ಮುಡಾ ಹಗರಣ: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಹಿರಿಯ ವಕೀಲ ರವಿವರ್ಮ ಕುಮಾರ್, ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರೆ, ಅರ್ಜಿದಾರರ ಪರ ಮಣಿಂದರ್ ಸಿಂಗ್ ವಾದ ಮಂಡಿಸಿದರು.
high court of karnataka
ಕರ್ನಾಟಕ ಹೈಕೋರ್ಟ್‌
Updated on

ಬೆಂಗಳೂರು: 'ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧದ ತನಿಖೆಯನ್ನು ಸಿಬಿಐಗೆ ವಹಿಸಬೇಕು' ಎಂದು ಕೋರಲಾದ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ಜನವರಿ 27ಕ್ಕೆ ಮುಂದೂಡಿದೆ.

ಮುಡಾ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ತನಿಖಾ ವರದಿಯನ್ನು ಜನವರಿ 27ರೊಳಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ಸೂಚಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಹಿರಿಯ ವಕೀಲ ರವಿವರ್ಮ ಕುಮಾರ್, ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರೆ, ಅರ್ಜಿದಾರರ ಪರ ಮಣಿಂದರ್ ಸಿಂಗ್ ವಾದ ಮಂಡಿಸಿದರು.

ವಾದದ ವೇಳೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಮೂಲ ಕಡತಗಳು ನಾಪತ್ತೆಯಾಗಿವೆ ಎಂದು ಸಿಂಗ್ ಆರೋಪಿಸಿದರು.

'ನಾವು ಎಲ್ಲವನ್ನೂ ನಿಭಾಯಿಸುತ್ತೇವೆ. ಆದರೆ, ಮೊದಲು ಲೋಕಾಯುಕ್ತರು ಇಲ್ಲಿಯವರೆಗೆ ದಾಖಲಾಗಿರುವ ಎಲ್ಲದರ ವಿವರಗಳನ್ನು ನೀಡಬೇಕಾಗಿತ್ತು. ಇದುವರೆಗೆ ಮಾಡಿದ ತನಿಖೆಯ ಎಲ್ಲ ವಿವರಗಳನ್ನು ನ್ಯಾಯಾಲಯಕ್ಕೆ ಒದಗಿಸಬೇಕು' ಎಂದು ನ್ಯಾಯಾಲಯ ಹೇಳಿದೆ.

high court of karnataka
ಮುಡಾ ಹಗರಣ: ಸಿದ್ದರಾಮಯ್ಯ ಪತ್ನಿ ವಿರುದ್ಧ 'ಸಾಕ್ಷ್ಯ ಪತ್ತೆ' ಹಚ್ಚಿದ ಇಡಿ; ಸಿಎಂಗೆ ಮತ್ತಷ್ಟು ಸಂಕಷ್ಟ

ಅಂತಿಮವಾಗಿ ಜನವರಿ 27ರೊಳಗೆ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಲೋಕಾಯುಕ್ತರಿಗೆ ನ್ಯಾಯಾಲಯ ಸೂಚಿಸಿದೆ.

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬಿಎಂ ಅವರಿಗೆ ಮುಡಾದಿಂದ 'ಸ್ವಾಧೀನಪಡಿಸಿಕೊಂಡಿರುವ' ಭೂಮಿಗೆ ಹೋಲಿಸಿದರೆ ಮೈಸೂರಿನ ನಗರ ಹೆಚ್ಚಿನ ಆಸ್ತಿ ಮೌಲ್ಯ ಹೊಂದಿರುವ ನಿವೇಶನಗಳನ್ನು ಪರಿಹಾರವಾಗಿ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಮುಡಾ 3.16 ಎಕರೆ ಜಮೀನಿಗೆ ಬದಲಾಗಿ ಪಾರ್ವತಿ ಅವರಿಗೆ 50:50 ಅನುಪಾತದ ನಿವೇಶನಗಳನ್ನು ಮಂಜೂರು ಮಾಡಿತ್ತು. ವಸತಿ ಬಡಾವಣೆಗಳನ್ನು ರೂಪಿಸಲು ಅವರಿಂದ ಸ್ವಾಧೀನಪಡಿಸಿಕೊಂಡಿರುವ ಅಭಿವೃದ್ಧಿಯಾಗದ ಭೂಮಿಗೆ ಬದಲಾಗಿ ಮುಡಾ ಅಭಿವೃದ್ಧಿ ಹೊಂದಿದ ಭೂಮಿಯಲ್ಲಿ ಶೇ 50ರಷ್ಟು ನಿವೇಶನಗಳನ್ನು ಮಂಜೂರು ಮಾಡಿದೆ.

ಕರ್ನಾಟಕ ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯ, ಪಾರ್ವತಿ, ಅವರ ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಏಕಕಾಲಕ್ಕೆ ಜಾರಿ ನಿರ್ದೇಶನಾಲಯ (ಇಡಿ) ಸ್ನೇಹಮಯಿ ಕೃಷ್ಣ ಅವರ ದೂರಿನ ಮೇರೆಗೆ ಹಗರಣದ ತನಿಖೆ ಆರಂಭಿಸಿದೆ.

high court of karnataka
ಮುಡಾ ಹಗರಣಕ್ಕೆ ಹೊಸ ಟ್ವಿಸ್ಟ್: ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಕೇಸ್​ ದಾಖಲು

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com