ ಆತ್ಮಹತ್ಯೆಗೆ ಕಾರಣವಾಗಿರುವ ಆರೋಪಿ ಮಹೆಬೂಬ್‌ನನ್ನು ಶೀಘ್ರ ಬಂಧಿಸಬೇಕು. ಪೊಕ್ಸೊ ಕಾಯ್ದೆಯಡಿ ಕಠಿಣ ಶಿಕ್ಷೆಗೆ ಗುರಿಪಡಿಸಲು ಕಾನೂನು ಕ್ರಮ ಜರುಗಿಸಬೇಕು. ಬಾಲಕಿಯ ಕುಟುಂಬಸ್ಥರಿಗೆ ಅಧಿಕ ಮೊತ್ತದ ಪರಿಹಾರ ಧನ ನೀಡಬೇಕು. ಆರೋಪಿಯನ್ನು ಬಂಧಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ ಎಂದು ಪ್ರತಿಭಟನೆಕಾರರು ಆಕ್ರೋಶ ವ್ಯಕ್ತಪಡಿಸಿದರು. ಹಲವು ದಿನಗಳಿಂದ ಪ್ರೀತಿ ಮಾಡುವಂತೆ ಯುವತಿಗೆ ಕಿರುಕುಳ ನೀಡಿದ ಆರೋಪಿ ಮೆಹಬೂಬ್, ನನ್ನು ಪೋಲಿಸರು ಇದೀಗ ಬಂಧಿಸಿದ್ದಾರೆ.

Mehaboob
ಬೆಂಗಳೂರಿನಲ್ಲಿ ಹೃದಯ ವಿದ್ರಾವಕ ಘಟನೆ: 29ನೇ ಮಹಡಿಯಿಂದ ಜಿಗಿದು 12 ವರ್ಷದ ಬಾಲಕಿ ಆತ್ಮಹತ್ಯೆ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com