ಬಾಕಿ ಬಿಲ್ ಪಾವತಿ: ಸರ್ಕಾರದ ವಿರುದ್ಧ ತಿರುಗಿಬಿದ್ದ ಗುತ್ತಿಗೆದಾರರು; 7 ದಿನಗಳ ಗಡುವು

ಬಾಕಿ ಬಿಲ್‌ಗಳನ್ನು ತೆರವುಗೊಳಿಸುವಲ್ಲಿ ವಿಳಂಬ ಮತ್ತು ಗುತ್ತಿಗೆ ನೀಡುವಲ್ಲಿ ಅಕ್ರಮಗಳ ಆರೋಪದ ಬಗ್ಗೆ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಸುಮಾರು 32 ಸಾವಿರ ಕೋಟಿ ರೂ. ಬಾಕ್ ಬಿಲ್‌ ಬಿಡುಗಡೆ ಸಂಬಂಧ ರಾಜ್ಯ ಸರಕಾರ ಮತ್ತು ಗುತ್ತಿಗೆದಾರರ ಸಂಘದ ನಡುವಿನ ಸಂಘರ್ಷ ಮತ್ತೆ ಶುರುವಾಗಿದೆ.

ಬಾಕಿ ಬಿಲ್‌ಗಳನ್ನು ತೆರವುಗೊಳಿಸುವಲ್ಲಿ ವಿಳಂಬ ಮತ್ತು ಗುತ್ತಿಗೆ ನೀಡುವಲ್ಲಿ ಅಕ್ರಮಗಳ ಆರೋಪದ ಬಗ್ಗೆ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ಏಳು ದಿನಗಳಲ್ಲಿ ಸಮಸ್ಯೆಗಳನ್ನು ಪರಿಹರಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ಈ ಸಂಬಂಧ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಮತ್ತು ಆರ್‌ಡಿಆರ್‌ಪಿ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಸಿದ್ದರಾಮಯ್ಯ ಸಂಪುಟದ ಏಳು ಸಚಿವರಿಗೆ ಸಂಘ ಪತ್ರ ಬರೆದಿದೆ.

32,000 ಕೋಟಿ ರೂ. ಮೌಲ್ಯದ ಬಿಲ್‌ಗಳು ಬಾಕಿ ಉಳಿದಿವೆ ಮತ್ತು ಬಾಕಿ ಬಿಡುಗಡೆ ಮಾಡುವಾಗ ಸರ್ಕಾರ ಹಿರಿತನವನ್ನು ಪರಿಗಣಿಸುತ್ತಿಲ್ಲ. ಶಾಸಕರು ಶಿಫಾರಸು ಮಾಡಿದ ಬಿಲ್‌ಗಳನ್ನು ಇಲಾಖೆಗಳು ತೆರವುಗೊಳಿಸುತ್ತಿವೆ ಎಂದು ಆರೋಪಿಸಿದ್ದಾರೆ.

ಶಾಸಕರು ಶಿಫಾರಸು ಮಾಡಿದವರಿಗೆ ಕೆಲಸದ ಟೆಂಡರ್‌ಗಳನ್ನು ಕೂಡ ನೀಡಲಾಗುತ್ತಿದೆ, ಇದು ಹೀಗೆಯೇ ಮುಂದುವರಿದರೆ ಪ್ರತಿಭಟನೆ ಮಾಡುವುದು ಬಿಟ್ಟು ನಮಗೆ ಬೇರೆ ದಾರಿಯಿಲ್ಲ. ಇದರಲ್ಲಿ ಎಲ್ಲಾ ಪಕ್ಷಗಳ ಶಾಸಕರು ಮತ್ತು ಸಚಿವರು ಭಾಗಿಯಾಗಿದ್ದಾರೆ, ಅವರ ಹೆಸರುಗಳನ್ನು ನಾನು ಬಿಡುಗಡೆ ಮಾಡಬಲ್ಲೆ ಎಂದು ಹೇಳಿದ್ದಾರೆ.

ಸಂಗ್ರಹ ಚಿತ್ರ
ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು BJP ಕಾರಣ: ಸಚಿವ ಸತೀಶ್ ಜಾರಕಿಹೊಳಿ

ಈ ಕುರಿತು ಕ್ರಮ ತೆಗೆದುಕೊಳ್ಳಲು ಸಚಿವರಿಗೆ ಏಳು ದಿನಗಳ ಕಾಲಾವಕಾಶ ನೀಡಲಾಗಿದೆ. ನಂತರವೂ ಕ್ರಮವಾಗದಿದ್ದರೆ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ಗಮನಕ್ಕೆ ತರಲಿದೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಗನ್ನಾಥ್ ಶೇಗಜಿ ಅವರು ಹೇಳಿದ್ದಾರೆ.

‘ರಾಜ್ಯ ಗುತ್ತಿಗೆದಾರರ ಕುಂದುಕೊರತೆ ಮತ್ತು ಬಾಕಿ ಬಿಲ್ ಪಾವತಿ ವಿಳಂಬಕ್ಕೆ ಸಂಬಂಧಿಸಿದ ವಿಷಯಗಳನ್ನು ಹಲವು ಬಾರಿ ನಿಮ್ಮ ಗಮನಕ್ಕೆ ತಂದಿದ್ದೇವೆ. ಆದರೆ, ಇದುವರೆಗೂ ತಾವು ಒಂದು ಪತ್ರವನ್ನೂ ಬರೆದಿಲ್ಲ. ಆದ್ದರಿಂದ ತಾವೂ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲು ಸಭೆ ಕರೆಯಬೇಕು. ಪತ್ರ ತಲುಪಿದ ಏಳು ದಿನಗಳಲ್ಲಿ ಸಭೆ ಕರೆದು ಗುತ್ತಿಗೆದಾರರಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಈ ವಿಷಯವನ್ನು ಮುಖ್ಯಮಂತ್ರಿಯವರ ಗಮನಕ್ಕೆ ತಂದು, ಮುಂದಿನ ಹೋರಾಟ ಆರಂಭಿಸಲಾಗುವುದು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಗುತ್ತಿಗೆದಾರರು ತಮ್ಮ ಕಳವಳಗಳನ್ನು ವ್ಯಕ್ತಪಡಿಸಿ ಏಳು ಸಚಿವರಿಗೆ ಪತ್ರ ಬರೆದಿದ್ದಾರೆ. ಪ್ರತಿಭಟನೆಗಳಿಗೆ ಮುಂದಾಗುತ್ತಿದ್ದಾರೆ. ಸರ್ಕಾರ ಕೂಡಲೇ ಬಾಕಿ ಇರುವ ಬಿಲ್‌ಗಳನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.

ಸಂಘದ ಪತ್ರವು ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಹೇಗೆ ಆಳುತ್ತಿದೆ ಎಂಬುದನ್ನು ತೋರಿಸತ್ತಿದೆ. ಸರ್ಕಾರವು ಶೇಕಡಾ 60 ರಷ್ಟು ಕಮಿಷನ್ ಪಡೆಯುತ್ತಿದೆ. ಆದರೆ, ತಮ್ಮ ಬಿಲ್ ಗಳ ಹಣವನ್ನು ಪಡೆಯಬೇಕಿರುವ ಕಾರಣ ಗುತ್ತಿಗೆದಾರರು ಅದರ ಬಗ್ಗೆ ಬಹಿರಂಗವಾಗಿ ಮಾತನಾಡುತ್ತಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com