ಅನಧಿಕೃತ ಫ್ಲೆಕ್ಸ್-ಬ್ಯಾನರ್ ಹಾಕುವವರ ವಿರುದ್ಧ FIR ದಾಖಲಿಸಿ: ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚನೆ

ಬಿಬಿಎಂಪಿ ಪ್ರಧಾನ ಕಚೇರಿಯಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪಾಲಿಕೆಯ 8 ವಲಯಗಳಲ್ಲಿ ಅನಧಿಕೃತ ಜಾಹೀರಾತುಗಳನ್ನು ತೆಗೆದುಹಾಕುವ ಅಗತ್ಯವನ್ನು ಒತ್ತಿ ಹೇಳಿದರು.
ಅನಧಿಕೃತ ಫ್ಲೆಕ್ಸ್.
ಅನಧಿಕೃತ ಫ್ಲೆಕ್ಸ್.
Updated on

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು ಅಳವಡಿಸಿರುವವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಅಧಿಕಾರಿಗಳಿಗೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೋಮವಾರ ಸೂಚನೆ ನೀಡಿದ್ದಾರೆ.

ಬಿಬಿಎಂಪಿ ಪ್ರಧಾನ ಕಚೇರಿಯಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪಾಲಿಕೆಯ 8 ವಲಯಗಳಲ್ಲಿ ಅನಧಿಕೃತ ಜಾಹೀರಾತುಗಳನ್ನು ತೆಗೆದುಹಾಕುವ ಅಗತ್ಯವನ್ನು ಒತ್ತಿ ಹೇಳಿದರು. ಅಲ್ಲದೆ, ಪದೇ ಪದೇ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಆಸ್ಟಿನ್ ಟೌನ್‌ನ ನಂದನ್ ಮೈದಾನ, ಹಲಸೂರು, ಅಶೋಕ್ ನಗರ ಮತ್ತು ಶಾಂತಿ ನಗರದಾದ್ಯಂತ ಬಿಡಿಎ ಅಧ್ಯಕ್ಷ ಮತ್ತು ಶಾಸಕ ಎನ್‌ಎ ಹ್ಯಾರಿಸ್ ಅವರ ಹುಟ್ಟುಹಬ್ಬದ ಆಚರಣೆ ಕುರಿತು ಅನಧಿಕೃತ ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳು ಕಂಡು ಬಂದಿತ್ತು.

ಇದನ್ನು ಗಂಭೀರವಾಗಿ ಪರಿಗಣಿಸಿದ ಆಯುಕ್ತರು, ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಿಯೂ ಅನಧಿಕೃತ ಜಾಹೀರಾತು ಇರದಂತೆ ನೋಡಿಕೊಳ್ಳಬೇಕು. ವಲಯಗಳಲ್ಲಿ ಜಾಹೀರಾತುಗಳನ್ನು ತೆರವುಗೊಳಿಸಿ, ಅದನ್ನು ಅಳವಡಿಸಿರುವವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ಮತ್ತೆ ಯಾವುದೇ ರೀತಿಯ ಅನಧಿಕೃತ ಜಾಹೀರಾತುಗಳನ್ನು ಅಳವಡಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಆಸ್ತಿ ವಹಿವಾಟುಗಳಿಗೆ ಇ–ಖಾತಾ ಕಡ್ಡಾಯಗೊಳಿಸಿರುವುದರಿಂದ, ಭದ್ರತೆ, ಪುನರ್‌ನಿರ್ಮಾಣ, ಭದ್ರತೆ ಬಡ್ಡಿ ಜಾರಿ ಕಾಯ್ದೆ 2002 (ಸರ್ಫೇಸಿ ಕಾಯ್ದೆ) ನಿಬಂಧನೆಗಳ ಅಡಿ ಬ್ಯಾಂಕ್‌ಗಳು, ಹಣಕಾಸು ಸಂಸ್ಥೆಗಳು ಆಸ್ತಿಗಳ ಮಾರಾಟ ಪ್ರಮಾಣ ಪತ್ರ ನೋಂದಾಯಿಸಲು ಅನುವಾಗುವಂತೆ, ಬಿಬಿಎಂಪಿ ಇ–ಖಾತಾ ವಿಧಾನವನ್ನು ರಚಿಸಬೇಕು. ಒಂದು ಸ್ವತ್ತನ್ನು ಅಡಮಾನವಿಟ್ಟು ಪಡೆದ ಸಾಲವನ್ನು ಮರು ಪಾವತಿ ಮಾಡಲು ವಿಫಲವಾದಾಗ, ಬ್ಯಾಂಕ್‌ಗಳು ಮಾರಾಟ ಪ್ರಮಾಣದ ಮೂಲಕ ಮಾರಾಟವನ್ನು ಕಾರ್ಯಗತಗೊಳಿಸುತ್ತವೆ. ಎಲ್ಲ ನೋಂದಣಿಗೂ ಇ–ಖಾತಾ ಕಡ್ಡಾಯವಾಗಿರುವುದರಿಂದ ಕೆಲವು ಬಾರಿ ಖಾತಾದಾರ ಸಹಕರಿಸದಿರಬಹುದು. ಆದ್ದರಿಂದ ಹಣಕಾಸು ಸಂಸ್ಥೆಗಳಿಗೆ ಅನುಕೂಲವಾಗಲು ಇ–ಖಾತಾ ಪ್ರಕ್ರಿಯೆಯಲ್ಲಿ ಅವರಿಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಮಾಹಿತಿ ನೀಡಿದರು.

ಇದಲ್ಲದೆ, ಬಿಬಿಎಂಪಿ ಮಿತಿಯಲ್ಲಿ ಆಸ್ತಿ ತೆರಿಗೆ ತಪ್ಪಿಸುವ ಮಾಲೀಕರು. "ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಆಸ್ತಿಗಳ ಸಂಖ್ಯೆಯನ್ನು ಗುರುತಿಸಿ, ಅವುಗಳನ್ನು ತೆರಿಗೆ ವ್ಯಾಪ್ತಿಗೆ ತರಲಾಗಿದೆಯೆ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆಯೂ ಸೂಚಿಸಿದರು.

ಅನಧಿಕೃತ ಫ್ಲೆಕ್ಸ್.
ಲೋಕಾಯುಕ್ತ ದಾಳಿ ಬಳಿಕ ಇಬ್ಬರು ಬಿಬಿಎಂಪಿ ಅಧಿಕಾರಿಗಳ ಅಮಾನತು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com