ಕುಲಪತಿ ನೇಮಕಾತಿ ಕುರಿತ ಯುಜಿಸಿ ನಿಯಮಗಳಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ: ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ

ಕೇಂದ್ರ ಸರ್ಕಾರ ಕರಡು ಮಾರ್ಗಸೂಚಿಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ವಿಶ್ವವಿದ್ಯಾಲಯ ಅನುದಾನ ಆಯೋಗ(ಯುಜಿಸಿ) ನಿಯಮಾವಳಿ-2025 ರ ಕರಡಿನಲ್ಲಿರುವ ಕುಲಪತಿಗಳ ನೇಮಕಾತಿಗೆ ಸಂಬಂಧಿಸಿದ ನಿಬಂಧನೆಗಳನ್ನು ಕರ್ನಾಟಕ ಸರ್ಕಾರ ತೀವ್ರವಾಗಿ ವಿರೋಧಿಸಿದೆ.

ಕೇಂದ್ರ ಸರ್ಕಾರ ಕರಡು ಮಾರ್ಗಸೂಚಿಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದ್ದು, ಕುಲಪತಿಗಳ ನೇಮಕಾತಿಗಳಿಗೆ ಸಂಬಂಧಿಸಿದ ನಿಬಂಧನೆಗಳಿಂದ "ಒಕ್ಕೂಟ ವ್ಯವಸ್ಥೆಗೆ ಧಕ್ಕೆ"ಯಾಗಲಿದೆ ಮತ್ತು ಉನ್ನತ ಶಿಕ್ಷಣವನ್ನು ಸುಧಾರಿಸುವಲ್ಲಿ ರಾಜ್ಯ ಸರ್ಕಾರಗಳು ವಹಿಸುವ ಕಾನೂನುಬದ್ಧ ಪಾತ್ರವನ್ನು ದುರ್ಬಲಗೊಳಿಸುತ್ತದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಯುಜಿಸಿ(ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಲ್ಲಿ ಶಿಕ್ಷಕರು ಮತ್ತು ಶೈಕ್ಷಣಿಕ ಸಿಬ್ಬಂದಿಗಳ ನೇಮಕಾತಿ ಮತ್ತು ಬಡ್ತಿಗಾಗಿ ಕನಿಷ್ಠ ಅರ್ಹತೆಗಳು ಮತ್ತು ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ನಿರ್ವಹಣೆಗಾಗಿ ಕ್ರಮಗಳು) ನಿಯಮಗಳು, 2025 ರ ಕರಡನ್ನು ಸಾರ್ವಜನಿಕ ಸಮಾಲೋಚನೆಗಾಗಿ ಯುಜಿಸಿ ಪ್ರಕಟಿಸಿದೆ. ಈ ಕರಡನ್ನು ಈಗ ಸಾರ್ವಜನಿಕ ಸಮಾಲೋಚನೆಗಾಗಿ ಇಡಲಾಗಿದೆ ಮತ್ತು ಅದರ ನಿಬಂಧನೆಗಳಲ್ಲಿ ಒಂದು ವಿಸಿಗಳ ನೇಮಕಾತಿಗೆ ವ್ಯಾಪಕ ಬದಲಾವಣೆಗಳನ್ನು ಪ್ರಸ್ತಾಪಿಸಿದೆ.

ಸಾಂದರ್ಭಿಕ ಚಿತ್ರ
ಪಶ್ಚಿಮ ಬಂಗಾಳದ ಸರ್ಕಾರಿ ವಿವಿಗಳಿಗೆ ರಾಜ್ಯಪಾಲರ ಬದಲು ಸಿಎಂ ಕುಲಪತಿ, ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

"ತಜ್ಞರೊಂದಿಗೆ ಸಮಾಲೋಚಿಸಿದ ನಂತರ ವಿವರವಾದ ಪ್ರತಿಕ್ರಿಯೆಯನ್ನು ಸೂಕ್ತ ಸಮಯದಲ್ಲಿ ಸಲ್ಲಿಸಲಾಗುವುದು. ಆದರೆ ಕರ್ನಾಟಕ ಸರ್ಕಾರವು ಉನ್ನತ ಶಿಕ್ಷಣ ವ್ಯವಸ್ಥೆ ಮತ್ತು ಉಪಕುಲಪತಿಗಳ ನೇಮಕಾತಿಗೆ ಸಂಬಂಧಿಸಿದ ಕೆಲವು ನಿಬಂಧನೆಗಳನ್ನು ಬಲವಾಗಿ ವಿರೋಧಿಸಲು ಬಯಸುತ್ತದೆ" ಎಂದು ಸುಧಾಕರ್ ಜನವರಿ 13 ರಂದು ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ವಿಶ್ವವಿದ್ಯಾಲಯಗಳು ಮತ್ತು ಉನ್ನತ ಶಿಕ್ಷಣ ಆಡಳಿತದಲ್ಲಿ ರಾಜ್ಯಗಳ ಹಕ್ಕುಗಳನ್ನು ಕಸಿದುಕೊಳ್ಳುವ ಗುರಿಯನ್ನು ಈ ನಿಬಂಧನೆ ಹೊಂದಿದೆ ಮತ್ತು ಇದು ಸ್ವೀಕಾರಾರ್ಹವಲ್ಲ ಎಂದು ಸುಧಾಕರ್ ಹೇಳಿದ್ದಾರೆ.

ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳಲ್ಲಿ ಯಾವುದೇ ಆಮೂಲಾಗ್ರ ಬದಲಾವಣೆಗಳನ್ನು ಪ್ರಸ್ತಾಪಿಸುವ ಮೊದಲು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಚರ್ಚಿಸುವುದರ ಜೊತೆಗೆ, ವಿಶ್ವವಿದ್ಯಾಲಯಗಳು ಎದುರಿಸುತ್ತಿರುವ ಪ್ರಸ್ತುತ ಸ್ಥಿತಿ ಮತ್ತು ಸಮಸ್ಯೆಗಳನ್ನು ನಿರ್ಣಯಿಸಲು ಯುಜಿಸಿ ರಾಜ್ಯ ಸರ್ಕಾರಗಳೊಂದಿಗೆ ಚರ್ಚಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com