ಬೆಂಗಳೂರು: ಈ ಬಾರಿ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ನಡೆಯಲಿಲ್ಲ ಕೌತುಕ! ಭಕ್ತರಿಗೆ ನಿರಾಸೆ

ಇಂದು ಸಂಜೆ ಗವಿಗಂಗಾಧರೇಶ್ವರನ ಮೇಲೆ ದೇಗುಲ ಬಲಭಾಗದ ಕಮಾನಿನಿಂದ ಕಿಟಕಿ ಮೂಲಕ ಸೂರ್ಯ ಕಿರಣಗಳು ಸ್ಪರ್ಶಿಸಬೇಕಿತ್ತು.
GaviGangadhareshwara
ಗವಿಗಂಗಾಧರೇಶ್ವರ
Updated on

ಬೆಂಗಳೂರು: ದೇಶಾದ್ಯಂತ ಮಕರ ಸಂಕ್ರಾಂತಿ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಆದರೆ ಸಿಲಿಕಾನ್ ಸಿಟಿಯ ಗವಿಪುರದಲ್ಲಿರುವ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಈ ಬಾರಿ ವಿಸ್ಮಯ ನಡೆಯದಿರುವುದು ಭಕ್ತರಿಗೆ ನಿರಾಸೆ ಉಂಟು ಮಾಡಿತು.

ಸಾಮಾನ್ಯವಾಗಿ ಪ್ರತಿ ಮಕರ ಸಂಕ್ರಾಂತಿ ದಿನದಲ್ಲಿ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಚಮತ್ಕಾರ ನಡೆಯುತ್ತದೆ. ಇಂದು ಸಂಜೆ ಗವಿಗಂಗಾಧರೇಶ್ವರನ ಮೇಲೆ ದೇಗುಲ ಬಲಭಾಗದ ಕಮಾನಿನಿಂದ ಕಿಟಕಿ ಮೂಲಕ ಸೂರ್ಯ ಕಿರಣಗಳು ಸ್ಪರ್ಶಿಸಬೇಕಿತ್ತು. ಇದನ್ನು ಕಣ್ತುಂಬಿಕೊಳ್ಳಲು ಭಕ್ತರು ಕಾಯುತ್ತಿದ್ದರು. ಈ ವಿಸ್ಮಯ ವೀಕ್ಷಿಸಲು ಭಕ್ತರಿಗಾಗಿ LED ಪರದೆ ಕೂಡ ಹಾಕಲಾಗಿತ್ತು.

ಆದರೆ ಮೋಡ ಕವಿದ ವಾತಾವರಣ ಇದ್ದುದರಿಂದ ಗವಿಗಂಗಾಧರೇಶ್ವರನ ಮೇಲೆ ಸೂರ್ಯ ರಶ್ಮಿ ಸ್ಪರ್ಶ ಮಾಡಲಿಲ್ಲ. ಇತಿಹಾಸದಲ್ಲೇ 3ನೇ ಬಾರಿ ಗವಿ ಗಂಗಾಧರೇಶ್ವರನ ಮೇಲೆ ಸೂರ್ಯ ರಶ್ಮಿ ಸ್ಪರ್ಶ ಬೀಳದಂತೆ ಆಗಿದೆ.

GaviGangadhareshwara
ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ಗವಿ ಗಂಗಾಧರೇಶ್ವರ ದೇಗುಲದಲ್ಲಿ ಕೌತುಕಕ್ಕೆ ಕ್ಷಣಗಣನೆ

ಸೂರ್ಯ ದಕ್ಷಿಣ ಪಥದಿಂದ ಉತ್ತರ ಪಥಕ್ಕೆ ಹೊರಳುವ ಸಮಯದಲ್ಲಿ, ತನ್ನ ಕಿರಣಗಳನ್ನು ಗರ್ಭಗುಡಿಯಲ್ಲಿರುವ ಶಿವಲಿಂಗವನ್ನು ಸ್ಪರ್ಶಿಸುತ್ತಿದ್ದವು. ಇದಕ್ಕಾಗಿ ದೇವಾಲಯದಲ್ಲಿ ಬೆಳಗ್ಗೆ 5 ಗಂಟೆಯಿಂದಲೇ ವಿಶೇಷ ಪೂಜೆ- ಪುನಸ್ಕಾರಗಳು ನಡೆಯುತ್ತಿದ್ದು, ಭಕ್ತರು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು. ಆದರೆ ಈ ಬಾರಿ ಮೋಡ ಕವಿದ ವಾತವಾರಣದಿಂದಾಗಿ ಇದು ಅಗೋಚರವಾಗಿದ್ದು, ಭಕ್ತರಿಗೆ ನಿರಾಸೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com